ರಾಷ್ಟ್ರದ ಹಿತಾಸಕ್ತಿ ಸಮಗ್ರತೆಗೆ ಅನುಗುಣವಾಗಿ ಅಲ್ಪಸಂಖ್ಯಾತ ಸಮುದಾಯಗಳು ಅಭಿವೃದ್ಧಿ ಹೊಂದಬೇಕು
-ಧನ್ಯಕುಮಾರ ಗುಂಡೆ

0
110

ಧಾರವಾಡ:ಫೆ.18: ಅಲ್ಪಸಂಖ್ಯಾತ ಸಮುದಾಯಗಳನ್ನು ಆರ್ಥಿಕ, ಶೈಕ್ಷಣಿಕ, ಆರೋಗ್ಯ ಹಾಗೂ ಸಾಮಾಜಿಕವಾಗಿ ವಿಕಸನಗೊಳಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿವೆ. ಸಂವಿಧಾನವೇ ನಮ್ಮೆಲ್ಲರಿಗೂ ರಾಷ್ಟ್ರಗ್ರಂಥವೆಂಬುದನ್ನು ಅರಿತು, ದೇಶದ ಹಿತಾಸಕ್ತಿ, ಸಮಗ್ರತೆಯನ್ನು ಎತ್ತಿ ಹಿಡಿಯಲು ಈ ಸಮುದಾಯಗಳು ಸಂಕಲ್ಪ ಮಾಡಿ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂದು ರಾಷ್ಟ್ರೀಯ ಅಲ್ಪಸಂಖ್ಯಾತರ ಆಯೋಗದ ಸದಸ್ಯ ಧನ್ಯಕುಮಾರ ಜಿನಪ್ಪ ಗುಂಡೆ ಸಲಹೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಇಂದು ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಲ್ಲಿ ಪ್ರಗತಿ ಪರಿಶೀಲನೆ ಸಭೆ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ಭಾರತ ಸಂವಿಧಾನದಡಿ ಭಾಷೆ ಮತ್ತು ಧಾರ್ಮಿಕ ಅಲ್ಪಸಂಖ್ಯಾತರ ಹಿತಕ್ಕಾಗಿ ಕೆಲವು ವಿಶೇಷ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಈ ವಿಧಿಯಡಿ ರಾಷ್ಟ್ರೀಯ ಸಮಗ್ರತೆಗಾಗಿ ಪ್ರಧಾನಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳು ಜಾರಿಗೆ ಬಂದಿವೆ. ಜನತೆಯೇ ರಾಷ್ಟ್ರದ ಜೀವಾಳ, ರಾಷ್ಟ್ರದ ಹಿತಾಸಕ್ತಿಯೇ ಎಲ್ಲರಿಗೂ ಮುಖ್ಯ. ನಾವು ಕೇವಲ ನಮ್ಮ ಹಕ್ಕುಗಳಿಗೆ ಧ್ವನಿ ಎತ್ತುವುದಕ್ಕೆ ಸೀಮಿತರಾಗಬಾರದು, ಮೂಲಭೂತ ಕರ್ತವ್ಯಗಳನ್ನು ಕೂಡ ಅರಿತು ಪಾಲಿಸಬೇಕು. ಈ ನಿಟ್ಟಿನಲ್ಲಿ ಸಮುದಾಯಗಳ ಮುಖಂಡರು ಜಾಗೃತಿ ಮೂಡಿಸಬೇಕು. ಸರ್ಕಾರದ ಸೌಕರ್ಯಗಳ ಕುರಿತು ಕಾರ್ಯಾಗಾರಗಳ ಮೂಲಕ ಅರಿವು ಉಂಟು ಮಾಡಬೇಕು ಎಂದರು.

