ಸಂಸದರ ಅಧ್ಯಕ್ಷತೆ ದಿಶಾ ಸಭೆ, ನರೇಗಾದಡಿ ಮಾನವ ದಿನಗಳ ಸೃಜಿಸಿ, ಗುರಿ ಪೂರ್ಣಗೊಳಿಸಿ: ರಾಜ ಅಮರೇಶ್ವರ ನಾಯಕ

0
131

ರಾಯಚೂರು,ಜ.05 :- ಮಹಾತ್ಮ ಗಾಂಧಿ ರಾಷ್ಟಿçಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ (ನರೇಗಾ) ಯಡಿಯಲ್ಲಿ ಜಿಲ್ಲೆಗೆ ಹೆಚ್ಚಿನ ಮಟ್ಟದಲ್ಲಿ ಮಾನವ ದಿನಗಳನ್ನು ಸೃಜಿಸಿ, ಗುರಿಯನ್ನು ಪೂರ್ಣಗೊಳಿಸುವ ಮೂಲಕ ಶೇ 100ರಷ್ಟು ಸಾಧನೆ ಮಾಡಬೇಕು ಎಂದು ರಾಯಚೂರು ಸಂಸದ ರಾಜಾ ಅಮರೇಶ್ವರ ನಾಯಕ ಹೇಳಿದರು.

ಅವರು ಜ.05ರ ಬುಧವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರತಿಯೊಬ್ಬರಿಗೂ ಉದ್ಯೋಗ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನರೇಗಾ ಯೋಜನೆ ಜಾರಿ ಮಾಡಿದೆ. ಗ್ರಾಮೀಣ ಭಾಗದ ಜನರಿಗೆ ಇದು ಅತ್ಯಂತ ಉತ್ತಮ ಯೋಜನೆಯಾಗಿದ್ದು, ಜಿಲ್ಲೆಯಾದ್ಯಂತ ಇದನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲು ಅಧಿಕಾರಿಗಳು ಸೂಕ್ತ ಕ್ರಮಕೈಗೊಳ್ಳಬೇಕು ಎಂದರು.

ಹೋಬಳಿ ಕೇಂದ್ರಗಳಲ್ಲಿ ಕೃಷಿ ಯಂತ್ರಧಾರೆ ಯೋಜನೆಯಡಿ ಅಗತ್ಯವಿರುವ ರೈತರಿಗೆ ಸಕಾಲಕ್ಕೆ ಟ್ರ‍್ಯಾಕ್ಟರ್, ಟಿಲ್ಲರ್, ರೋಟಾವೇಟರ್ ನಂತಹ ಯಂತ್ರಗಳು ದೊರೆಯುವಂತೆ ವ್ಯವಸ್ಥೆ ಮಾಡಿಬೇಕೆಂದು ಅಲ್ಲದೆ ಇಲಾಖೆಯ ಸೌಲಭ್ಯಗಳ ಕುರಿತು ಹೆಚ್ಚಿನ ಮಟ್ಟದಲ್ಲಿ ಜಾಗೃತಿ ಮೂಡಿಸುವ ಕೆಲಸವಾಗಬೇಕೆಂದು ಸಂಸದರು ಕೃಷಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗ್ರಾಮೀಣ ಭಾಗದಲ್ಲಿ ಶುದ್ಧ ಕುಡಿಯುವ ನೀರು ಪೂರೈಸಬೇಕೆಂಬ ಉದ್ದೇಶದಿಂದ ಕೇಂದ್ರ ಸರ್ಕಾರವು ಜಲ ಜೀವನ್ ಮಿಷನ್ ಯೋಜನೆ ಆರಂಭಿಸಿದೆ. ಇದರಡಿ ಪ್ರತಿ ಗ್ರಾಮಕ್ಕೂ ಪೈಪ್‌ಲೈನ್ ಅಳವಡಿಸಿ ನಳ ಸಂಪರ್ಕದ ಮೂಲಕ ಕುಡಿಯುವ ನೀರು ಒದಗಿಸಬೇಕೆಂದು ಸಂಬAಧಿಸಿದ ಅಧಿಕಾರಿಗಳಿಗೆ ಕೊಪ್ಪಳ ಸಂಸದ ಸಂಗಣ್ಣ ಕರಡಿ ಅವರು ಸೂಚನೆ ನೀಡಿದರು.

