ಲಿಂಗಸೂಗೂರು: ನರೇಗಾ ಕಾಮಗಾರಿಗಳ ಪರಿಶೀಲಿಸಿದ ಜಿ.ಪಂ ಸಿಇಒ

0
84

ರಾಯಚೂರು,ಫೆ.01:- ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಗುರುಗುಂಟಾ ಮತ್ತು ಕೋಠಾ ಗ್ರಾಮ ಪಂಚಾಯತಿಗಳಲ್ಲಿ ನರೇಗಾ ಮತ್ತು ರೂರಬನ್ ಯೋಜನೆಯ ವಿವಿಧ ಕಾಮಗಾರಿಗಳ ಸ್ಥಳಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೂರಜಹಾನ್ ಖಾನಂ ಅವರು ಮಂಗಳವಾರ ಭೇಟಿ ನೀಡಿ ಪರಿಶೀಲನೆ ಮಾಡಿದರು.

ಲಿಂಗಸೂಗೂರು ತಾಲೂಕಿನ ಗುರುಗುಂಟಾ ಗ್ರಾಮ ಪಂಚಾಯತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಹೊಸ ಗ್ರಾಮ ಪಂಚಾಯತಿ ಕಟ್ಟಡ, ಘನತ್ಯಾಜ್ಯ ವಿಲೇವಾರಿ ಘಟಕ, ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗಳನ್ನು ಪರಿಶೀಲಿಸಿ, ನಿಗಧಿತ ಸಮಯದೊಳಗೆ ಗುಣಮಟ್ಟದ ಕಾಮಗಾರಿಯನ್ನು ಪೂರ್ಣಗೊಳಿಸಲು ಸಂಬಂದಪಟ್ಟ ಅಧಿಕಾರಿಗಳಿಗೆ ತಿಳಿಸಿದರು. ನಂತರ ರೂರ್ಬನ್ ಯೋಜನೆಯಡಿ ಡಿಜಿಟಲ್ ಸೇವಾ ಕೇಂದ್ರ, ಉರ್ದು ಶಾಲೆಯಲ್ಲಿ ಹೈಟೆಕ್ ಶೌಚಾಲಯ ಕಾಮಗಾರಿಗಳನ್ನು ವೀಕ್ಷಿಸಿದರು. ನೊತರ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಪಶು ಆಸ್ಪತ್ರೆಗಳಿಗೆ ಭೇಟಿ ನೀಡಿ ಅಲ್ಲಿನ ವ್ಯವಸ್ಥೆ ಬಗ್ಗೆ ಪರಿವೀಕ್ಷಣೆ ಮಾಡಿದರು.

ತದನಂತರ ಕೋಠಾ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಹಿರೇಹಳ್ಳ ಮತ್ತು ಮೆದಾನಪೂರ ಗ್ರಾಮಗಳಲ್ಲಿ ಕೆರೆ ಅಭಿವೃದ್ಧಿ, ನಾಲಾ ಅಭಿವೃದ್ಧಿ, ಗೋಕಟ್ಟೆ, ಭೋಜನಾಲಯ, ಸಿಸಿ ರಸ್ತೆ ನಿರ್ಮಾಣ ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಜೊತೆಗೆ ನರೇಗಾ ಯೋಜನೆಯಡಿ ಸಿಗುವ ಸೌಲಭ್ಯ ಮಾಹಿತಿಗಳ ಕುರಿತು ಕೂಲಿ ಕಾರ್ಮಿಕರ ಜೊತೆಗೆ ಮಾಹಿತಿಯನ್ನು ಕಲೆಹಾಕಿದರು.

ಈ ಸಂದರ್ಭದಲ್ಲಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು (ಗ್ರಾ.ಉ), ಗ್ರಾ.ಕು.ನೀ ಅಭಿಯಂತರರು, ರೂರ್ಬನ್ ಅಭಿಯಂತರರು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ತಾಂತ್ರಿಕ ಸಂಯೋಜಕರು, ತಾಂತ್ರಿಕ ಸಹಾಯಕರು, ಐಇಸಿ ಸಂಯೋಜಕರು ಹಾಗೂ ಗ್ರಾಪಂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here