ಮದರಸಾಗಳಲ್ಲಿ ಧಾರ್ಮಿಕ ಶಿಕ್ಷಣದ ಜೊತೆಗೆ ಕಂಪ್ಯೂಟರ್, ವಿಜ್ಞಾನ, ಗಣಿತ ಕಲಿಕೆ, ಕ್ರೀಡಾ ಚಟುವಟಿಕೆಗಳನ್ನು ಕೈಗೊಳ್ಳಲು ಅವಕಾಶವಿದೆ. ವಕ್ಫ್ ಮಂಡಳಿಯು ಆಸಕ್ತಿವಹಿಸಿ ಮಕ್ಕಳಿಗೆ ಆಧುನಿಕ ಶಿಕ್ಷಣ ದೊರೆಯಲು ಕ್ರಮವಹಿಸಬೇಕು. ಪಶುಸಂಗೋಪನೆಯಲ್ಲಿ ದೇಸಿ ತಳಿಗಳ ಮೂಲಕ ಹೈನುಗಾರಿಕೆಗೆ ಪೆÇ್ರೀತ್ಸಾಹಿಸುವುದು. ಅಂಗನವಾಡಿಗಳಲ್ಲಿ ಮೊಟ್ಟೆ ತಿನ್ನಲು ಬಯಸದ ಮಕ್ಕಳಿಗೆ ಪರ್ಯಾಯವಾಗಿ ಹಣ್ಣು ನೀಡುವ ಸಲಹೆಗಳನ್ನು ಜಿಲ್ಲೆಯ ಅಧಿಕಾರಿಗಳು ತಮ್ಮ ಮೇಲಾಧಿಕಾರಿಗಳಿಗೆ ತಿಳಿಸಬೇಕು. ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಯೋಜನೆಗಳಡಿ ನೀಡಿದ ಭೌತಿಕ ಗುರಿಯ ಪ್ರಮಾಣ ಹೆಚ್ಚಿಸಿದರೆ ಜನರಿಗೆ ಸುಲಭವಾಗಿ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ಧನ್ಯಕುಮಾರ ಗುಂಡೆ ಸಲಹೆ ನೀಡಿದರು.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಗೋಪಾಲ ಲಮಾಣಿ ಮಾತನಾಡಿ, ಜಿಲ್ಲೆಯ ಒಟ್ಟು ಜನಸಂಖ್ಯೆಯಲ್ಲಿ ವಿವಿಧ ಐದು ಅಲ್ಪಸಂಖ್ಯಾತರ ಧರ್ಮಗಳ ಶೇ.24.5 ರಷ್ಟು ಜನರಿದ್ದಾರೆ. ಇದರಲ್ಲಿ ಮುಸ್ಲಿಂ ಶೇ.20.94, ಜೈನ ಶೇ.1.57, ಕ್ರಿಶ್ಚಿಯನ್ ಶೇ.1.56, ಸಿಖ್ ಶೇ.0.8 ಹಾಗೂ ಬೌದ್ಧ ಶೇ.0.4 ರಷ್ಟು ಜನರಿದ್ದಾರೆ. ವಿದ್ಯಾಸಿರಿ, ಶಿಕ್ಷಣ ಪೆÇ್ರೀತ್ಸಾಹ, ಆರ್ಥಿಕ, ಸಾಮಾಜಿಕ ಅಭಿವೃದ್ಧಿಗೆ ವಿವಿಧ ಇಲಾಖೆಗಳ ಮೂಲಕ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳನ್ನು ಅನುμÁ್ಠನ ಮಾಡಲಾಗುತ್ತಿದೆ ಎಂದರು.

ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯ ನಾಮನಿರ್ದೇಶಿತ ಸದಸ್ಯ ಮುμÁ್ತಕ್ ಕುಂಬಿ ಮಾತನಾಡಿ, ಜಿಲ್ಲೆಯಲ್ಲಿ ಅಲ್ಪಸಂಖ್ಯಾತರ ಹಾಸ್ಟೆಲುಗಳ ಸಂಖ್ಯೆ ಹೆಚ್ಚಿಸಿ, ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪೆÇ್ರೀತ್ಸಾಹಿಸಬೇಕು. ವಕ್ಫ ಮಂಡಳಿಯು ಧಾರ್ಮಿಕ ಗುರುಗಳಿಗೆ ನೀಡುವ ಗೌರವಧನ ಹೆಚ್ಚಿಸಬೇಕು ಎಂದರು.

ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ,ಜಿಪಂ ಮುಖ್ಯ ಯೋಜನಾಧಿಕಾರಿ ದೀಪಕ್ ಮಡಿವಾಳ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಟಿ.ಸಿದ್ದಣ್ಣ, ಸಮಾಜ ಕಲ್ಯಾಣ ಜಂಟಿ ನಿರ್ದೇಶಕ ಮಂಜುನಾಥ ಡೊಂಬರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಅಜ್ಜಪ್ಪ ಸೊಗಲದ, ಜಂಟಿ ಕೃಷಿ ನಿರ್ದೇಶಕ ರಾಜಶೇಖರ ಐ.ಬಿ.ತೋಟಗಾರಿಕೆ ಉಪನಿರ್ದೇಶಕ ಡಾ.ಕಾಶೀನಾಥ ಭದ್ರಣ್ಣವರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಡಾ.ಹೆಚ್.ಹೆಚ್.ಕುಕನೂರ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಯ ನಾಮನಿರ್ದೇಶಿತ ಸದಸ್ಯ ಸುಖರಾಜ ಬಾಫಣಾ, ಅತ್ತಿಮಬ್ಬೆ ಮಹಿಳಾ ಸಂಘ, ಕ್ರಿಶ್ಚಿಯನ್ ಫೆಲೋಷಿಪ್ ಚರ್ಚ್ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here