ಜಿಲ್ಲಾಡಳಿತದಿಂದ ಶ್ರೀ ಸವಿತಾ ಮಹರ್ಷಿ ಜಯಂತಿ ಆಚರಣೆ

0
84

ಧಾರವಾಡ:ಫೆ.08: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದೊಂದಿಗೆ ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಶ್ರೀ ಸವಿತಾ ಮಹರ್ಷಿ ಜಯಂತಿಯನ್ನು ಆಚರಿಸಲಾಯಿತು.

ಜಿಲ್ಲಾಧಿಕಾರಿಗಳಾದ ನಿತೇಶ ಪಾಟೀಲ್ ಅವರು ಶ್ರೀ ಸವಿತಾ ಮಹರ್ಷಿ ಅವರ ಭಾವಚಿತ್ರಕ್ಕೆ ಪೂಜೆ, ಪುಷ್ಪಾರ್ಚನೆ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಸುರೇಶ್ ಇಟ್ನಾಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರಬಾಬು ಬೆಕ್ಕೇರಿ, ಸವಿತಾ ಸಮಾಜದ ಜಿಲ್ಲಾಧ್ಯಕ್ಷ ಬೂಪಣ್ಣ ಮುಷ್ಠಿಪಲ್ಲಿ, ಮುಖಂಡರಾದ ಪರಶುರಾಮ ಬದ್ದೆಪಲ್ಲಿ, ಆಂಜನೇಯ ಮುಷ್ಠಿಪಲ್ಲಿ, ಆಂಜನೇಯ ಚಿನ್ನಾತೂರ, ಶ್ರೀಧರ ತೆಲಿಗಾರ ಹಾಗೂ ಇತರರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here