ಸಂಡೂರು ತಾಲೂಕು ಅಂಗನವಾಡಿ ಕಾರ್ಯಕರ್ತೆ, ಸಹಾಯಕಿರ ಹುದ್ದೆಗಳಿಗೆ ಅರ್ಜಿ ಆಹ್ವಾನ

0
761

ಸಂಡೂರು,ಫೆ.23: ಸಂಡೂರು ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ (ಸಿಡಿಪಿಒ) ಕಚೇರಿ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ, ಮತ್ತು ಸಹಾಯಕಿರ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಮಹಿಳಾ ಅಭ್ಯರ್ಥಿಗಳಿಂದ (ಅದೇ ಗ್ರಾಮ/ಅದೇ ವಾರ್ಡ್‍ನವರು) ಅರ್ಜಿ ಅಹ್ವಾನಿಸಲಾಗಿದೆ ಎಂದು ಸಂಡೂರು ತಾಲೂಕು ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಆಯ್ಕೆ ಸಮಿತಿ ಸದಸ್ಯ ಕಾರ್ಯದರ್ಶಿಗಳು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಪ್ರೇಮ್ ಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
07 ಅಂಗನವಾಡಿ ಕಾರ್ಯಕರ್ತೆ,ಮತ್ತು 22 ಅಂಗನವಾಡಿ ಸಹಾಯಕಿಯರ ಹುದ್ದೆಗಳು ಖಾಲಿ ಇದ್ದು,ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಪ್ರಾರಂಭ ದಿನಾಂಕ:22.02.2022ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾ.23.03.2022 ಆಗಿರುತ್ತದೆ. ಅನ್‍ಲೈನ್ ವೆಬ್‍ಸೈಟ್ ವಿಳಾಸ: www.anganawadirecrit.kar.nic.in
ನಲ್ಲಿ ಅರ್ಜಿ ಸಲ್ಲಿಸಬಹುದು

ಸೂಚನೆಗಳು: ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿಗಳನ್ನು ಆನ್‍ಲೈನ್ ಮೂಲಕ ಸಲ್ಲಿಸಬೇಕಾಗಿರುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮೊದಲು ಆನ್‍ಲೈನ್‍ನಲ್ಲಿ ಲಗತ್ತಿಸಿರುವ ನೇಮಕಾತಿ ಮಾರ್ಗಸೂಚಿ/ನಿಬಂಧನೆಗಳನ್ನು ತಿಳಿದುಕೊಂಡು ನಂತರ ಅಗತ್ಯ ದಾಖಲಾತಿಗಳೊಂದಿಗೆ ಅನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವುದು. ಎಲ್ಲಾ ಅಗತ್ಯ ದಾಖಲಾತಿಗಳನ್ನು ಅನ್‍ಲೈನ್ ಮೂಲಕವೇ ಸಲ್ಲಿಸಬೇಕಾಗಿರುತ್ತದೆ.

ಕಛೇರಿಗೆ ಅಂಚೆ ಲಕೋಟೆಯಿಂದ ಬಂದ ಅರ್ಜಿಗಳನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ. ಆನ್‍ಲೈನ್ ಅರ್ಜಿಯೊಂದಿಗೆ ಯಾವುದೇ ಅಗತ್ಯ ದಾಖಲಾತಿಗಳು ಸಲ್ಲಿಸದೇ ಇದ್ದಲ್ಲಿ ಅಂತಹ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಯು ಸಂಪೂರ್ಣವಾಗಿ ಗೌರವ ಸೇವೆಯಾಗಿದ್ದು ಖಾಯಂ ಹುದ್ದೆಯಾಗಿರುವುದಿಲ್ಲ.
ಆಯ್ಕೆ ಪ್ರಕ್ರಿಯೆಯಲ್ಲಿ ಯಾವುದೇ ಸಮಸ್ಯೆ ಉದ್ಭವಿಸಿದಲ್ಲಿ ಆಯ್ಕೆ ಸಮಿತಿಯ ನಿರ್ಧಾರವೇ ಅಂತಿಮವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ದೂ:08395-261156 ಗೆ ಅಥವಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿಗೆ ಭೇಟಿ ನೀಡಿ ಸಂಪರ್ಕಿಸಬಹುದು ಎಂದು ಶಿಶು ಅಭಿವೃದ್ಧಿ ಯೋಜನಾದಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here