ಈ ವೇಳೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ರಾಮಕೃಷ್ಣ ಅವರು ಮಾತಾನಾಡಿ, ಭಾರತ ಸರ್ಕಾರದಿಂದ ಲಸಿಕಾ ಅಭಿಯಾನ ಜಾರಿಗೊಳಿಸಿದ್ದು, ಅರ್ಹರೆಲ್ಲರೂ ಲಸಿಕೆ ಪಡೆಯಬೇಕು ಎಂಬ ಉದ್ದೇಶದಿಂದ ಶಾಲಾ-ಕಾಲೇಜುಗಳಲ್ಲಿ ಅಥವಾ ಹತ್ತಿರದ ಕೋವಿಡ್-19ರ ಲಸಿಕಾ ಕೇಂದ್ರದಲ್ಲಿ 15ರಿಂದ 18ವರ್ಷದ ಮಕ್ಕಳಿಗೆ ಲಸಿಕೆ ನೀಡಲಾಗುತ್ತಿದೆ. ಅಲ್ಲದೆ ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಪಡೆಯುವಲ್ಲಿ ಮುಂದಿನ ದಿನಗಳಲ್ಲಿ ಉತ್ತಮ ಸಾಧನೆ ಮಾಡಲಿದೆ. ಪ್ರಥಮ ಡೋಸ್ ಪಡೆದವರಲ್ಲಿ ಶೇ.96%ಕ್ಕಿಂತ ಹೆಚ್ಚು ಹಾಗೂ ದ್ವಿತೀಯ ಡೋಸ್ ಪಡೆದವರಲ್ಲಿ ಶೇ.71%ರಷ್ಟು ಸಾಧನೆ ಮಾಡಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ರಾಯಚೂರು ನಗರ ಕ್ಷೇತ್ರದ ಶಾಸಕ ಡಾ.ಶಿವರಾಜ ಪಾಟೀಲ್, ಗ್ರಾಮೀಣ ಕ್ಷೇತ್ರದ ಶಾಸಕ ಬಸವರಾಜ ದದಲ್, ದಿಶಾ ಸಮಿತಿಯ ನಾಮನಿರ್ದೇಶನ ಸದಸ್ಯರಾದ ನಾಗಪ್ಪ ನಾಯಕ ವಕೀಲರು, ಸಂಗೀತಾ ಜಗತಾಜ್, ಕೃಷ್ಣ ರಾಠೋಡ, ಜಿಲ್ಲಾಧಿಕಾರಿ ಡಾ.ಅವಿನಾಶ್ ರಾಜೇಂದ್ರ ಮೆನನ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೂರಜಹಾನ್ ಖಾನಂ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

ಹಟ್ಟಿ ಪಟ್ಟಣ ಪಂಚಾಯತಿ: ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗೆ ಅರ್ಜಿ ಆಹ್ವಾನ

ರಾಯಚೂರು,ಜ.05:- ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಹಟ್ಟಿ ಪಟ್ಟಣ ಪಂಚಾಯತಿ ವತಿಯಿಂದ ದೀನದಯಾಳ್ ಅಂತ್ಯೋದಯ ಯೋಜನೆ- ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ (ಡೇ-ನಲ್ಮ್) ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಹುದ್ದೆಗಳನ್ನು ಸೃಜಿಸಿ ಗೌರವಧನ ಆಧಾರದ ಮೇಲೆ ತಾತ್ಕಲಿಕವಾಗಿ ಮಹಿಳೆಯರಿಗೆ ಮಾತ್ರ ನೇಮಕಾತಿ ಮಾಡಿಕೊಳ್ಳಲು ಅರ್ಹ ಸ್ವ-ಸಹಾಯ ಸಂಘಗಳ ಸದಸ್ಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಆಯ್ಕೆಮಾಡಲಾಗುವುದು. ಸಮಿತಿ ನಿರ್ಣಯವೇ ಅಂತಿಮವಾಗಿದ್ದು, ಆಸಕ್ತ ಅಭ್ಯರ್ಥಿಗಳು ಕಾರ್ಯಾಲಯದ ಅವಧಿಯಲ್ಲಿ ಸಮುದಾಯ ಸಂಘಟನಾಧಿಕಾರಿ ಅವರನ್ನು ಸಂಪರ್ಕಿಸಿ ನಿಗದಿಪಡಿಸಿದ ಅರ್ಜಿ ನಮೂನೆಯನ್ನು ದೃಢೀಕೃತ ದಾಖಲೆಗಳೊಂದಿಗೆ ಜ.20ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅವಧಿ ಮೀರಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಹಟ್ಟಿ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗಳು ಪ್ರಕಟಣೆ ತಿಳಿಸಿದ್ದಾರೆ.

