ಅಭಿವೃದ್ಧಿ ಕೆಲಸಗಳು ಕ್ಷಿಪ್ರಗತಿಯಲ್ಲಿ ಕಾರ್ಯಗತಗೊಳಿಸಿ: ಸಂಸದೆ ಸುಮಲತಾ ಅಂಬರೀಶ್

0
90

ಮಂಡ್ಯ.ಮಾ.08 :- ಎಲ್ಲಾ ಇಲಾಖೆಗಳು ಕೇಂದ್ರವಲಯದ ಯೋಜನೆಗಳ ಅನುದಾನವನ್ನು ಸದುಪಯೋಗಪಡಿಸಿಕೊಂಡು ಅಭಿವೃದ್ಧಿ ಕೆಲಸಗಳು ಕ್ಷಿಪ್ರಗತಿಯಲ್ಲಿ ಕಾರ್ಯಗತಗೊಳಿಸಿ ಎಂದು ಸಂಸದೆ ಸುಮಲತಾ ಅಂಬರೀಷ್ ಸೂಚಿಸಿದರು.

ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ (ದಿಶಾ) ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಎಲ್ಲಾ ತಾಲ್ಲೂಕಿನ ಕೊಳವೆ ಬಾವಿ, ಶಾಲಾ ಕೊಠಡಿಗಳು, ಕಾಂಪೌಂಡ್ ಗಳ ದುರಸ್ತಿ ಕಟ್ಟಡಗಳ ಮಾಹಿತಿ ಪಡೆದು ಸರಿಪಡಿಸಿ ಮಕ್ಕಳ ವಿದ್ಯಾಭ್ಯಾಸಕ್ಕೆ ಯಾವುದೇ ರೀತಿಯ ತೊಂದರೆಯಾಗದ ಹಾಗೆ ಸರಿಪಡಿಸಲು ಅಧಿಕಾರಿಗಳಿಗೆ ತಿಳಿಸಿದರು.

ತಾಲ್ಲೂಕುಗಳಲ್ಲಿ ಪ್ರಗತಿಯಲ್ಲಿರುವ ಕೆರೆಗಳ ಕಾಮಗಾರಿಗಳು ಪೂರ್ಣಗೊಳಿಸಿ ಎಂದು ಸೂಚಿಸಿದರು. ದುಡಿಯೋಣ ಬಾ ಯೋಜನೆಗೆ ಸಂಭಂದಿಸಿದಂತೆ ಪ್ರಸ್ತುತದ ಕಾರ್ಯದ ಮಾಹಿತಿಯನ್ನು ಪಡೆದು ಸಲಹೆ ಸೂಚನೆಗಳನ್ನು ನೀಡಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಆರ್.ಎಂ.ಎಸ್.ಎ ಯೋಜನೆಯಡಿ ಒಟ್ಟು 101 ಶಾಲೆ ಮಂಜೂರಾಗಿ 62 ಶಾಲೆಗಳು ಪೂರ್ಣಗೊಂಡಿದೆ 10 ಶಾಲೆಗಳು ಪ್ರಗತಿಯಲ್ಲಿರುವ ಹಾಗೂ ಬಾಕಿ ಇರುವ ಕಾಮಗಾರಿಯನ್ನು ಪೂರ್ಣಗೊಳಿಸಿ ಎಂದು ಹೇಳಿದರು.
ಕೋವಿಡ್- 19 ನಿಂದ ಮೃತಪಟ್ಟ ಕುಟುಂಬಗಳಿಗೆ ಪರಿಹಾರ ಸರಿಯಾಗಿ ತಲುಪುತ್ತಿಲ್ಲ ಅಧಿಕಾರಿಗಳು ಇದನ್ನು ಗಮನಹರಿಸಿ ಆದಷ್ಟು ಬೇಗ ಅವರಿಗೆ ಪರಿಹಾರ ಒದಗಿಸಬೇಕು ಎಂದರು.

ಮಳವಳ್ಳಿ ತಾಲ್ಲೂಕಿನಲ್ಲಿ ಚಿರತೆ ದಾಳಿ ಸಂಬಂಧ ಅರಣ್ಯ ಅಧಿಕಾರಿಗಳಿಂದ ಮಾಹಿತಿ ಪಡೆದು ಸಾರ್ವಜನಿಕ ರಕ್ಷಣೆ ಬಹಳ ಮುಖ್ಯ ಕರ್ತವ್ಯವನ್ನು ಸರಿಯದ ಕ್ರಮದಲ್ಲಿ ನಿರ್ವಹಿಸುವಂತೆ ಸೂಚಿಸಿದರು.
ಹಾನಿಗೀಡಾದ ಕೆ ಆರ್.ಎಸ್ ರಸ್ತೆ, ಪಾಂಡುಪುರ ಮತ್ತು ಮೇಲುಕೋಟೆ ರಸ್ತೆಗಳ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಹೇಳಿದರು.

