ಬಾಲ್ಯ ವಿವಾಹ ನಿಷೇಧ ಅಭಿಯಾನ- ವಿಡಿಯೋ ಆನ್ ವೀಲ್ಸ್ ಗೆ ಚಾಲನೆ,
ಜಿಲ್ಲೆಯಲ್ಲಿ ಬಾಲ್ಯ ವಿವಾಹ ತಡೆಯಲು ಕೈಜೋಡಿಸಿ: ಮಹಾಜನ್

0
121

ರಾಯಚೂರು ಮಾ.06 :- ಜಿಲ್ಲೆಯಲ್ಲಿ ಸಂಪೂರ್ಣವಾಗಿ ಬಾಲ್ಯವಿವಾಹ ತಡೆಯುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಆದ್ದರಿಂದ ಎಲ್ಲರೂ ಬಾಲ್ಯ ವಿವಾಹ ತಡೆಯಲು ಕೈಜೋಡಿಸಬೇಕಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ಮಹಾಜನ್ ಆರ್. ಎ. ಹೇಳಿದರು.

ಅವರು ಮಾ.6ರ ರವಿವಾರ ದಂದು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ರಾಯಚೂರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾದ್ದ ಬಾಲ್ಯ ವಿವಾಹ ನಿಷೇಧ ಅಭಿಯಾನ- ವಿಡಿಯೋ ಆನ್ ವೀಲ್ಸ್ ಚಾಲನೆ ಹಾಗೂ ಪೋಸ್ಟರ್ ಬಿಡುಗಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದರು.

ಬಾಲ್ಯ ವಿವಾಹವೆಂಬ ಅನಿಷ್ಟ ಪದ್ಧತಿ ನಿರ್ಮೂಲನೆ ಮಾಡಲು ಸಹಕಾರಿಯಾಗಿ ಮಕ್ಕಳಿಗೆ ಸಂಪೂರ್ಣ ಬಾಲ್ಯ ಅನುಭವಿಸಲು ಅವಕಾಶ ನೀಡಿ, ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ಸಾರ್ವಜನಿಕರು ಸಹಕರಿಸಬೇಕು ಎಂದರು.

ಬಾಲ್ಯ ವಿವಾಹವು ಒಂದು ಅಭಿವೃದ್ಧಿಗೆ ಮಾರಕವಾಗಿರುವ ಸಮಸ್ಯೆಯಾಗಿದೆ. ಬಾಲ್ಯ ವಿವಾಹ ತಡೆಗಟ್ಟುವುದು ನಮ್ಮೆಲ್ಲರ ಕರ್ತವ್ಯ. ಬಾಲ್ಯ ವಿವಾಹವು ಕಾನೂನು ಪ್ರಕಾರ ಶಿಕ್ಷಾರ್ಹ ಅಪರಾಧ. ಬಾಲ್ಯ ವಿವಾಹ ನಿಷೇಧಕ ಕಾಯ್ದೆ-2006ರ ಪ್ರಕಾರ 18ವರ್ಷದೊಳಗಿನ ಯಾವುದೇ ಹೆಣ್ಣುಮಗುವಿಗೆ ಹಾಗೂ 21ವರ್ಷದೊಳಗಿನ ಯಾವುದೇ ಗಂಡು ಮಗುವಿಗೆ ಮದುವೆಯಾದಲ್ಲಿ ಅದನ್ನು ಬಾಲ್ಯ ವಿವಾಹ ಎಂದು ಹೇಳಿದರು.

ಈ ವೇಳೆ ಜಿಲ್ಲಾಧಿಕಾರಿ ಡಾ.ಅವಿನಾಶ್ ರಾಜೇಂದ್ರ ಮೆನನ್ ಅವರು ಮಾತನಾಡಿ, ಬಾಲ್ಯ ವಿವಾಹವು ಹಿಂದಿನಿAದಲೂ ಆಚರಣೆಯಲ್ಲಿರುವ ಅನಿಷ್ಟ ಪದ್ಧತಿಯಾಗಿದ್ದು, ಪ್ರಸ್ತುತ ಸಹ ಆಚರಣೆಯಲ್ಲಿದೆ. ಬಡತನ, ಅನಕ್ಷರತೆ, ಆರ್ಥಿಕ ಸಮಸ್ಯೆಗಳು ಮತ್ತು ಮೂಢನಂಬಿಕೆಗಳು ಬಾಲ್ಯ ವಿವಾಹಕ್ಕೆ ಪ್ರಮುಖ ಕಾರಣಗಳಾಗಿದ್ದು, ಬಾಲ್ಯ ವಿವಾಹದಿಂದ ಮಕ್ಕಳ ಹಕ್ಕುಗಳಿಗೆ ಚ್ಯುತಿಯಾಗುತ್ತಿದೆ ಎಂದು ಹೇಳಿದರು. ಈ ವೇಳೆಯಲ್ಲಿ ಸಹಿ ಸಂಗ್ರಹ ಅಭಿಯಾನವನ್ನು ಮಾಡಲಾಯಿತು.