ಸಾಧನ-ಸಲಕರಣೆ ವಿತರಣೆ: ವಿಕಲಚೇತನರಿಗೆ ವೈದ್ಯಕೀಯ ತಪಾಸಣಾ ಶಿಬಿರ

ರಾಯಚೂರು,ಜ.05 :- ಬೆಂಗಳೂರಿನ ಅಲಿಂಕೋ ಕಂಪನಿ ಅವರ ಸಿಎಸ್‌ಆರ್ ಕ್ಯಾಂಪ್ ಯೋಜನೆಯಡಿ ಜಿಲ್ಲೆಯಲ್ಲಿ ವಿಕಲಚೇತನರಿಗೆ ಅವಶ್ಯಕವಿರುವ ವಿವಿಧ ಬಗೆಯ ಸಾಧನ-ಸಲಕರಣೆಗಳನ್ನು ವಿತರಣೆ ಮಾಡಲು ಸಂಬAಧಿಸಿದAತೆ ವೈದ್ಯಕೀಯ ತಪಾಸಣಾ ಶಿಬಿರಗಳನ್ನು ಆಯೋಜಿಸಲಾಗಿದ್ದು, ವಿಕಲಚೇತನ ಫಲಾನುಭವಿಗಳು ಶಿಬಿರಗಳಲ್ಲಿ ಭಾಗವಹಿಸಲು ಕೋರಲಾಗಿದೆ.

ವೈದ್ಯಕೀಯ ತಪಾಸಣಾ ಶಿಬಿರವು ಜ.07ರಂದು ರಾಯಚೂರಿನ ಮಾಣಿಕ್ ಪ್ರಭು ಅಂಧ ಮಕ್ಕಳ ಶಾಲೆಯಲ್ಲಿ ಹಮ್ಮಿಕಳ್ಳಲಾಗಿದ್ದು, ಎಂ.ಆರ್.ಡಬ್ಲೂö್ಯ ಸಿ.ಅಮರೇಶ ಯಾದವ್ ಅವರ ದೂರವಾಣಿ ಸಂಖ್ಯೆ: 9972237508, ಮಾನವಿ ಹಾಗೂ ಸಿರವಾರ ತಾಲೂಕಿನಲ್ಲಿ ಜ.08ರಂದು ಮಾನವಿಯ ತಾಲೂಕು ಪಂಚಾಯತ್ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದು, ಹನುಮಂತ ಕಪಗಲ್ ಅವರ ದೂರವಾಣಿ ಸಂಖ್ಯೆ: 9731048279, ಸಿಂಧನೂರು ತಾಲೂಕಿನಲ್ಲಿ ಜ.10ರಂದು ತಾಲೂಕು ಪಂಚಾಯತ್ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದು, ಬಸವರಾಜ ಸಾಸಲಮಾರಿ ಅವರ ದೂರವಾಣಿ ಸಂಖ್ಯೆ:9900298217, ದೇವದುರ್ಗ ತಾಲೂಕಿನಲ್ಲಿ ಜ.11ರಂದು ಗುರು ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದು, ಲೋಕಪ್ಪ ನೂರು ನಾಯ್ಕೆ ಅವರ ದೂರವಾಣಿ ಸಂಖ್ಯೆ: 9945207693, ಲಿಂಗಸೂಗೂರು ತಾಲೂಕಿನಲ್ಲಿ ಜ.12ರಂದು ಲಿಂಗಸೂಗೂರಿನ ನವಜೀವನ ಅಂಗವಿಕಲರ ಅಭಿವೃದ್ಧಿ ಸಂಸ್ಥೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಮಸ್ಕಿ ತಾಲೂಕಿನಲ್ಲಿ ಜ.13ರಂದು ತಾಲೂಕು ಪಂಚಾಯತ್ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದು, ನಾಗರಾಜ ನಾಡಗೌಡ ಅವರ ದೂರವಾಣಿ ಸಂಖ್ಯೆ: 9901668380ಗೆ ಸಂಪರ್ಕ ಮಾಡಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಆಯಾ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಭೇಟಿಯಾಗಿ ಮಾಹಿತಿ ಪಡೆಯಬಹುದಾಗಿದೆ ಎಂದು ಜಿಲ್ಲಾ ಅಂಗವಿಲಕರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here