ಯುವತಿ ಕಾಣೆ: ಪ್ರಕರಣ ದಾಖಲು

0
98

ಬಳ್ಳಾರಿ,ಫೆ.24: ಸಿರುಗುಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ಕೆಂಚನಗುಡ್ಡ ಗ್ರಾಮದ 18 ವರ್ಷದ ಸುಧಾಬಾಯಿ ಎನ್ನುವ ಯುವತಿ ಫೆ.21ರಂದು ಕಾಣೆಯಾಗಿದ್ದು, ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಸಿರುಗುಪ್ಪ ಪೊಲೀಸ್ ಠಾಣೆಯ ಸಬ್‍ಇನ್ಸ್‍ಪೆಕ್ಟರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಾಣೆಯಾದ ಯುವತಿಯ ಚಹರೆ ಗುರುತು: 5.1 ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ, ದುಂಡುಮುಖ, ಕೆಂಪುಬಣ್ಣದ ಚೂಡಿದಾರ ಧರಿಸಿದ್ದು, ಕನ್ನಡ ಮತ್ತು ಲಂಬಾಣಿ ಭಾಷೆ ಮಾತನಾಡುತ್ತಾಳೆ.
ಯುವತಿಯ ಮಾಹಿತಿ ದೊರೆತಲ್ಲಿ ಸಿರುಗುಪ್ಪ ಪೊಲೀಸ್ ಠಾಣೆಯ ಪಿಎಸ್‍ಐ ದೂ.08396-220333, ಸಿರುಗುಪ್ಪ ವೃತ್ತದ ಸಿಪಿಐ ದೂ.08396-220003, ಬಳ್ಳಾರಿಯ ಗ್ರಾಮೀಣ ಉಪವಿಭಾಗದ ಡಿಎಸ್‍ಪಿ ದೂ.08392-276000 ಮತ್ತು ಬಳ್ಳಾರಿಯ ಎಸ್‍ಪಿ ದೂ.08392-258400 ಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here