ಧಾರವಾಡ ಜಿಲ್ಲಾ ಪಂಚಾಯತ ನೂತನ ಸಿಇಓ ಆಗಿ ಡಾ.ಸುರೇಶ ಇಟ್ನಾಳ ಅಧಿಕಾರ ಸ್ವೀಕಾರ

0
97

ಧಾರವಾಡ:ಫೆ.07: ಧಾರವಾಡ ಜಿಲ್ಲಾ ಪಂಚಾಯತ ನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಡಾ.ಸುರೇಶ ಇಟ್ನಾಳ ಅವರು ಇಂದು ಬೆಳಿಗ್ಗೆ ಅಧಿಕಾರ ಸ್ವೀಕರಿಸಿದರು.

ಹಿಂದಿನ ಸಿಇಓ ಡಾ.ಸುಶೀಲಾ ಬಿ. ಅವರು ಡಾ. ಇಟ್ನಾಳ ಅವರಿಗೆ ಅಧಿಕಾರ ವಹಿಸಿಕೊಟ್ಟರು.

ಡಾ.ಸುರೇಶ ಇಟ್ನಾಳ ಅವರು ಬೆಳಗಾವಿ ಮತ್ತು ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿಯಾಗಿ ಮತ್ತು ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆಯ ಆಯುಕ್ತರಾಗಿ ಸೇವೆ ಸಲ್ಲಿಸಿದ್ದಾರೆ.

ಅವರು ಇಂದು ಬೆಳಿಗ್ಗೆ ಧಾರವಾಡ ಜಿಲ್ಲಾ ಪಂಚಾಯತನೂತನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆಗಿ ಅಧಿಕಾರವಹಿಸಿಕೊಂಡರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ರೇಖಾ ಡೊಳ್ಳಿನವರ, ಮುಖ್ಯ ಯೋಜನಾಧಿಕಾರಿ ದೀಪಕ ಮಡಿವಾಳರ, ಯೋಜನಾ ನಿರ್ದೇಶಕ ಬಿ.ಎಸ್.ಮುಗನೂರಮಠ ಸೇರಿದಂತೆ ಜಿಲ್ಲಾ ಪಂಚಾಯತ ಕಚೇರಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here