ಹೆಣ್ಣು ಮಕ್ಕಳ ಶಿಕ್ಷಣ, ಆರೋಗ್ಯ, ಪೌಷ್ಠಿಕತೆ ಜಾಗೃತಿ ಅಗತ್ಯ;- ಡಿಹೆಚ್‍ಓ ಡಾ.ಬಿ.ಸಿ.ಕರಿಗೌಡರ

0
138

ಧಾರವಾಡ:ಜ.27: ಹೆಣ್ಣು ಮಕ್ಕಳ ಶಿಕ್ಷಣ, ಆರೋಗ್ಯ, ಪೌಷ್ಠಿಕತೆ ಸೇರಿದಂತೆ ಸರ್ವಾಂಗೀಣ ಅಭಿವೃದ್ಧಿ ನಿಟ್ಟಿನಲ್ಲಿ ಬಾಲಕಿಯರಿಗೆ ಸುರಕ್ಷತೆ ಒದಗಿಸಿ ಶಿಕ್ಷಣದ ಬಗ್ಗೆ ಅರಿವು ಮೂಡಿಸಲು ಎಲ್ಲರೂ ಸಂಕಲ್ಪ ಮಾಡಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಸನಗೌಡ ಚಂದ್ರಗೌಡ ಕರಿಗೌಡರ ಸಲಹೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾಹಿತಿ, ಶಿಕ್ಷಣ, ಸಂಪರ್ಕ ವಿಭಾಗ, ತಾಲೂಕಾ ಆರೋಗ್ಯಾಧಿಕಾರಿಗಳ ಕಚೇರಿ ಹಾಗೂ ಜಿಗಳೂರು ಮಹಿಳಾ ಮಹಾವಿದ್ಯಾಲಯ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ನಡೆದ ಹೆಣ್ಣು ಮಕ್ಕಳ ಪ್ರಾಮುಖ್ಯತೆ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಹೆಣ್ಣು ಮಗುವನ್ನು ನೋಡುವ ದೃಷ್ಠಿಕೋನ ಬದಲಾಗಬೇಕು. ಗರ್ಭಧಾರಣೆ ಪೂರ್ವ ಮತ್ತು ಪ್ರಸವ ಪೂರ್ವ ಪತ್ತೆ ತಂತ್ರ ವಿಧಾನ, ಲಿಂಗ ಆಯ್ಕೆ ನಿಷೇಧ ಕಾಯ್ದೆ ಪ್ರಕಾರ ಭ್ರೂಣ ಲಿಂಗ ಪತ್ತೆ ಶಿಕ್ಷಾರ್ಹ ಅಪರಾಧವಾಗಿದ್ದು, ದೇಶದಲ್ಲಿ ಹೆಣ್ಣುಮಕ್ಕಳು ಎದುರಿಸುತ್ತಿರುವ ಅಸಮಾನತೆ ಕುರಿತು ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಹೆಣ್ಣು ಮಕ್ಕಳ ಶಿಕ್ಷಣ, ಆರೋಗ್ಯ ಹಾಗೂ ಪೌಷ್ಠಿಕತೆ ಕುರಿತು ಜಾಗೃತಿ ಮೂಡಿಸಲು ಹೆಣ್ಣು ಭ್ರೂಣ ಹತ್ಯೆ ತಡೆದು ಆರೋಗ್ಯಕರ ಲಿಂಗಾನುಪಾತ ಕಾಪಾಡಬೇಕು. ಕುಟುಂಬ, ಕೆಲಸದ ಸ್ಥಳ, ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ತಡೆಯಲು ಬಗ್ಗೆ ಸಮುದಾಯದಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದು ತಿಳಿಸಿದರು.

ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ. ಎಸ್.ಎಮ್. ಹೊನಕೇರಿ ಮಾತನಾಡಿ, ಹೆಣ್ಣು ಮಕ್ಕಳು ಯಾವುದರಲ್ಲೂ ಕಡಿಮೆ ಇಲ್ಲ. ಪುರುಷರಂತೆ ಸರಿಸಮಾನರು, ಮಕ್ಕಳು ಹೆಣ್ಣಾಗಲಿ ಅಥವಾ ಗಂಡಾಗಲಿ ಸಮಾನವಾಗಿ ಸ್ವೀಕರಿಸಬೇಕು. ಮಹಿಳೆ ಗರ್ಭಧರಿಸಿದಾಗ ಗರ್ಭದಲ್ಲಿ ಬೆಳೆಯುತ್ತಿರುವ ಭ್ರೂಣವು ಹೆಣ್ಣೋ ಅಥವಾ ಗಂಡೋ ಎಂದು ತಿಳಿಯಲು ಒತ್ತಾಯಿಸಿದ ಕುಟುಂಬದ ಸದಸ್ಯರು ಪರೀಕ್ಷೆ ಮಾಡಿದ ಲ್ಯಾಬ್‍ನವರಿಗೂ ದಂಡ ಮತ್ತು ಶಿಕ್ಷೆಯೊಂದಿಗೆ ಲೈಸನ್ಸ್ ರದ್ದು ಮಾಡಲಾಗುತ್ತದೆ. ಭ್ರೂಣ ಪರೀಕ್ಷೆ ಮಾಡಿಸುವುದು, ಭ್ರೂಣ ಹತ್ಯೆ ಮಾಡಿಸುವುದು, ಮತ್ತು ಭ್ರೂಣ ಹತ್ಯೆ ಮಾಡುವುದು ಅಕ್ಷಮ್ಯ ಅಪರಾಧವಾಗುತ್ತದೆ. ಎಂದು ಅಭಿಪ್ರಾಯಪಟ್ಟರು.

ಕಾಲೇಜಿನ ಪ್ರಾಂಶುಪಾಲ ಡಾ. ಗಿರಿಜಾ ಯಂಬಣ್ಣವರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್.ಬಿ. ನಿಂಬಣ್ಣವರ, ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ ಡಾ. ಅಯ್ಯನಗೌಡ ಪಾಟೀಲ, ತಾಲೂಕಾ ಆರೋಗ್ಯಾಧಿಕಾರಿ ಡಾ. ತನುಜಾ ಕೆ.ಎನ್. ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಆರ್. ಪಾತ್ರೋಟ, ಉಪಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಮ್.ಎನ್. ಅಗಡಿ, ಕೆ.ಕೆ. ಚವ್ಹಾಣ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ರೇಖಾ ಬಾಡಗಿ, ಡಾ. ರಾಜೇಶ್ವರಿ ಶೆಟ್ಟರ್ ಎನ್‍ಎಸ್‍ಎಸ್ ಅಧಿಕಾರಿಗಳು, ಕಾಲೇಜಿನ ಎಲ್ಲ ಉಪನ್ಯಾಸಕರು ಹಾಗೂ ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು. ಡಾ. ಅಶ್ವಿನಿ ಪಾಟೀಲ ಕಾರ್ಯಕ್ರಮವನ್ನು ನಿರೂಪಿಸಿ, ವಂದಿಸಿದರು.

LEAVE A REPLY

Please enter your comment!
Please enter your name here