ಅಜಾದಿ ಕಾ ಅಮೃತ್ ಮಹೋತ್ಸವ ಆಚರಣೆ ನಿಮಿತ್ತ ಪೂರ್ವಸಿದ್ಧತಾ ಸಭೆ,
ಭಾರತೀಯ ದೇವಾಲಯಗಳ ವಾಸ್ತುಶಿಲ್ಪ ವಿಕಾಸ ಕುರಿತು ರಾಷ್ಟ್ರಮಟ್ಟದ ವಿಚಾರ ಸಂಕಿರಣ.

0
129

ಹೊಸಪೇಟೆ(ವಿಜಯನಗರ ಜಿಲ್ಲೆ),ಫೆ.18: ಅಜಾದಿ ಕಾ ಅಮೃತ್ ಮಹೋತ್ಸವ ಆಚರಣೆ ಅಂಗವಾಗಿ ಕೇಂದ್ರ ಸಂಸ್ಕøತಿ ಮಂತ್ರಾಲಯದ ವತಿಯಿಂದ ಫೆ.25 ಮತ್ತು 26ರಂದು ಎರಡು ದಿನಗಳ ಕಾಲ ಹಂಪಿಯಲ್ಲಿ ಭಾರತೀಯ ದೇವಾಲಯಗಳ ವಾಸ್ತುಶಿಲ್ಪ ವಿಕಾಸ ಎಂಬ ವಿಷಯದ ಕುರಿತು ಎರಡು ದಿನಗಳ ರಾಷ್ಟ್ರಮಟ್ಟದ ವಿಚಾರ ಸಂಕಿರಣ ನಡೆಯಲಿದೆ.

ವಿಚಾರ ಸಂಕಿರಣವನ್ನು ಅತ್ಯಂತ ಯಶಸ್ವಿಯಾಗಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುತ್ತಿದೆ.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರು ವಿವಿಧ ಇಲಾಖೆಗಳಿಗೆ ವಹಿಸಲಾಗಿರುವ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸೂಚನೆ ನೀಡಿದರು.
ಫೆ.25ರಂದು ಬೆಳಗ್ಗೆ 9ಕ್ಕೆ ಹಂಪಿಯ ಪಟ್ಟಾಭಿರಾಮ ದೇವಸ್ಥಾನದ ಆವರಣದಲ್ಲಿ ನಡೆಯಲಿರುವ ಈ ರಾಷ್ಟ್ರಮಟ್ಟದ ವಿಚಾರ ಸಂಕಿರಣಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಲಿದ್ದಾರೆ. ಕೇಂದ್ರ ಪ್ರವಾಸೋದ್ಯಮ,ಸಂಸ್ಕøತಿ ಹಾಗೂ ಈಶಾನ್ಯ ರಾಜ್ಯಗಳ ಅಭಿವೃದ್ಧಿ ಖಾತೆ ಸಚಿವ ಜಿ.ಕಿಶನ್‍ರೆಡ್ಡಿ, ವಿದೇಶಾಂಗ ವ್ಯವಹಾರಗಳ ಮತ್ತು ಸಂಸ್ಕøತಿ ಖಾತೆ ರಾಜ್ಯ ಸಚಿವೆ ಮೀನಾಕ್ಷಿ ಲೇಖಿ ಸೇರಿದಂತೆ ಕೇಂದ್ರದ ಮೂರು ಜನ ಸಚಿವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ವಿಜಯನಗರ ವಿಧಾನಸಭಾ ಕ್ಷೇತ್ರದ ಶಾಸಕರೂ ಆಗಿರುವ ಪ್ರವಾಸೋದ್ಯಮ,ಪರಿಸರ,ಜೀವಿಶಾಸ್ತ್ರ ಸಚಿವ ಆನಂದಸಿಂಗ್ ಅವರು ಉಪಸ್ಥಿತರಿರಲಿದ್ದಾರೆ. ಮೂರು ಜನ ಅಂಬಾಸಿಡರ್‍ಗಳು ಆಗಮಿಸಲಿದ್ದಾರೆ ಎಂದು ಅವರು ವಿವರಿಸಿದರು.

