ದಾವಣಗೆರೆ ಅಭಿವೃದ್ಧಿ ಕುರಿತಂತೆ ಬೆಂಗಳೂರಿನಲ್ಲಿ ಸಭೆ.

0
127

ದಾವಣಗೆರೆ ಜ. 18 .ನಗರಾಭಿವೃದ್ಧಿ ಇಲಾಖೆ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಎ.ಬಸವರಾಜ (ಭೈರತಿ) ಅವರ ಅಧ್ಯಕ್ಷತೆಯಲ್ಲಿ ದಾವಣಗೆರೆ ಮಹಾನಗರ ಪಾಲಿಕೆ, ದಾವಣಗೆರೆ ನಗರಾಭಿವೃದ್ಧಿ ಪ್ರಾಧಿಕಾರ, ಮತ್ತು ದಾವಣಗೆರೆ ನಗರ ಮತ್ತು ಗ್ರಾಮಾಂತರ ಯೋಜನೆ ಸೇರಿದಂತೆ ಸಮಗ್ರ ಅಭಿವೃದ್ಧಿಗೆ ಸಂಬಂಧಿಸಿದಂತೆ ಮತ್ತು ಸರ್ಕಾರದ ಮಟ್ಟದಲ್ಲಿ ಬಾಕಿ ಉಳಿದ ಜಿಲ್ಲೆಯ ಯೋಜನೆಗಳ ಕುರಿತು ಬೆಂಗಳೂರಿನ ವಿಧಾನಸೌಧದಲ್ಲಿನ ಸಚಿವರ ಕಚೇರಿಯಲ್ಲಿ ಮಂಗಳವಾರದಂದು ಸಭೆ ನಡೆಯಿತು.
ಸಭೆಯಲ್ಲ್ಲಿ ಸಂಸದ ಡಾ. ಜಿ.ಎಂ.ಸಿದ್ದೇಶ್ವರ, ಧೂಡ ಅಧ್ಯಕ್ಷ ದೇವರಮನೆ ಶಿವಕುಮಾರ್, ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಎಂ.ಎನ್.ಅಜಯ್ ನಾಗಭೂಷಣ, ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕಿ ಎಂ.ಎಸ್.ಅರ್ಚನಾ, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶನಾಲಯದ ನಿರ್ದೇಶಕ ಎನ್. ಶಶಿಕುಮಾರ್, ಪೌರಾಡಳಿತ ನಿರ್ದೇಶನಾಲಯದ ಮುಖ್ಯ ಅಭಿಯಂತರ ಸತ್ಯನಾರಾಯಣ, ದಾವಣಗೆರೆ ಮಹಾನಗರ ಪಾಲಿಕೆ, ಧೂಡ ಆಯುಕ್ತರು ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here