ಇದೇ ಸಂದ0ರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೂರಜಹಾನ್ ಖಾನಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ವೀರನಗೌಡ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ವೃಷಬೇಂದ್ರಯ್ಯ ಸ್ವಾಮಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮನ್ಸೂರ್ ಅಹ್ಮದ್ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.


ವಿದ್ಯಾರ್ಥಿನಿ ಮನೆಗೆ ಭೇಟಿ; ಸಾಂತ್ವಾನ

ರಾಯಚೂರು ಮಾ.06:- ಜಿಲ್ಲೆಯ ಮಸ್ಕಿ ತಾಲೂಕಿನ ಸಾನಬಾಳ ರಸ್ತೆಯಲ್ಲಿ ಫೆ.25 ರಂದು ವಿದ್ಯಾರ್ಥಿನಿಯೊಬ್ಬರನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆಯಾದ ಬಗ್ಗೆ ದಿನಪತ್ರಿಕೆಗಳಲ್ಲಿ ಸುದ್ದಿ ಪ್ರಕಟವಾದ ಹಿನ್ನಲೆಯಲ್ಲಿ ಮಾ.4ರ ಶುಕ್ರವಾರ ದಂದು ವಿದ್ಯಾರ್ಥಿನಿಯ ಮನೆಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷೆ ಡಾ. ಜಯಶ್ರೀ ಅವರು ಭೇಟಿ ನೀಡಿ ಸಾಂತ್ವಾನ ಹೇಳಿದರು.
ನಂತರ ಮಸ್ಕಿ ಪಟ್ಟಣದ ಕರ್ನಾಟಕ ಪಬ್ಲಿಕ್ ಶಾಲೆಗೆ ಭೇಟಿ ನೀಡಿ ಮಕ್ಕಳಿಗೆ ನೀಡುವ ಮಧ್ಯಾಹ್ನದ ಬಿಸಿಯೂಟದ ಬಗ್ಗೆ ಹಾಗೂ ಮಕ್ಕಳ ಸುರಕ್ಷತೆ ಬಗ್ಗೆ ಶಿಕ್ಷಕರೊಂದಿಗೆ ಚರ್ಚಿಸಿಲಾಯಿತು.

ಇದೇ ಸಂದ0ರ್ಭದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮನ್ಸೂರ್ ಅಹ್ಮದ್, ಕಾನೂನು ಪರಿವೀಕ್ಷಣಾಧಿಕಾರಿ ಶಿವರಾಜ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ಜಿಲ್ಲಾ ಸಂಯೋಜಕರಾದ ಸುದರ್ಶನ್ ಸೇರಿದಂತೆ ಇತರರು ಇದ್ದರು.


ಜೆಸ್ಕಾಂ ಮಾ.8ರಂದು ತಾಲೂಕಿನ ವಿವಿಧಡೆ ವಿದ್ಯುತ್ ವ್ಯತ್ಯಯ

ರಾಯಚೂರು ಮಾ.06:- ತಾಲೂಕಿನ ಮಲಿಯಬಾದ 110 ಕೆ.ವಿ ಉಪ ಕೇಂದ್ರ, ವಡವಟ್ಟಿ 110 ಕೆ.ವಿ ಉಪ ಕೇಂದ್ರ ಹಾಗೂ ಯರಗೇರಾ 110 ಕೆ.ವಿ ಉಪ ಕೇಂದ್ರದಲ್ಲಿ ವಿದ್ಯುತ್ ಮಾರ್ಗಗಳ ನಿರ್ವಹಣೆ ಕೆಲಸ ಹಿನ್ನಲೆಯಲ್ಲಿ 2022ರ ಮಾ.8ರ ಬೆಳಿಗ್ಗೆ 10ರಿಂದ ಮಧ್ಯಾಹ್ನ2 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ವಡವಟ್ಟಿ, ಮಲಿಯಬಾದ, ಯರಗೇರಾ ವಿದ್ಯುತ್ ಉಪ ಕೇಂದ್ರಗಳ ಸುತ್ತಮುತ್ತಲಿನ ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ರಾಯಚೂರು ಗ್ರಾಮೀಣ ಜೆಸ್ಕಾಂ ಕಾ ಮತ್ತು ಪಾ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಜೆಸ್ಕಾಂ ಮಾ.7ರಂದು ವಿದ್ಯುತ್ ವ್ಯತ್ಯಯ

