ರಿವರ್ ರ್ಯಾಪ್ಟಿಂಗ್ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿ ಸಭೆ

0
92

ಮಡಿಕೇರಿ ಜ.05 :-ರಿವರ್ ರ್ಯಾಪ್ಟಿಂಗ್ ನಿರ್ವಹಣೆ ಮತ್ತು ಮೇಲುಸ್ತುವಾರಿ ಸಮಿತಿ ಸಭೆಯು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯಕ್ಷತೆಯಲ್ಲಿ ಬುಧವಾರ ನಡೆಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ದುಬಾರೆ ಕಾವೇರಿ ನದಿಯಲ್ಲಿ ರ್ಯಾಪ್ಟಿಂಗ್ ನಿರ್ವಹಣೆ ಸಂಬಂಧ ತಜ್ಞರ ಸಮಿತಿಯು ಪರಿಶೀಲಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ರಿವರ್ ರ್ಯಾಪ್ಟಿಂಗ್ ಸಂಬಂಧ ಹೆಚ್ಚುವರಿಯಾಗಿ ಸಲ್ಲಿಕೆ ಆಗಿರುವ ಅರ್ಜಿಗಳನ್ನು ಪರಿಶೀಲಿಸಲಾಗುವುದು. ನವೀಕರಣ ಸಂಬಂಧಿಸಿದಂತೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ನಾಗರಾಜು, ಜಿಲ್ಲಾ ಅಗ್ನಿ ಶಾಮಕ ಅಧಿಕಾರಿ ಪಿ.ಚಂದನ್, ದುಬಾರೆ ರಿವರ್ ರ್ಯಾಪ್ಟಿಂಗ್‍ನ ವಸಂತ್ ಅವರು ರಿವರ್ ರ್ಯಾಪ್ಟಿಂಗ್ ನಿರ್ವಹಣೆ ಸಂಬಂಧಿಸಿದಂತೆ ಹಲವು ಮಾಹಿತಿ ನೀಡಿದರು.
ಪ್ರವಾಸೋದ್ಯಮ ಇಲಾಖೆಯ ಸಮಾಲೋಚಕರಾದ ನರ್ತನ್ ಅವರು ಜಿಲ್ಲೆಯ ದುಬಾರೆಯಲ್ಲಿ ಒಟ್ಟು 64 ರಿವರ್ ರ್ಯಾಪ್ಟಿಂಗ್‍ಗಳು ಕಾರ್ಯನಿರ್ವಹಿಸುತ್ತಿವೆ. ಈಗ ಹೆಚ್ಚುವರಿಯಾಗಿ 32 ರಿವರ್ ರ್ಯಾಪ್ಟಿಂಗ್ ಪರವಾನಗಿಗೆ ಅರ್ಜಿ ಸಲ್ಲಿಕೆಯಾಗಿವೆ ಎಂದು ಮಾಹಿತಿ ನೀಡಿದರು. ಯುವ ಸಬಲೀಕರಣ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಜಿ.ಎಸ್.ಗುರುಸ್ವಾಮಿ, ಲೀಡ್ ಬ್ಯಾಂಕ್ ವ್ಯವಸ್ಥಾಪಕರಾದ ಬಾಲಚಂದ್ರ, ಪಿಡಬ್ಲ್ಯುಡಿ ಎಇಇ ಶಿವರಾಮ್, ನಂಜರಾಯಪಟ್ಟಣ ಪಿಡಿಒ ಇತರರು ಇದ್ದರು.

LEAVE A REPLY

Please enter your comment!
Please enter your name here