ಬಳ್ಳಾರಿಯಲ್ಲಿ ಮಿನಿ ಉದ್ಯೋಗ ಮೇಳ :80 ಅಭ್ಯರ್ಥಿಗಳಿಗೆ ಉದ್ಯೋಗ

0
127

ಬಳ್ಳಾರಿ ಮಾ.11: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ “ಅಜಾದಿ ಕಾ ಅಮೃತ ಮಹೋತ್ಸವ’’ ನಿಮಿತ್ತ ನಗರದ ತಾಲೂಕು ಕಚೇರಿ ಆವರಣದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗಮೇಳ ಜರುಗಿತು. 80 ಅಭ್ಯರ್ಥಿಗಳಿಗೆ ಉದ್ಯೋಗ ದೊರಕಿದೆ.
ಈ ಮೇಳದಲ್ಲಿ ಸುಮಾರು ಆರು ಕಂಪನಿಗಳು ಪಾಲ್ಗೊಂಡು ತಮ್ಮಲ್ಲಿರುವ ಖಾಲಿ ಹುದ್ದೆಗಳನ್ನು ನೇರ ಸಂದರ್ಶನ ಮೂಲಕ ನೇಮಕ ಮಾಡಿಕೊಂಡರು.
ಒಟ್ಟು 387 ಅಭ್ಯರ್ಥಿಗಳು ಈ ಮೇಳದಲ್ಲಿ ಪಾಲ್ಗೊಂಡಿದ್ದರು. 80 ಅಭ್ಯರ್ಥಿಗಳಿಗೆ ಉದ್ಯೋಗ ದೊರಕಿದೆ. 17 ಅಭ್ಯರ್ಥಿಗಳು ತರಬೇತಿಗೆ ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಉದ್ಯೋಗ ವಿನಿಯಮ ಅಧಿಕಾರಿ ಪಿ.ಎಸ್.ಹಟ್ಟಪ್ಪ ಅವರು ತಿಳಿಸಿದರು.
ಎಸ್ಸೆಸ್ಸೆಲ್ಸಿಕ್ಕಿಂತ ಕಡಿಮೆ, ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ,ಡಿಪ್ಲೊಮಾ, ಎಎನ್‍ಎಂ, ಡಿಜಿಎನ್‍ಎಂ, ಬಿಎಸ್ಸಿ ನರ್ಸಿಂಗ್,ಬಿ.ಇ(ಮೆಕ್ಯಾನಿಕಲ್),ಪದವಿ ಮತ್ತು ಸ್ನಾತಕೋತ್ತರ ಪದವಿ ಸೇರಿದಂತೆ ವಿವಿಧ ವಿದ್ಯಾರ್ಹತೆ ಹೊಂದಿದ ನಿರುದ್ಯೋಗಿ ಅಭ್ಯರ್ಥಿಗಳು ತಮ್ಮ ಸ್ವಯಂ ವಿವರಗಳೊಂದಿಗೆ ಈ ಮೇಳದಲ್ಲಿ ಭಾಗವಹಿಸಿದ್ದರು. ಮೇಳದಲ್ಲಿ ಪಾಲ್ಗೊಂಡ ಅಭ್ಯರ್ಥಿಗಳನ್ನು ಉದ್ದೇಶಿಸಿ ಜಿಲ್ಲಾ ಉದ್ಯೋಗ ವಿನಿಯಮ ಅಧಿಕಾರಿ ಪಿ.ಎಸ್.ಹಟ್ಟಪ್ಪ ಮಾತನಾಡಿದರು ಮತ್ತು ಆರು ಕಂಪನಿಗಳ ಉದ್ಯೋಗದಾತರು ಇದ್ದರು.

LEAVE A REPLY

Please enter your comment!
Please enter your name here