ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

0
73

ಮಡಿಕೇರಿ ಮಾ.15 :-ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಮಹಿಳಾ ಕೂಲಿ ಕಾರ್ಮಿಕರನ್ನು ಸಂಘಟಿಸಿ, ನವ ಭಾರತ ನಾರಿ ಎಂಬ ಸಂದೇಶದ ಮೇರೆಗೆ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಗೆ ವಿರಾಜಪೇಟೆ ತಾ.ಪಂ. ಇಒಕೆಸಿ ಅಪ್ಪಣ್ಣ ಅವರು ತಾಲ್ಲೂಕಿನ ಅರವತ್ತೊಕ್ಲು ಗ್ರಾಮ ಪಂಚಾಯಿತಿಯ ಕೆರೆಯ ಸುತ್ತಮುತ್ತ ಶ್ರಮದಾನ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಂತರ ಮಾತನಾಡಿ ಪ್ರಸ್ತುತ ಸಮಾಜದಲ್ಲಿ ಮಹಿಳೆಯರ ಸ್ಥಾನಮಾನಗಳ ಕುರಿತು ವಿವರಿಸುತ್ತಾ, ಮಹಿಳೆಯು ಕುಟುಂಬದ ಏಳಿಗೆಗೆ ಹಾಗೂ ಸಮಾಜದ ಏಳಿಗೆಗೆ ಶ್ರಮಿಸುತ್ತಿದ್ದು ಅವರಿಗೆ ಗೌರವ ಸೂಚಿಸುವ ಸಲುವಾಗಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಆಚರಿಸಲಾಗುತ್ತಿದೆ. ಮನರೇಗಾ ಯೋಜನೆಯಡಿ ತಾಲ್ಲೂಕಿನಲ್ಲಿ ಹಲವಾರು ಮಹಿಳೆಯರು ಕೆಲಸ ಹಾಗೂ ವೈಯಕ್ತಿಕ ಸೌಲಭ್ಯಗಳನ್ನು ಪಡೆದುಕೊಂಡು ಆರ್ಥಿಕವಾಗಿ ಸಬಲರಾಗಿದ್ದು ಖುಷಿ ತಂದಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಮನರೇಗಾದ ಸಹಾಯಕ ನಿರ್ದೇಶಕರಾದ ಶ್ರೀನಿವಾಸ್ ಅವರು ಮಾತನಾಡಿ ಮಹಿಳೆಯರು ಇಂದು ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಹಾಗೂ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿರುವುದು ಬದಲಾವಣೆ ಒಂದು ಸಂಕೇತವಾಗಿದ್ದು, ಮನರೇಗಾ ಯೋಜನೆಯಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚಾಗಬೇಕು ಎಂದು ತಿಳಿಸಿದರು.
ತಾಲ್ಲೂಕು ಐಇಸಿ ಸಂಯೋಜಕ ನರೇಂದ್ರ ಮಾತನಾಡಿ ಈಗಾಗಲೇ ಜಿಲ್ಲೆಯಲ್ಲಿ ಮನರೇಗಾ ಯೋಜನೆಯಡಿ ಮಹಿಳೆಯರಿಗೆ ಇರುವಂತಹ ವೈಯಕ್ತಿಕ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು.
ಮನರೇಗಾದ ಮಹಿಳಾ ಕೂಲಿ ಕಾರ್ಮಿಕರು ಕೆರೆಯ ಸುತ್ತಮುತ್ತ ಸ್ವಚ್ಚತಾ ಕಾರ್ಯಕ್ರಮವನ್ನು ಕೈಗೊಂಡು ಶ್ರಮದಾನ ಮಾಡಿದರು. ಇದೇ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಂಕರ್ ನಾರಾಯಣ್, ಎನ್‍ಆರ್‍ಎಲ್‍ಎಮ್ ಸಂಚಾಲಕಿ ಆಶಾ, ಪಂಚಾಯಿತಿ ಸಿಬ್ಬಂದಿಗಳು, ಗ್ರಾಮಸ್ಥರು ಹಾಗೂ ಇತರರು ಇದ್ದರು.

LEAVE A REPLY

Please enter your comment!
Please enter your name here