ಕಾರ್ಬಿವ್ಯಾಕ್ಸ್ ಲಸಿಕೆ ಪಡೆದು ಕರೋನಾ ಮಹಾಮಾರಿ ಓಡಿಸಿ: ಡಾ.ಶಾಕಿರ್

0
116

ರಾಯಚೂರು ಮಾ.17 :- ಇಲ್ಲಿಯ ತಾಲೂಕು ಆರೋಗ್ಯ ಕೇಂದ್ರದ ವತಿಯಿಂದ 12ರಿಂದ 14 ವರ್ಷದೊಳಗಿನ ಶಾಲಾ ಮಕ್ಕಳು ಮತ್ತು ಶಾಲೆಯಿಂದ ಹೊರಗುಳಿದ ಎಲ್ಲ ಮಕ್ಕಳಿಗೆ ಕಾರ್ಬಿವ್ಯಾಕ್ಸ್ ಲಸಿಕೆ ನೀಡಲಾಗುತ್ತಿದ್ದು, ಪೋಷಕರು ತಮ್ಮ ಮಕ್ಕಳಿಗೆ ಕಾರ್ಬಿವ್ಯಾಕ್ಸ್ ಲಸಿಕೆ ಕೊಡಿಸುವಲ್ಲಿ ಆಸಕ್ತಿಯಿಂದ ಮುಂದೆ ಬರಬೇಕು ಎಂದು ತಾಲೂಕ ಆರೋಗ್ಯ ಅಧಿಕಾರಿಗಳು ಡಾ. ಎಂ.ಡಿ. ಶಾಕಿರ್ ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದರು.

ಅವರು ಮಾ.17ರ ಗುರುವಾರ ದಂದು ತಾಲೂಕಿನ ಜೆ.ಮಲ್ಲಾಪೂರ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದ ಕಾರ್ಬಿವ್ಯಾಕ್ಸ್ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮಾತನಾಡಿದರು.

ಕಾರ್ಬಿವ್ಯಾಕ್ಸ್ ಲಸಿಕೆ ಪಡೆದುಕೊಳ್ಳುವುದರಿಂದ ಜಗತ್ತಿನಾದ್ಯಂತ ಕಾಡುತ್ತಿರುವ ಕರೋನಾ ಎಂಬ ಮಹಾಮಾರಿ ವೈರಸ್‌ನ್ನು ತಡೆಗಟ್ಟುವಲ್ಲಿ ಕಾರ್ಬಿವ್ಯಾಕ್ಸ್ ಪ್ರಮುಖ ಪಾತ್ರವಹಿಸುತ್ತದೆ. ಪ್ರಸ್ತುತವಾಗಿ ಸಾರ್ವಜನಿಕ ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತೀದೆ. ತದನಂತರ ಹಂತ ಹಂತವಾಗಿ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುವುದು ಎಂದರು.

60ವರ್ಷ ಮೇಲ್ಪಟ್ಟವರು ಮುನ್ನೇಚ್ಚರಿಕೆ ಕ್ರಮವಾಗಿ ಲಸಿಕೆಯನ್ನು ಪಡೆಯಬೇಕು ಮತ್ತು ಇಲ್ಲಿಯವರೆಗೆ 15 ವರ್ಷದಿಂದ 60ವರ್ಷ ಮೆಲ್ಪಟ್ಟವರು ಮೊದಲನೇ ಡೋಸ್ ಪಡೆದು, ಎರಡನೇ ಡೋಸ್ ಪಡೆದು 9 ತಿಂಗಳುಗಳಾಗಿದ್ದರೆ ಅವರು ಕೂಡ ಸ್ವ-ಇಚ್ಛೆಯಿಂದ ಮುಂದೆ ಬಂದು ಲಸಿಕೆ ಪಡೆದುಕೊಂಡು ಕರೋನಾ ಎಂಬ ಮಹಾಮಾರಿ ರೋಗದ ವಿರುದ್ಧ ಹೋರಾಡಲು ಸಹಕರಿಸಬೇಕು ಎಂದು ಹೇಳಿದರು.

