ಕೋವಿಡ್-19ರ ಮುನ್ನೆಚ್ಚರಿಕೆ ಲಸಿಕೆ ಪಡೆಯಿರಿ ಲಸಿಕೆ ಸುರಕ್ಷತೆ ಮತ್ತಷ್ಟು ಹೆಚ್ಚಾಗಲಿದೆ; ತಹಶೀಲ್ದಾರ್ ವಿಶ್ವಜಿತ್ ಮೆಹತಾ

0
286

ಸಂಡೂರು:ಜ:10:ಎಲ್ಲರೂ ಸೂಕ್ತ ಸಮಯದಲ್ಲಿ ಕೋವಿಡ್-19 ರ ಮುನ್ನೆಚ್ಚರಿಕೆ ಡೋಸ್ ಪಡೆಯಿರಿ,ಲಸಿಕೆಯಿಂದ ಸುರಕ್ಷತೆ ಮತ್ತಷ್ಟು ಹೆಚ್ಚಾಗಲಿದೆ ಎಂದು ತಹಶಿಲ್ದಾರ್ ವಿಶ್ವಜಿತ್ ಮೆಹತಾ ತಿಳಿಸಿದರು.

ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯೋಜಿಸಲಾದ ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರು ಹಾಗೇ 60 ವರ್ಷ ಮೇಲ್ಪಟ್ಟ ಅಸ್ವಸ್ಥತೆಯ ಹಿರಿಯ ನಾಗರಿಕರ ಲಸಿಕಾಕರಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಭಾರತ ಸರ್ಕಾರದ ಆದೇಶದಂತೆ ಇಂದು ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ ಮೇಲ್ಪಟ್ಟ ವಯಸ್ಸಿನ ಸಹ ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ನಾಗರಿಕರಿಗೆ ಕೋವಿಡ್-19 ಮುನ್ನೆಚ್ಚರಿಕೆ ಡೋಸ್ ಲಸಿಕೆ ನೀಡಲಾಗುತ್ತಿದೆ, ಇದು ಮಹತ್ವದ ನಿರ್ಧಾರವಾಗಿದೆ, ಲಸಿಕೆಯ ಸದುಪಯೋಗ ಅರ್ಹ ಫಲಾನುಭವಿಗಳು ಪಡೆದು ಕೊಳ್ಳಬೇಕು ಎಂದು ತಿಳಿಸಿದರು,

ದಿನದಿಂದ ದಿನಕ್ಕೆ ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿವೆ ಮತ್ತೊಮ್ಮೆ ಎಲ್ಲಾ ಆರೋಗ್ಯ ಕಾರ್ಯಕರ್ತರು ಹಾಗೇ ಮುಂಚೂಣಿ ಕಾರ್ಯಕರ್ತರು ಸಮರೋಪಾದಿಯಲ್ಲಿ ಹೋರಾಟ ಮಾಡಬೇಕಿದೆ, ಎಲ್ಲರೂ ಕೂಡಿ ಕೋವಿಡ್ ನಿಯಂತ್ರಿಸೋಣ, ಮಾಸ್ಕ್ ಧರಿಸುವುದು, ಕೈತೊಳೆಯುವುದು, ಅಂತರ ಕಾಪಾಡುವುದು ಇನ್ನೊಂದು ವಿಧದಲ್ಲಿ ಲಸಿಕೆ ಇದ್ದಂತೆ ಹಾಗೆ ಎಲ್ಲಾ ಕಡೆ ಕೋವಿಡ್ ನಿಯಮಾವಳಿಗಳನ್ನು ತಪ್ಪದೇ ಪಾಲಿಸುವಂತೆ ನೋಡಿಕೊಳ್ಳೋಣ ಎಂದು ತಿಳಿಸಿದರು,

ಈ ಸಂದರ್ಭದಲ್ಲಿ ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ರಾಮಶೆಟ್ಟಿ,
ಡಾ.ಚಂದ್ರಪ್ಪ, ಕಂದಾಯ ನಿರೀಕ್ಷಕ ಈಶ್ವರ್, ಆರೋಗ್ಯ ಸುರಕ್ಷಾಧಿಕಾರಿ ಅನುಷಾ, ಶಾಂತ, ಕೌನ್ಸಲರ್ ನಾಗಭೂಷಣ್, ಅಕೌಂಟೆಂಟ್ ಕೊಟ್ರೇಶ್ ಇತರರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here