ಬಳ್ಳಾರಿ ಡಿಎಚ್‌ಒ ಕಚೇರಿಯಲ್ಲಿ ರಾಷ್ಟ್ರೀಯ ಹೆಣ್ಮಕ್ಕಳ ದಿನ ಆಚರಣೆ

0
95

ಬಳ್ಳಾರಿ,ಜ.25: ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ನಿಮಿತ್ತ ಬಳ್ಳಾರಿಯ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿಗಳ ಕಚೇರಿ ಆವರಣದಲ್ಲಿ ಸೋಮವಾರ ಸಂಜೆ ನಡೆದ ಪಿಂಕ್ ಲೈಟಿಂಗ್(ನೈಟ್) ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಹೆಣ್ಣುಮಕ್ಕಳ ದಿನ ಆಚರಿಸಲಾಯಿತು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಎಲ್.ಜನಾರ್ಧನ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಬಸರೆಡ್ಡಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಪೂರ್ಣಿಮಾ ಕಟ್ಟಿಮನಿ, ತಾಲೂಕು ಆರೋಗ್ಯ ಅಧಿಕಾರಿ ಡಾ.ಮೋಹನಕುಮಾರಿ,ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ್, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ
ಗೋಪಾಲ್, ಅರುಣ್ ಕುಮಾರ್ ಮತ್ತಿತರರು ಪಾಲ್ಗೊಂಡಿದ್ದರು.
ಹೆಣ್ಮಕ್ಕಳ ಮಹತ್ವ ಸಾರುವ ಸಂದೇಶ ಫಲಕಗಳನ್ನು ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು.

LEAVE A REPLY

Please enter your comment!
Please enter your name here