ಈ ವೇಳೆ ಗ್ರಾಮ ಪಂಚಾಯತ ಅಧ್ಯಕ್ಷರಾದ ಲಕ್ಷಿö್ಮÃ, ಗ್ರಾ.ಪಂ.ಸದಸ್ಯ ಸಿದ್ದಪ್ಪ, ಸಮುದಾಯ ಆರೋಗ್ಯ ಕೇಂದ್ರದ ಮಕ್ಕಳ ತಜ್ಞನರಾದ ಡಾ ಟೀಕರಾವ್, ಹರವಳಿಕೆ ತಜ್ಞರಾದ ಡಾ.ಪ್ರಜ್ವಲ, ದಂತ ತಜ್ಞರಾದ ಡಾ.ಶೀತಲ್, ಸಮುದಾಯ ಕೇಂದ್ರದ ವೈದ್ಯಾಧಿಕಾರಿ ಡಾ.ಸುರೇಶ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರಂಗರಾವ್ ಕುಲಕರ್ಣಿ ಸೇರಿದಂತೆ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು.
◆◆◆◆◆◆◆◆◆
ಡಾ.ಬಾಬು ಜಗಜೀವನ ರಾಂ, ಡಾ.ಬಿ.ಆರ್.ಅಂಬೇಡ್ಕರ ಅವರ ಜನ್ಮ ದಿನಾಚರಣೆ ಅಂಗವಾಗಿ ಅರ್ಹ ವ್ಯಕ್ತಿಗಳಿಂದ ಪ್ರಶಸ್ತಿಗೆ ಅರ್ಜಿ ಆಹ್ವಾನ

ರಾಯಚೂರು ಮಾ.17 :- ಇಲ್ಲಿಯ ಸಮಾಜ ಕಲ್ಯಾಣ ಇಲಾಖೆ ವಯಿತಿಂದ ಡಾ.ಬಾಬು ಜಗಜೀವನ ರಾಂ ಅವರ 115ನೇ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಅವರ 131ನೇ ಜನ್ಮ ದಿನಾಚರಣೆ ಅಂಗವಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರುತಿಸಿ 2022-23ನೇ ಸಾಲಿನ ಡಾ.ಬಾಬು ಜಗಜೀವನ ರಾಂ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗಳನ್ನು ನೀಡಿ ಗೌರವಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಮಾನದಂಡಗಳು: ಯಾವುದೇ ವ್ಯಕ್ತಿ ಒಂದು ಪ್ರಶಸ್ತಿಗೆ ಮಾತ್ರ ಅರ್ಜಿ ಸಲ್ಲಿಸತಕ್ಕದ್ದು, ಅರ್ಜಿದಾರರ ವಯಸ್ಸು ಕನಿಷ್ಠ 35 ವರ್ಷಗಳಾಗಿರತಕ್ಕದ್ದು, ಯಾವುದೇ ವ್ಯಕ್ತಿಯನ್ನು ಒಂದು ಪ್ರಶಸ್ತಿಗೆ ಮಾತ್ರ ಆಯ್ಕೆ ಮಾಡತಕ್ಕದ್ದು, ಪ್ರಶಸ್ತಿಗೆ ಯಾವುದೇ ಜನಾಂಗದ ವ್ಯಕ್ತಿ ಅರ್ಜಿ ಸಲ್ಲಿಸಬಹುದು, ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರಶಸ್ತಿಯನ್ನು ಗರಿಷ್ಠ 10 ಜನರಿಗೆ ಮತ್ತು ಡಾ.ಬಾಬು ಜಗಜೀವನರಾಂ ಪ್ರಶಸ್ತಿಯನ್ನು ಗರಿಷ್ಠ 10 ಜನರಿಗೆ ನೀಡಲಾಗುವುದು, ಅಂತಹ ಪ್ರಶಸ್ತಿಗಳನ್ನು ಕ್ರಮವಾಗಿ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನರಾಂ ಇವರ ಜನ್ಮ ದಿನಾಚರಣೆ ಸಮಾರಂಭದಲ್ಲಿ ಪ್ರಧಾನ ಮಾಡಲಾಗುವುದು, ಪ್ರಶಸ್ತಿಯು ಪ್ರಶಂಸಾ ಪತ್ರ, ಶಾಲು, ಗಂಧದಹಾರ, ಫಲಪುಷ್ಟ ಹಾಗೂ 25,000/-ರೂ.ಗಳ ಮೊತ್ತದ ನಗದು ಒಳಗೊಂಡಿರುತ್ತದೆ, ಪ್ರಶಸ್ತಿಗೆ ಅರ್ಜಿ ಸಲ್ಲಿಸುವ ವ್ಯಕ್ತಿಯು ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿರತಕ್ಕದ್ದಲ್ಲ.