ಅಕಾಡೆಮಿಕ್ ಅಧಿವೇಶನಗಳು ಕನ್ನಡ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ನಡೆಯಲಿದ್ದು, ಉದ್ಘಾಟನಾ ಸ್ಥಳ ಹಾಗೂ ಕನ್ನಡ ವಿವಿಯಲ್ಲಿ ಸಂಪೂರ್ಣ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅವರು ಸೂಚನೆ ನೀಡಿದರು. ವಿದ್ಯುತ್ ಮತ್ತು ನೆಟ್ವರ್ಕ್ ಸಮಸ್ಯೆಗಳಾಗದಂತೆ ನೋಡಿಕೊಳ್ಳಬೇಕು ಎಂದು ಅವರು ತಿಳಿಸಿದರು.
ಭಾರತೀಯ ದೇವಾಲಯಗಳ ವೈವಿಧ್ಯಮಯ ವಾಸ್ತುಶಿಲ್ಪಶೈಲಿ ಹಾಗೂ ವಿಕಾಸ ಕುರಿತು ಸಂಪನ್ಮೂಲ ವ್ಯಕ್ತಿಗಳು ವಿಷಯ ಮಂಡಿಸಲಿದ್ದಾರೆ. ಮುಖ್ಯಮಂತ್ರಿಗಳು ಹಂಪಿ ಬೈ ನೈಟ್‍ಗೆ ಇದೇ ಸಂದರ್ಭದಲ್ಲಿ ಚಾಲನೆ ನೀಡಲಿದ್ದಾರೆ. ಆನೆಸಾಲು ಮಂಟಪದಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ಅವರು ತಿಳಿಸಿದರು.
ಕೇಂದ್ರ ಪುರಾತತ್ವ ಇಲಾಖೆಯ ಹಂಪಿ ವಲಯದ ಅಧೀಕ್ಷಕ ನಿಖಿಲದಾಸಗುಪ್ತಾ ಅವರು ಕಾರ್ಯಕ್ರಮದ ಉದ್ದೇಶ, ಆಗಮಿಸಲಿರುವ ಕೇಂದ್ರ ಮಂತ್ರಿಗಳು ಮತ್ತು ಅಂಬಾಸಿಡರ್‍ಗಳು ಹಾಗೂ ಉನ್ನತ ಅಧಿಕಾರಿಗಳ ತಂಡ, ಇದುವರೆಗೆ ಕೈಗೊಳ್ಳಲಾಗಿರುವ ಸಿದ್ಧತೆಗಳು ಸೇರಿದಂತೆ ಸವಿವರವಾದ ಮಾಹಿತಿಯನ್ನು ಸಭೆಗೆ ತಿಳಿಸಿದರು.

ಈ ಸಂದರ್ಭದಲ್ಲಿ ಸಹಾಯಕ ಆಯುಕ್ತ ಸಿದ್ದರಾಮೇಶ್ವರ,ಡಿವೈಎಸ್ಪಿ ವಿಶ್ವನಾಥ ಕುಲಕರ್ಣಿ, ತಹಸೀಲ್ದಾರ್ ಮೇಘಾ, ತಾಪಂ ಇಒ ವಿಶ್ವನಾಥ,ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ತಿಪ್ಪೇಸ್ವಾಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಬಿ.ಕೆ.ರಾಮಲಿಂಗಪ್ಪ, ಕಮಲಾಪುರ ಪುರಸಭೆಯ ಮುಖ್ಯಾಧಿಕಾರಿ ನಾಗೇಶ ಸೇರಿದಂತೆ ಇನ್ನೀತರ ಅಧಿಕಾರಿಗಳು ಇದ್ದರು.

LEAVE A REPLY

Please enter your comment!
Please enter your name here