ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

0
865

ಬಳ್ಳಾರಿ,ಜ.12: ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾ ಕೇಂದ್ರ ಗ್ರಂಥಾಲಯದ ವ್ಯಾಪ್ತಿಯಲ್ಲಿ ಬರುವ ವಿವಿಧ ತಾಲೂಕಿನ ಗ್ರಾಮ ಪಂಚಾಯಿತಿ ಮತ್ತು ಪಟ್ಟಣ ಪಂಚಾಯಿತಿ ಗ್ರಂಥಾಲಯಗಳಲ್ಲಿ ಗೌರವ ಸಂಭಾವನೆ ಆಧಾರದ ಮೇಲೆ ಖಾಲಿ ಇರುವ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಬಳ್ಳಾರಿ ತಾಲೂಕಿನ ಸಿರಿವಾರ,
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿ ಪಟ್ಟಣ ಪಂಚಾಯತಿ,
ಹರಪನಹಳ್ಳಿ ತಾಲೂಕಿನ ಅರಸಿಕೆರೆ, ಹಗರಿಬೊಮ್ಮನಹಳ್ಳಿ ತಾಲೂಕಿನ ಬನ್ನಿಕಲ್ಲು, ಹಡಗಲಿ ತಾಲೂಕಿನ ಕಾಲ್ವಿ(ಪಶ್ಚಿಮ) ಹಾಗೂ ಕೂಡ್ಲಿಗಿ ತಾಲೂಕಿನ ಬಡೇಲಡಕುಗಳಲ್ಲಿ ಗ್ರಂಥಾಲಯಗಳ ಮೇಲ್ವಿಚಾರಕರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಯು ಎಸ್.ಎಸ್.ಎಲ್.ಸಿ ಯಲ್ಲಿ ಉತ್ತೀರ್ಣನಾಗಿರಬೇಕು. ಸ್ಥಳೀಯ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿರಬೇಕು. (ನಿವಾಸಿ ಧೃಡೀಕರಣ ಪತ್ರ ಲಗತ್ತಿಸಬೇಕು).ಗ್ರಾಮೀಣ ಅಭ್ಯರ್ಥಿ ಪ್ರಮಾಣ ಪತ್ರ ಸಲ್ಲಿಸಬೇಕು.ನಿಗದಿ ಪಡಿಸಿದ ಮೀಸಲಾತಿಗೆ ಒಳಪಡುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು. ಭರ್ತಿ ಮಾಡಿದ ಸೂಕ್ತ ದಾಖಲಾತಿ (ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಟಿ.ಸಿ, ಜಾತಿ ಪ್ರಮಾಣ ಪತ್ರ, ಸ್ಥಳೀಯ ನಿವಾಸಿ ದೃಡೀಕರಣ ಪತ್ರ, ಅಂಗವಿಕಲತೆ ಇದ್ದಲ್ಲಿ ದೃಡೀಕರಣ ಪತ್ರ) ಇತ್ಯಾದಿಗಳೊಂದಿಗೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮತ್ತು ಕಾರ್ಯದರ್ಶಿಗಳಿಗೆ ಅರ್ಜಿಗಳನ್ನು ಭರ್ತಿ ಮಾಡಿ ಫೆ.15ರೊಳಗಾಗಿ ಆಯಾ ಗ್ರಾಪಂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಕಾರ್ಯದರ್ಶಿ ಅಥವಾ ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿಗಳಿಗೆ ಸಲ್ಲಿಸಬೇಕು.

ವಯೋಮಿತಿ ಅರ್ಜಿಗಳನ್ನು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು 18 ವರ್ಷವನ್ನು ಪೂರೈಸಿರಬೇಕು(ಸಾಮಾನ್ಯ ಅಭ್ಯರ್ಥಿ 33 ವರ್ಷ, 2ಎ 2ಬಿ 3ಎ 3ಬಿ 36 ವರ್ಷ, ಪ.ಜಾತಿ/ಪ.ಪಂಗಡ/ಪ್ರ.ವರ್ಗ1 38 ವರ್ಷ). ಗ್ರಂಥಾಲಯ ವಿಜ್ಞಾನದಲ್ಲಿ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೇಂದ್ರ ಗ್ರಂಥಾಲಯ ಬಳ್ಳಾರಿ ಕಛೇರಿಗೆ ಸಂರ್ಪಕಿಸಬಹುದಾಗಿದೆ.

LEAVE A REPLY

Please enter your comment!
Please enter your name here