ರಾಯಚೂರು ಮಾ.06 – ತಾಲೂಕಿನ ಶಕ್ತಿನಗರ ಮತ್ತು ಚಿಕ್ಕಸೂಗುರ್ 110/11ಕೆ.ವಿ ಉಪ ಕೇಂದ್ರದಲ್ಲಿ ಲೈನ್‌ಗಳ ನಿರ್ವಹಣೆ ಕೆಲಸದ ಪ್ರಯುಕ್ತ 2022ರ ಮಾ.7ರ ಬೆಳಿಗ್ಗೆ 10ರಿಂದ ಮಧ್ಯಾಹ್ನ 2ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಶಕ್ತಿನಗರ ಮತ್ತು ಚಿಕ್ಕಸೂಗುರ್ ವಿದ್ಯುತ್ ಉಪ ಕೇಂದ್ರಗಳ ಸುತ್ತಮುತ್ತಲಿನ ಹಳ್ಳಿಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ರಾಯಚೂರು ಗ್ರಾಮೀಣ ಜೆಸ್ಕಾಂ ಕಾ ಮತ್ತು ಪಾ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಡಾ.ಬಿ.ಆರ್.ಅಂಬೇಡ್ಕರ್ ನಿಗಮ: ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನ

ರಾಯಚೂರು ಮಾ.06:- ಇಲ್ಲಿಯ ಡಾ.ಬಿ.ಆರ್.ಅಂಬೇಡ್ಕರ ಅಭಿವೃದ್ಧಿ ನಿಗಮದ ಪರಿಶಿಷ್ಟ ಜಾತಿ ಅಲೆಮಾರಿ, ಅರೆಅಲೆಮಾರಿ, ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಸಮುದಾಯಗಳ ಕೋಶದ ವತಿಯಿಂದ ಅನುಷ್ಠಾನಗೊಳಿಸುತ್ತಿರುವ ವಸತಿ ಯೋಜನೆಯಡಿ 2021-22ನೇ ಸಾಲಿಗೆ ಅರ್ಹ ಫಲಾಪೇಕ್ಷಿಗಳಿಂದ ಆನ್‌ಲೈನ್ ಅಥವಾ ಆಫ್‌ಲೈನ್ ಮೂಲಕ ಅರ್ಜಿಯನ್ನು ಅಹ್ವಾನಿಸಲಾಗಿದೆ.

ಆಸಕ್ತರು ಮಾ.20ರೊಳಗಾಗಿ ಅರ್ಜಿಯನ್ನು ಸಲ್ಲಿಬಹುದಾಗಿದೆ. ನಿಗಮ ವೆಬ್‌ಸೈಟ್ hಣಣಠಿs://ಚಿಜಛಿಟ.ಞಚಿಡಿಟಿಚಿಣಚಿಞಚಿ.gov.iಟಿ ನಲ್ಲಿ ಅಪ್ಲೋಡ್ ಮಾಡಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08532-220774ಗೆ ಸಂಪರ್ಕಿಸುವAತೆ ಡಾ.ಬಿ.ಆರ್.ಅಂಬೇಡ್ಕರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಮಾ.8ರಂದು ನಗರದ ವಿವಿಧಡೆ ವಿದ್ಯುತ್ ವ್ಯತ್ಯಯ

ರಾಯಚೂರು ಮಾ.06 :- ನಗರದ ವಡವಟ್ಟಿ 110ಕೆ.ವಿ ಉಪ ಕೇಂದ್ರದಲ್ಲಿ ವಿದ್ಯುತ್ ಮಾರ್ಗಗಳ ನಿರ್ವಹಣೆ ಕೆಲಸದ ಪ್ರಯುಕ್ತ 2022ರ ಮಾ.8ರ ಬೆಳಿಗ್ಗೆ 10ರಿಂದ ಮಧ್ಯಾಹ್ನ 2ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಜಲಾಲ್ ನಗರ, ಮುನಿರಬಾದ್, ಗದ್ವಲ್ ರೋಡ್, ದೇವಿ ನಗರ, ಎನ್.ಜಿ.ಒ ಕಾಲೋನಿ, ಗದ್ವಲ್ ಇಂಡೇಸ್ಟಿçÃಲ್ ಏರಿಯಾ ಸೇರಿರದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಜೆಸ್ಕಾಂ ಕಾ ಮತ್ತು ಪಾ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here