ಖಾಯಂ ಪೌರಕಾರ್ಮಿಕರಿಗೆ ಶೀಘ್ರ ಮನೆ ನಿರ್ಮಾಣ: ಡಾ.ಬಿ.ಸಿ.ಸತೀಶ

0
134

ಮಡಿಕೇರಿ ಮಾ.04 :-ಖಾಯಂ ಪೌರ ಕಾರ್ಮಿಕರಿಗೆ ಇದೇ ವರ್ಷದಲ್ಲಿ 12 ಮನೆಗಳನ್ನು ನಿರ್ಮಿಸಿ ಕೊಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.
ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ಪೌರ ಕಾರ್ಮಿಕರಿಗೆ ರೆಡ್‍ಕ್ರಾಸ್ ಸಂಸ್ಥೆ ವತಿಯಿಂದ ‘ಹೈಜಿನ್ ಕಿಟ್’ ವಿತರಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ಮನೆ ಇಲ್ಲದ ಖಾಯಂ ಪೌರ ಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆಯಡಿ ಮನೆ ನಿರ್ಮಾಣ ಮಾಡಬೇಕಿದೆ. ಆ ನಿಟ್ಟಿನಲ್ಲಿ ಈಗಾಗಲೇ ಗುರುತಿಸಿರುವ ಜಾಗದಲ್ಲಿ ಮನೆ ನಿರ್ಮಿಸಿಕೊಡಲಾಗುವುದು ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.
ನಗರ/ಪಟ್ಟಣಗಳ ಸ್ವಚ್ಛತೆಯಲ್ಲಿ ಪೌರ ಕಾರ್ಮಿಕರ ಕಾರ್ಯ ಮಹತ್ತರ. ಪೌರ ಕಾರ್ಮಿಕರು ನಗರದ ಸ್ವಚ್ಛತೆ ಜೊತೆಗೆ, ತಮ್ಮ ಆರೋಗ್ಯದ ಕಡೆಯು ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸಲಹೆ ಮಾಡಿದರು.
15 ವರ್ಷ ಮೇಲ್ಪಟ್ಟ ಎಲ್ಲರೂ ಕೋವಿಡ್ ನಿಯಂತ್ರಣ ಲಸಿಕೆ ಪಡೆಯಬೇಕು. ಯಾರೂ ಸಹ ಕೋವಿಡ್ ನಿಯಂತ್ರಣ ಲಸಿಕೆಯಿಂದ ದೂರವಿರಬಾರದು ಎಂದರು.
ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ ಅವರು ಮಾತನಾಡಿ ಪೌರ ಕಾರ್ಮಿಕರು ಬೆಳಗಿನ ವೇಳೆಯಲ್ಲಿ ರಸ್ತೆಯನ್ನು ಶುಚಿ ಮಾಡಿರುತ್ತಾರೆ. ಆದರೆ ಸಂಜೆಯ ವೇಳೆಗೆ ಮತ್ತೆ ಕಸ ಬಿದ್ದಿರುತ್ತದೆ. ಆದ್ದರಿಂದ ಕಸವನ್ನು ತಮ್ಮ ಅಂಗಡಿಗಳಲ್ಲಿ/ ಮನೆಗಳಲ್ಲಿಯೇ ಇಟ್ಟುಕೊಂಡು ನಗರಸಭೆಯ ಕಸದ ವಾಹನ ಬಂದಾಗ ಹಾಕಬೇಕು ಎಂದು ಸಲಹೆ ಮಾಡಿದರು.
ರಸ್ತೆಗೆ ಕಸವನ್ನು ಯಾವುದೇ ಕಾರಣಕ್ಕೂ ಚೆಲ್ಲಬಾರದು. ಖಾಯಂ ಪೌರ ಕಾರ್ಮಿಕರಿಗೆ ಈ ವರ್ಷದಲ್ಲಿಯೇ ಮನೆ ನಿರ್ಮಿಸಿಕೊಡಲಾಗುವುದು ಎಂದು ಅವರು ಹೇಳಿದರು.
ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ರವೀಂದ್ರ ರೈ ಅವರು ಮಾತನಾಡಿ ರೆಡ್‍ಕ್ರಾಸ್ ಸಂಸ್ಥೆಗೆ ಶತಮಾನೋತ್ಸವ ಹಿನ್ನೆಲೆ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಆ ದಿಸೆಯಲ್ಲಿ ನಗರದ ಸ್ವಚ್ಛತೆಗೆ ಒತ್ತು ನೀಡುವ ಪೌರ ಕಾರ್ಮಿಕರಿಗೆ ಹೈಜಿನ್ ಕಿಟ್ ವಿತರಿಸಲಾಗುತ್ತದೆ ಎಂದು ಅವರು ಹೇಳಿದರು.
ನಗರದಲ್ಲಿ ರೆಡ್‍ಕ್ರಾಸ್ ಭವನ ಪೂರ್ಣಗೊಳ್ಳುವ ಹಂತದಲ್ಲಿದ್ದು, ಸದ್ಯದಲ್ಲೇ ಉದ್ಘಾಟನೆಯಾಗಲಿದೆ ಎಂದು ಅವರು ತಿಳಿಸಿದರು.
ನಗರಸಭೆ ಪೌರಾಯುಕ್ತರಾದ ಎಸ್.ವಿ.ರಾಮದಾಸ್, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮುರಳೀಧರ, ಯುವ ರೆಡ್‍ಕ್ರಾಸ್ ಜಿಲ್ಲಾ ಸಂಚಾಲಕರಾದ ಎಂ.ಧನಂಜಯ, ಪರಿಸರ ಎಂಜಿನಿಯರ್ ಸೌಮ್ಯ, ಇತರರು ಇದ್ದರು.

LEAVE A REPLY

Please enter your comment!
Please enter your name here