ಅರ್ಜಿಗಳನ್ನು ಸಂಬAಧಪಟ್ಟ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಇವರಿಗೆ ಸಲ್ಲಿಸಬೇಕು. ಅಂತಹ ಅರ್ಜಿಗಳನ್ನು ಜಿಲ್ಲಾಧಿಕಾರಿಗಳು ಅವರ ಹಂತದಲ್ಲಿ ಪರಿಶೀಲಿಸಿ ಸೂಕ್ತ ವ್ಯಕ್ತಿಗಳನ್ನು ಗುರುತಿಸಿ ಜಿಲ್ಲೆಗೆ ಒಬ್ಬರಂತೆ (ಒಂದು ವೇಳೆ ಒಂದೇ ಜಿಲ್ಲೆಯಲ್ಲಿ ಒಂದಕ್ಕಿAತ ಹೆಚ್ಚು ಅರ್ಹ ವ್ಯಕ್ತಿಗಳು ಇದ್ದಲ್ಲಿ ವಯಸ್ಸಿನ ಆಧಾರದ ಮೇಲೆ) ಶಿಫಾರಸ್ಸು ಮಾಡಿ ಮಾನ್ಯ ಆಯುಕ್ತರು ಸಮಾಜ ಕಲ್ಯಾಣ ಇಲಾಖೆ ಬೆಂಗಳೂರುರವರಲ್ಲಿ ಸಲ್ಲಿಸುವುದು, ರಾಜ್ಯ ಮಟ್ಟದಲ್ಲಿ ಸಾಮಾಜಿಕ ಸೇವೆ ಸಲ್ಲಿಸುತ್ತಿರುವ ಅರ್ಹ ವ್ಯಕ್ತಿಗಳು ನೇರವಾಗಿ ಅರ್ಜಿಗಳನ್ನು ಮಾನ್ಯ ಆಯುಕ್ತರು ಸಮಾಜ ಕಲ್ಯಾಣ ಇಲಾಖೆ ಬೆಂಗಳೂರುರವರಲ್ಲಿ ಸಲ್ಲಿಸಬಹುದು.

ಜಿಲ್ಲಾಧಿಕಾರಿಗಳಿಂದ ಶಿಫಾರಸ್ಸಾದಂತಹ ಅರ್ಜಿಗಳು ಹಾಗೂ ಬೆಂಗಳೂರಿನ ಸಮಾಜ ಕಲ್ಯಾಣ ಇಲಾಖೆ ಆಯುಕ್ತರಿಗೆ ನೇರವಾಗಿ ಸಲ್ಲಿಸಲ್ಪಟ್ಟ ಎಲ್ಲಾ ಅರ್ಜಿಗಳನ್ನು ಮಾನ್ಯ ಆಯುಕ್ತರು ಸಮಾಜ ಕಲ್ಯಾಣ ಇಲಾಖೆ ಬೆಂಗಳೂರುರವರು ಪರಿಶೀಲಿಸಿ ಪ್ರಶಸ್ತಿಗೆ ಅರ್ಹರೆಂದು ಕಂಡುಬರುವ ವ್ಯಕ್ತಿಗಳ ಪಟ್ಟಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು, ಅಂತಹ ಅರ್ಜಿಗಳನ್ನು ಪರಿಶೀಲಿಸಲು ರಾಜ್ಯ ಮಟ್ಟದಲ್ಲಿ ಸಮಿತಿಯನ್ನು ರಚಿಸಲಾಗಿರುತ್ತದೆ.

ಆಸಕ್ತರು ಅರ್ಜಿ ನಮೂನೆಯನ್ನು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರ ಕಚೇರಿ ಅಥವಾ ಆಯಾ ತಾಲೂಕಿನ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕರು ಗ್ರೇಡ್-1&2ಕಚೇರಿಯಲ್ಲಿ ಪಡೆದು ಮಾ.19ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಉಪೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
◆◆◆◆◆◆◆◆◆◆
ಜಗಜೀವನರಾಂ, ಅಂಬೇಡ್ಕರ್ ಜಯಂತಿ: ಮಾ.22, 24ರಂದು ಪೂರ್ವಭಾವಿ ಸಭೆ

ರಾಯಚೂರು ಮಾ.17 :- ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ 2022-23ನೇ ಸಾಲಿಗೆ ಹಸಿರು ಕ್ರಾಂತಿಯ ಹರಿಕಾರ ಡಾ.ಬಾಬು ಜಗಜೀವನರಾಂ ಜಯಂತಿಯನ್ನು ಎಪ್ರೀಲ್‌05ರಂದು ಆಚರಣೆ ಹಿನ್ನಲೆಯಲ್ಲಿ ಇದೇ ಮಾ.22ರ ಬೆಳಿಗ್ಗೆ 11ಗಂಟೆಗೆ ಹಾಗೂ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 131ನೇ ಜನ್ಮ ದಿನಾಚರಣೆಯನ್ನು ಎಪ್ರೀಲ್ 14ರಂದು ಆಚರಿಣೆ ಅಂಗವಾಗಿ ಇದೇ ಮಾ.24ರ ಬೆಳಿಗ್ಗೆ 11ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಂಘ ಸಂಸ್ಥೆಯ ಮುಖಂಡರುಗಳ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ.

