ಬಂಡ್ರಿ ಗ್ರಾಮದಲ್ಲಿ ಕಾಂಗ್ರೆಸ್‌ ಡಿಜಿಟಲ್ ಸದಸ್ಯತ್ವ ನೋಂದಣಿಗೆ ಚಾಲನೆ

0
152

ಸಂಡೂರು:16:ಮಾ:- ಡಿಜಿಟಲ್ ಸದಸ್ಯತ್ವ ಅಪ್ಲಿಕೇಶನ್ ಮೂಲಕ ಕಾಂಗ್ರೆಸ್‌ ಪಕ್ಷದ ಸದಸ್ಯತ್ವ ನೊಂದಣಿಗೆ ಬಂಡ್ರಿ ಗ್ರಾಮದಲ್ಲಿ ಸಂಡೂರು ತಾಲೂಕು ಕಾಂಗ್ರೆಸ್ ಅಧ್ಯಕ್ಷ ಛತ್ರಿಕಿ ಸತೀಶ್ ಅವರು ಬುಧವಾರ ಚಾಲನೆ ನೀಡಿದರು.

ಸಂಡೂರು ತಾಲೂಕಿನ ಬಂಡ್ರಿ ಗ್ರಾಮದ 1ನೇ ವಾರ್ಡ್ನಲ್ಲಿನ ಸದಸ್ಯತ್ವ ನೋಂದಣಿಗೆ ಚಾಲನೆ ನೀಡಿ ಮಾತನಾಡಿ, ” ಕಾಂಗ್ರೆಸ್‌, ಪಕ್ಷಕ್ಕೆ ಯುವಕರೇ ಆಧಾರಸ್ತಂಭ. ಸುಭದ್ರ ರಾಷ್ಟ್ರ ಹಾಗೂ ಜಾತ್ಯತೀತ ಸಮಾಜ ಯುವಕರಿಂದ ಮಾತ್ರ ಸಾಧ್ಯ. 60 ವರ್ಷಗಳ ಇತಿಹಾಸವಿರುವ ಕಾಂಗ್ರೆಸ್‌ ಪಕ್ಷ ವಿಶ್ವದ ಅತಿದೊಡ್ಡ ಬಲಿಷ್ಠ ಸಂಘಟನೆಯಾಗಿದೆ. ದೇಶದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದೆ,’’ ಎಂದರು.

ಗ್ರಾಮದ 1ನೇ ವಾರ್ಡ್ ನಲ್ಲಿ ನಡೆದ
ಸದಸ್ಯತ್ವ ಅಭಿಯಾನದಲ್ಲಿ ಬಾಗವಹಿಸಿ ಮಾತನಾಡಿದ ಕಾಂಗ್ರೆಸ್ ಪಕ್ಷದ ಮುಖಂಡ ಹಾಗೂ ಮಾಜಿ ಗ್ರಾ.ಪಂ.ಸದಸ್ಯರಾದ ಕೆ. ನಾಗರಾಜ್ ಅವರು ಮಾತನಾಡಿ..ಈ ಸದಸ್ಯತ್ವ ಅಭಿಯಾನದಲ್ಲಿ ಯುವಕ, ಯುವತಿಯರಿಗೆ ಹೆಚ್ಚಿನ ಆದ್ಯತೆಯನ್ನು ನೀಡಿ,
‘ಕೇಂದ್ರ ಮತ್ತು ರಾಜ್ಯದಲ್ಲಿರುವ ಬಿಜೆಪಿ ಸರ್ಕಾರದ ವಿರುದ್ದ ಜನರು ಭ್ರಮ ನಿರಸನಗೊಂಡಿದ್ದಾರೆ. ಇಂಧನ ದರ ಏರಿಕೆ, ಗ್ಯಾಸ್ ಸಿಲಿಂಡರ್ ಸೇರಿದಂತೆ ಎಲ್ಲ ವಸ್ತುಗಳ ದರ ಏರಿಕೆ ಮಾಡಿರುವುದರಿಂದ ಜನರ ಜೀವನ ತುಂಬಾ ಕಷ್ಟವಾಗಿದೆ. ಹೀಗಾಗಿ ಮತದಾರರು ಕಾಂಗ್ರೆಸ್ ಪರ ಒಲವು ಹೊಂದಿದ್ದಾರೆ. ಪ್ರತಿ ಬೂತ್ ಮಟ್ಟದಲ್ಲಿಯೂ ಕಾರ್ಯಕರ್ತರ ಪಡೆಯನ್ನು ಹೊಂದಿ, ಯಾವಾಗ ಚುನಾವಣೆ ಬಂದರೂ ಎದುರಿಸಲು ಸಿದ್ಧರಾಗಿರಬೇಕು’ ಎಂದರು.

