ಜಿಲ್ಲಾ ಆಸ್ಪತ್ರೆಯಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನ ಆಚರಣೆ

0
119

ಕಲಬುರಗಿ,ಜ.24 -ಕಲಬುರಗಿ ಜಿಲ್ಲಾ ಆಸ್ಪತ್ರೆಯಲ್ಲಿ ಸೋಮವಾರದಂದು ಹೆಣ್ಣು ಮಗು ಜನನವಾಗಿರುವ ತಾಯಂದಿರಿಗೆ ಸಿಹಿ ಹಂಚುವ ಹಾಗೂ ಹಣ್ಣು ಹಂಪಲುಗಳನ್ನು ವಿತರಿಸುವ ಮೂಲಕ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.
ಹೆಣ್ಣು ಮಗುವಿನ ಸರ್ವಾಂಗೀಣ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರವು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಹೆಣ್ಣು ಮಗುವನ್ನು ಸಮಾಜವು ನೋಡುವ ದೃಷ್ಟಿಕೋನವನ್ನು ಉತ್ತಮ ಪಡಿಸಲು ಹಾಗೂ ಹೆಣ್ಣು ಮಕ್ಕಳ ಪ್ರಾಮುಖ್ಯತೆ ಕುರಿತು ಅರಿವು ಮೂಡಿಸಲು ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಇದಲ್ಲದೇ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಮತ್ತು ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಪಿಂಕ್ ಲೈಟಿಂಗ್ ಹಚ್ಚುವ ಮೂಲಕ ಹೆಣ್ಣು ಮಕ್ಕಳ ಪ್ರಾಮುಖ್ಯತೆ ಕುರಿತು ಅರಿವು ಮೂಡಿಸಲಾಯಿತು. ಜಿಲ್ಲಾ ಮಟ್ಟದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆಗಳಲ್ಲಿಯೂ ಸಹ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಲಬುರಗಿ ಸಹಾಯಕ ಆಯುಕ್ತೆ ಮೋನಾ ರೂಟ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶರಣಬಸಪ್ಪ ಗಣಜಲಖೇಡ, ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಜ್ಞರು ಹಾಗೂ ಅಧೀಕ್ಷಕ ಡಾ.ಎ.ಎಸ್. ರುದ್ರವಾಡಿ, ಜಿಲ್ಲಾ ಕುಟುಂ ಕಲ್ಯಾಣ ಅಧಿಕಾರಿ ಹಾಗೂ ಪಿ.ಸಿ.ಪಿ.ಎನ್.ಡಿ.ಟಿ. ನೋಡಲ್ ಅಧಿಕಾರಿ ಡಾ. ಶರಣಬಸಪ್ಪ ಕ್ಯಾತನಾಳ್, ಎಲ್ಲಾ ಹಿರಿಯ ಸ್ತ್ರೀರೋಗ ತಜ್ಞ ವೈದ್ಯಾಧಿಕಾರಿಗಳು, ಜಿಲ್ಲಾ ಆಸ್ಪತ್ರೆಯ ನರ್ಸಿಂಗ್ ಅಧಿಕಾರಿಗಳು, ಐ.ಇ.ಸಿ. ವಿಭಾಗದ ಅಧಿಕಾರಿಗಳು ಹಾಗೂ ಪಿ.ಸಿ.ಪಿ.ಎನ್.ಡಿ.ಸಿ. ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here