ಈ ಸಭೆಗೆ ಹಾಜರಾಗಿ ತಮ್ಮ ಸಲಹೆ ಸೂಚನೆಗಳನ್ನು ನೀಡುವಂತೆ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.
◆◆◆◆◆◆◆

ಮಹಿಳೆಯರು ತಯಾರಿಸಿದ ಉತ್ಪನ್ನಗಳಿಗೆ ಉತ್ತಮ ಮಾರುಕಟ್ಟೆ: ಶಿವರಾಜ

ರಾಯಚೂರು ಮಾ.17 :- ಸಂಜೀವಿನಿ ಮಾಸಿಕ ಸಂತೆಯು ಗ್ರಾಮೀಣ ಭಾಗದ ಸ್ವ-ಸಹಾಯ ಸಂಘಗಳಲ್ಲಿ ತೊಡಗಿಕೊಂಡಿರುವ ಮಹಿಳೆಯರು ತಯಾರಿಸಿರುವ ಉತ್ಪನ್ನಗಳಿಗೆ ಉತ್ತಮ ವೇದಿಕೆಯಾಗಿದೆ ಎಂದು ಎನ್.ಆರ್.ಎಲ್.ಎಮ್ ಮಾನವಿ ತಾಲೂಕು ಯೋಜನಾ ವ್ಯವಸ್ಥಾಪಕರಾದ ಶಿವರಾಜ ಅವರು ಹೇಳಿದರು.

ಅವರು ಮಾ.17ರ ಗುರುವಾರ ದಂದು ಜಿಲ್ಲೆಯ ಮಾನವಿ ತಾಲೂಕಿನ ಪೋತ್ನಾಳ ಗ್ರಾಮದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ಜಿಲ್ಲಾ ಪಂಚಾಯತಿ, ಮಾನವಿ ತಾಲ್ಲೂಕು ಪಂಚಾಯತಿ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂಜೀವಿನಿ ಮಾಸಿಕ ಸಂತೆಯಲ್ಲಿ ಮಾರಾಟ ಮತ್ತು ಪ್ರದರ್ಶನದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಎನ್.ಆರ್.ಎಲ್.ಎಮ್ ಸಂಜೀವಿನಿ ಯೋಜನೆಯಡಿ ಆರ್ಥಿಕ ಸೌಲಭ್ಯ ಪಡೆದಿರುವ ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯರು ಮನೆಗಳಲ್ಲಿಯೇ ವಿವಿಧ ಉತ್ಪನ್ನಗಳನ್ನು ತಯಾರಿಸುತ್ತಿದ್ದಾರೆ. ಈ ಉತ್ಪನ್ನಗಳಿಗೆ ಮಾರುಕಟ್ಟೆ ದೊರಕಿಸಿ ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸುವ ಉದ್ದೇಶದಿಂದ ಮಾಸಿಕ ಸಂತೆಯನ್ನು ಆರಂಭಿಸಲು ಸರ್ಕಾರ ಸೂಚಿಸಿದೆ. ಅದರಂತೆ ಜಿಲ್ಲೆಯಲ್ಲಿ ಆರಂಭಿಸಲಾಗಿದೆ. ತಿಂಗಳಿಗೆ 3 ಸಂತೆಗಳನ್ನು ನಡೆಸುವ ಗುರಿ ಹೊಂದಲಾಗಿದೆ ಎಂದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯ 18ಮಹಿಳಾ ಸ್ವ-ಸಹಾಯ ಸಂಘಗಳ ಸದಸ್ಯೆಯರು ತಾವು ತಯಾರಿಸಿದ ಉತ್ಪನ್ನಗಳನ್ನು ಪ್ರದರ್ಶನ ಹಾಗೂ ಮಾರಾಟಕ್ಕೆ ಇಟ್ಟಿದ್ದರು. ಆಹಾರ ಉತ್ಪನ್ನಗಳು, ಕರಕುಶಲ ವಸ್ತುಗಳು ಲಭ್ಯವಿದ್ದವು ಎಂದು ತಿಳಿಸಿದರು.

