ವಿಜಯನಗರದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನ ಆಚರಣೆ, ಸ್ತ್ರೀಶಕ್ತಿ ಸಮಾವೇಶ,ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ

0
96

ಹೊಸಪೇಟೆ(ವಿಜಯನಗರ ಜಿಲ್ಲೆ),ಮಾ.10: ವಿಜಯನಗರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಂಯುಕ್ತಾಶ್ರಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಜಿಲ್ಲಾಮಟ್ಟದ ಸ್ತ್ರೀಶಕ್ತಿ ಸಮಾವೇಶ ಮತ್ತು ಸ್ತ್ರೀ ಶಕ್ತಿ ಸಂಘಗಳು ಉತ್ಪಾದಿಸಿದ ವಸ್ತುಗಳ ಪ್ರದರ್ಶನ ಮಾರಾಟ ಮೇಳ ಕಾರ್ಯಕ್ರಮ ಗುರುವಾರದಂದು ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ನಗರಸಭೆ ಅಧ್ಯಕ್ಷೆ ಸುಂಕಮ್ಮ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಮಹಿಳೆಯರು ಒಂದೇ ಕ್ಷೇತ್ರಕ್ಕೆ ಸಿಮೀತವಾಗಿಲ್ಲ; ಎಲ್ಲ ರಂಗಗಳಲ್ಲಿಯೂ ಅವರು ತಮ್ಮ ಛಾಪೂ ಮೂಡಿಸಿದ್ದಾರೆ ಎಂದರು.
ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರು ನೆರೆದಿದ್ದ ಎಲ್ಲರಿಗೂ ಮಹಿಳಾ ದಿನಾಚರಣೆಯ ಶುಭಾಷಯಗಳನ್ನು ತಿಳಿಸಿದರು. ನೂತನ ವಿಜಯನಗರ ಜಿಲ್ಲೆಯಲ್ಲಿ ಅತ್ಯಂತ ವಿಶಿಷ್ಟವಾಗಿ ಮಹಿಳಾ ದಿನಾಚರಣೆ ಮಾಡುತ್ತಿರುವುದು ಖುಷಿತಂದಿದೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳಾ ಸಾಧಕರ ವೇದಿಕೆಯಾಗಿ ಮಾರ್ಪಟ್ಟಿರುವುದು ಸಂತಸದ ಸಂಗತಿ ಎಂದರು.
ಸ್ತ್ರೀ ಶಕ್ತಿ ಸಂಘಗಳ ಸದಸ್ಯರು ಉತ್ಪಾದಿಸಿದ ಉತ್ಪನ್ನಗಳಿಗೆ ಆನ್‍ಲೈನ್ ಮೂಲಕ ಮಾರುಕಟ್ಟೆ ಒದಗಿಸುವ ಕೆಲಸವಾಗಬೇಕು ಎಂದು ಹೇಳಿದ ಅವರು ಮಲಪನಗುಡಿಯಲ್ಲಿ ಮಹಿಳೆಯರೇ ಸ್ವಸಹಾಯ ಸಂಘ ಕಟ್ಟಿಕೊಂಡು ಘನತ್ಯಾಜ್ಯವಿಲೇವಾರಿ ಕಾರ್ಯಕ್ಕೆ ಧುಮುಕಿದಂತೆ ನಗರಪ್ರದೇಶದಲ್ಲಿಯೂ ಆಗಬೇಕು ಎಂದರು.
ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಭೋಯರ್ ಹರ್ಷಲ್ ನಾರಾಯಣರಾವ್ ಅವರು ಮಾತನಾಡಿ ಮಹಿಳಾ ದಿನಾಚರಣೆಯಿಂದ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಸಾಧನೆ ಮಾಡಿದ ಸಾಧಕಿಯರ ವೇದಿಕೆಯಾಗಿದೆ. ಈ ಕಾರಣದಿಂದ ಈ ವೇದಿಕೆ ಮಹಿಳೆಯರಿಗೆ ಅವಕಾಶ ನೀಡುತ್ತೇನೆ ಎಂದು ಹೇಳಿದರು.

ಸಾಹಿತ್ಯ ಕ್ಷೇತ್ರದಲಿ ಸಾಧನೆ ಮಾಡಿದ ಪದ್ಮಾವಿಠಲ ಅವರು ಮಾತನಾಡಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಒಂದು ದಿನಕ್ಕೆ ಮಾತ್ರ ಸೀಮೀತವಾಗಬಾರದು.ಈ ವರ್ಷದ ಮಹಿಳಾ ದಿನಾಚರಣೆಯ ಘೋಷ ವಾಕ್ಯದಂತೆ ಸುಸ್ಥಿರ ನಾಳೆ ಲಿಂಗ ಸಮಾನತೆಯಂತೆ ಮಹಿಳಾ ದಿನಾಚರಣೆ ಮುಖ್ಯ ಧ್ಯೇಯವಾಗಬೇಕು. ಅದಕ್ಕೆ ಮಹಿಳೆಯರು ಪೂರಕವಾಗಿ ಮಹಿಳೆಯರು ತಮ್ಮ ಅವಕಾಶ ಸಿಕ್ಕಾಗ ಅದನ್ನು ಬಳಸಿಕೊಂಡರೆ ಮಾತ್ರ ಸಾಧನೆ ಮಾಡಲು ಸಾದ್ಯವಾಗುತ್ತದೆ ಎಂದರು.
ವಿವಿಧ ಕ್ಷೇತ್ರಗಳಲ್ಲಿ ಮಹಿಳೆ ತೊಡಗಿಸಿಕೊಂಡಿದ್ದರೂ ಇಂದಿಗೂ ಅವರ ಮೇಲೆ ಶೋಷಣೆ ನಡೆಯುತ್ತಿದೆ.ಪುರುಷ ಸಮಾಜದಲ್ಲಿ ಮಹಿಳೆಯರ ಮೀಸಾಲಾತಿ ಇನ್ನೂ ಪಡೆಯುವಲ್ಲಿ ಸಾದ್ಯವಾಗುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದ ಅವರು ಸಶಕ್ತ ಮಹಿಳಾ ಸಮಾಜ ನಿರ್ಮಾಣಕ್ಕೆ ಆದ್ಯತೆ ನೀಡಬೇಕು ಎಂದರು.

ಈ ಸಂದರ್ಭದಲ್ಲಿ ವಿಜಯನಗರ ಜಿಲ್ಲೆಯಲ್ಲಿ ವಿಶೇಷ ಸಾಧನೆಗೈಧ ಮಹಿಳೆಯರಿಗೆ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಾಗರಾಜ ಪ್ರಾಸ್ತಾವಿಕವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಸಿಡಿಪಿಒ ಸಿಂಧು ಯಲಿಗಾರ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳೆಯರು ಇದ್ದರು.
ಮಹಿಳಾ ದಿನಾಚರಣೆ ಅಂಗವಾಗಿ ಸ್ತ್ರೀ ಶಕ್ತಿ ಗುಂಪುಗಳು ಉತ್ಪಾದಿಸಿದ್ದ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳ ಗಮನಸೆಳೆಯಿತು.

LEAVE A REPLY

Please enter your comment!
Please enter your name here