ವಿವೇಕಾನಂದರ ವಿಚಾರಗಳನ್ನು ಇಂದಿನ ಯುವಕರು ಅರಿಯಲಿ
-ಚಂದ್ರಶೇಖರ್ ವೈ

0
103

ಧಾರವಾಡ: ಜ.28: ಇಂದಿನ ಯುವ ಜನತೆ ಸ್ಬಾಮಿ ವಿವೇಕಾನಂದರ ವಿಚಾರಗಳನ್ನು ಅರಿತು,ಆಚರಣೆಗೆ ತರಬೇಕು. ಈ ನಿಟ್ಟಿನಲ್ಲಿ ರಾಷ್ಟ್ರೀಯ ಸಪ್ತಾಹ ಕಾರ್ಯಕ್ರಮ ಪ್ರಸ್ತುತವಾಗಿದೆ ಎಂದು ಜಿಲ್ಲೆಯ ಎನ್‍ಎಸ್‍ಎಸ್ ನೋಡಲ್ ಅಧಿಕಾರಿ ವೈ.ಚಂದ್ರಶೇಖರ್ ಅವರು ಅಭಿಪ್ರಾಯಪಟ್ಟಿದ್ದಾರೆ.

ಕ್ಷೇತ್ರ ಜನ ಸಂಪರ್ಕ ಕಾರ್ಯಾಲಯ, ನೆಹರು ಯುವ ಕೇಂದ್ರ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ನಡೆದ ರಾಷ್ಟ್ರೀಯ ಯುವ ಸಪ್ತಾಹ 2022 ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸ್ವಾಮಿ ವಿವೇಕಾನಂದರ ದೇಶ ಕಟ್ಟುವ ಕುರಿತಾದ ವಿಚಾರ ಲಹರಿಗಳು ಹಾಗೂ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿದೆ. ಇಂದಿನ ಯುವಜನರು ಅನುಸರಿಸಬೇಕಾದ ಮಹತ್ತರವಾದ ವಿಷಯಗಳೂ ಆಗಿವೆ ಎಂದರು.

ಕ್ಷೇತ್ರ ಜನ ಸಂಪರ್ಕ ಕಾರ್ಯಾಲಯದ ಪ್ರಚಾರ ಅಧಿಕಾರಿ ಶೃತಿ ಎಸ್.ಟಿ, ಪ್ರಾಸ್ತಾವಿಕವಾಗಿ ಮಾತನಾಡಿ, ರಾಷ್ಟ್ರೀಯ ಯುವ ಸಪ್ತಾಹ ಯಶಸ್ವಿಯಾಗಬೇಕಾದರೆ, ಇಂದಿನ ಯುವ ಜನರ ಪಾತ್ರ ಹಾಗೂ ಅವರ ಪಾಲ್ಗೊಳ್ಳುವಿಕೆ ಬಹುಮುಖ್ಯವಾದುದು, ಭಾರತ ಸರಕಾರವು, ಯುವ ಸಮುದಾಯದ ಸಬಲೀಕರಣಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದರು.

ಕಾರ್ಯಕ್ರಮದ ಅಂಗವಾಗಿ, ವಿದ್ಯಾರ್ಥಿಗಳಿಗೆ ಚಿತ್ರಕಲೆ, ಭಾಷಣ, ಪ್ರಬಂಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಸಂಗೀತ ಮತ್ತು ನಾಟಕ ವಿಭಾಗದ ಕಲಾವಿದರಿಂದ ಸ್ವಾಮಿ ವಿವೇಕಾನಂದರ ಕುರಿತಾದ ಗೀತೆಯ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಿದವು.

ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಲಿಂಗರಾಜ ಬೆಲ್ಲದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನೆಹರು ಯುವ ಕೇಂದ್ರ ಜಿಲ್ಲಾ ಯುವ ಅಧಿಕಾರಿ ಗೌತಮ ರೆಡ್ಡಿ ಉಪಸ್ಥಿತರಿದ್ದರು.

ಉಪನ್ಯಾಸಕರಾದ ಡಾ. ಶೇಖರ ಸಜ್ಜನ ಕಾರ್ಯಕ್ರಮ ನಿರೂಪಿಸಿದರು, ರಾಜಕುಮಾರ ಭಜಂತ್ರಿ ಸ್ವಾಗತಿಸಿದರು, ಕ್ಷೇತ್ರ ಪ್ರಚಾರ ಸಹಾಯಕ ಮುರಳೀಧರ ಕಾರಭಾರಿ ಸ್ವಾಗತಿಸಿ, ವಂದಿಸಿದರು.

LEAVE A REPLY

Please enter your comment!
Please enter your name here