ನಂತರ ಜಿಲ್ಲಾ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷರಾದ ಆಶಾಲತಾ ಸೋಮಪ್ಪ ಮಾತನಾಡಿ. “ಕಾಂಗ್ರೆಸ್‌ಗೆ ದೊಡ್ಡ ಇತಿಹಾಸವಿದ್ದು, ಹಲವು ರಾಜ್ಯಗಳಲ್ಲಿ ಅನೇಕ ಮುಖ್ಯಮಂತ್ರಿಗಳು, ಕೇಂದ್ರದಲ್ಲಿ ಪ್ರಮುಖ ಖಾತೆಯ ಸಚಿವರು, ಸಂಸದರು, ಶಾಸಕರನ್ನು ನೀಡಿ ದೇಶದ ಅಭಿವೃದ್ಧಿಗೆ ಪೂರಕವಾಗಿ ಕಾಂಗ್ರೆಸ್‌ ಕೆಲಸ ಮಾಡಿದೆ. 60 ವರ್ಷಗಳಿಂದ ಕಾಂಗ್ರೆಸ್‌ ಪಕ್ಷ ಜನರ ಒಳಿತಿಗೆ ಕೆಲಸ ಮಾಡುತ್ತಿದೆ. ರಾಷ್ಟ್ರಕಟ್ಟುವಲ್ಲಿ ಯುವಕರ ಪಾತ್ರ ಮುಖ್ಯ ಎಂಬುದು ರಾಹುಲ್‌ ಗಾಂಧಿ ಅವರ ನಂಬಿಕೆ. ಯುವ ಸಮುದಾಯ ರಾಹುಲ್‌ ಗಾಂಧಿಯವರು ಈ ದೇಶದ ಪ್ರಧಾನಿಯನ್ನಾಗಿ ನೋಡಲು ಕಾತರರಾಗಿದ್ದಾರೆ,’’ ಎಂದು ಹೇಳಿದರು.

ಈ ಸಂಧರ್ಭದಲ್ಲಿ ತಾಲೂಕು ಕಾಂಗ್ರೆಸ್ ಅಧ್ಯಕ್ಷರಾದ ಛತ್ರಿಕಿ ಸತೀಶ್,ಜಿಲ್ಲಾ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷರಾದ ಆಶಾಲತಾ ಸೋಮಪ್ಪ, ಕಾಂಗ್ರೆಸ್ ಮುಖಂಡರಾದ ಕೆ. ನಾಗರಾಜ್, ಡಿ ಎಸ್ಎಸ್ ಮುಖಂಡರಾದ ದುರುಗೇಶ್,ಕೆ. ಬಸವರಾಜ್,ಕುಂಬಳಕಾಯಿ ಮಾರಪ್ಪ, ನಲ್ಲಜರುವಪ್ಪ, ಗುರುಬಾಲ ತಿಮ್ಮಪ್ಪ, ವಡ್ಡರ ದುರುಗೇಶ್,ಕುಮಾರಸ್ವಾಮಿ ಇತರರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here