ಕೆರೆಯನ್ನು ಸಮೃದ್ಧಿ ಮಾಡೋದಕ್ಕೆ ಹಲವಾರು ರೀತಿಯಲ್ಲಿ ಕ್ರಮಗಳನ್ನು ತೆಗೆದುಕೊಳ್ಳಿ.580 ಕೆರೆಗಳು ಏಪ್ರಿಲ್ ತಿಂಗಳಲ್ಲಿ ಅಭಿವೃದ್ಧಿ ಮಾಡಲು ಹೇಳಿದರು.
ಸಂಸದರ ಆದರ್ಶ ಗ್ರಾಮಕ್ಕೆ ಮಂಡ್ಯ ತಾಲ್ಲೂಕಿನ ಬಸರಾಳು ಗ್ರಾಮ ಮತ್ತು ಬೆಸಗರಹಳ್ಳಿ ಯನ್ನು ಆಯ್ಕೆ ಮಾಡಿದ್ದು, ಪಂಚಾಯತಿಗಳು ಗಮನಹರಿಸಿ ಈ ಗ್ರಾಮದ ಪ್ರಗತಿಗೆ ಸಹಕರಿಸಿ ಬಾಕಿ ಉಳಿದ ಕಾರ್ಯಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕೇಂದ್ರ ಪುರಸ್ಕøತ ಯೋಜನೆಗಳ ಪ್ರಗತಿ ಮತ್ತು ಪೂರಕ ಪೌಷ್ಠಿಕ ಆಹಾರದ ಮಾಹಿತಿ ಪಡೆದು ಉತ್ತಮ ರೀತಿಯಲ್ಲಿ ಮಕ್ಕಳಿಗೆ ಸೌಲಭ್ಯ ನೀಡಲು ಸೂಚಿಸಿದರು.
ನರೇಗಾ ಯೋಜನೆಯಲ್ಲಿ 70 ಅನುಮೋದನೆ ಮಾಡಲಾಗಿದೆ. ಕೆಲವು ಕಡೆ ಗ್ರಾಮ ಪಂಚಾಯತ್ ಗಳಲ್ಲಿ ಸ್ವ – ಸಹಾಯ ಸಂಘಗಳಿಗೆ ಅನುಮೋದನೆ ಮನೆಗಳ ಪ್ರಗತಿಗೆ ಅನುಗುಣವಾಗಿ ಅನುದಾನವವು ಫಲಾನುಭವಿಗಳಿಗೆ ನೀಡಬೇಕು ಎಂದರು.

ನೂತನ ರಸ್ತೆಗಳನ್ನು ನಿರ್ಮಾಣ ಮಾಡುವಾಗ ವಿದ್ಯುತ್ ಕಂಬಗಳನ್ನು ಸ್ಥಳಾಂತರ ಮಾಡುವ ಬಗ್ಗೆ ಚರ್ಚನಡೆಸಿ ರಸ್ತೆ ನಿರ್ಮಾಣಕ್ಕೆ ಯಾವುದೇ ಅಡ್ಡಿ ಯಾಗದಂತೆ ನೋಡಿಕೊಳ್ಳಿ ಎಂದು ಹೇಳಿದರು.
ಮಿಮ್ಸ್ ಆಸ್ಪತ್ರೆಯಲ್ಲಿನ ಕುಂದು ಕೊರತೆಗಳನ್ನು ಆದಷ್ಟು ಬೇಗ ಸರಿಪಡಿಸಿ ಜನ ಸಾಮಾನ್ಯರಿಗೆ ತೊಂದರೆಯಾಗಬಾರದು ಸರಿಯಾದ ಗಮನಹರಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಎಲ್ಲ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರ ಕುಂದು ಕೊರತೆಯನ್ನು ಸೂಕ್ಷ್ಮವಾಗಿ ಆಲಿಸಿ ಅವರಿಗೆ ಸರಿಯಾದ ಮಾರ್ಗದಲ್ಲಿ ಯಾವುದೇ ಸಮಸ್ಯೆಯಾಗದಂತೆ ಬಗೆಹರಿಸಿ. ಇಲಾಖೆಗಳಲ್ಲಿ ಪ್ರಗತಿಯಲ್ಲಿರುವ ಹಾಗೂ ಬಾಕಿ ಉಳಿದಿರುವ ಕಾಮಗಾರಿಗಳನ್ನು ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಪರಿಶೀಲಿಸಿ ಕರ್ತವ್ಯವನ್ನು ನಿರ್ವಹಿಸುವಂತೆ ಹೇಳಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಎಸ್.ಅಶ್ವತಿ, ಜಿ.ಪಂ ಸಿ ಇ ಒ ದಿವ್ಯಪ್ರಭು, ಪೆÇಲೀಸ್ ವರಿಷ್ಠಾಧಿಕಾರಿ ಎನ್. ಯತೀಶ್, ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here