ಜಿಲ್ಲೆಯ ನಗರ, ಗ್ರಾಮೀಣ ಸ್ವ-ಸಹಾಯ ಗುಂಪುಗಳ ಸದಸ್ಯರು ಜೀವನ ಶೈಲಿ ಬದಲಾಯಿಸಿಕೊಂಡು ವಿವಿಧ ರೀತಿಯ ಉತ್ಪನ್ನಗಳ ತಯಾರಿಸುವುದರಿಂದ ಅವರ ಕುಟುಂಬದ ಆದಾಯ ದ್ವಿಗುಣಗೊಳಿಸುವಲ್ಲಿ ಸಹಕಾರಿಯಾಗಿದೆ. ಸ್ವ-ಸಹಾಯ ಗುಂಪುಗಳ ಸದಸ್ಯರು ಉತ್ಪಾದಿಸಿರುವ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ 18ಮಳಿಗೆಗಳನ್ನು ಹಾಕಲಾಗಿದೆ.

ಒಂದೇ ರೀತಿಯ ಉತ್ಪನ್ನಗಳಿರದೇ ವಿವಿಧ ರೀತಿಯ ಉತ್ಪನ್ನಗಳಿಗೆ ಅವಕಾಶ ನೀಡಲಾಗಿದೆ. ಸಂಜೀವಿನಿ ಯೋಜನೆ ಅಡಿಯಲ್ಲಿ ಸ್ವ-ಸಹಾಯ ಗುಂಪುಗಳಿಗೆ ಅತೀ ಕಡಿಮೆ ಬಡ್ಡಿ ದರದಲ್ಲಿ ಹಣಕಾಸಿನ ನೆರವು ನೀಡಲಾಗುತ್ತದೆ. ರೈತ ಮಹಿಳೆಯರಿಗೂ ಸಹಾಯಧನ ನೀಡುವುದರ ಜೊತೆಗೆ ತರಬೇತಿಯೂ ನೀಡಲಾಗುತ್ತಿದೆ ಎಂದರು. ಈ ವೇಳೆ ಸಂಜೀವಿನಿ ಮಾಸಿಕ ಸಂತೆಯನ್ನು ಪೋತ್ನಾಳ ಗ್ರಾಮ ಪಂಚಾಯತ್ ಅಧ್ಯಕ್ಷ ಗಂಗಮ್ಮ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಕಾರ್ಯದರ್ಶಿ ಸಿದ್ದಯ್ಯ ಸ್ವಾಮಿ, ಡಿಒ ಶರಣು ಬಸವ, ಧೈರ್ಯ ಲಕ್ಷ್ಮೀ ಒಕ್ಕೂಟದ ಅಧ್ಯಕ್ಷ ಚೇತನಾ, ಕಾರ್ಯದರ್ಶಿ ವಿಜಯಲಕ್ಷ್ಮಿ, ಖಜಾಂಚಿ ಲಕ್ಷ್ಮೀ, ಎಂ.ಬಿ.ಕೆ ಶಾರದಾ, ಎಲ್.ಸಿ.ಆರ್.ಪಿ ಮೀನಾಕ್ಷಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
◆◆◆◆◆◆◆◆◆◆

ರಾಯಚೂರು ಶಿಶು ಅಭಿವೃದ್ಧಿ: ಅಂಗನವಾಡಿ ಸಹಾಯಕಿರ ಹುದ್ದೆಗೆ ಅರ್ಜಿ ಆಹ್ವಾನ

ರಾಯಚೂರು ಮಾ.17:- ರಾಯಚೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ವ್ಯಾಪ್ತಿಯಲ್ಲಿ ಅಂಗನವಾಡಿ ಸಹಾಯಕಿರ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.

ಯಾಪಲದಿನ್ನಿ ಗ್ರಾಮ ಪಂಚಾಯತಿಯ ವಡ್ಡೆಪಲ್ಲಿ ಗ್ರಾಮದ ಅಂಗನವಾಡಿ ಕೇಂದ್ರ
ಸಂಖ್ಯೆ-01ಕ್ಕೆ ಎಸ್.ಟಿ, ಯಾಪಲದಿನ್ನಿ ಗ್ರಾಮ ಪಂಚಾಯತಿಯ ಅಪ್ಪನದೊಡಿ ಗ್ರಾಮದ ಅಂಗನವಾಡಿ ಕೇಂದ್ರ ಸಂಖೆ-1ಕ್ಕೆ ಸಾಮಾನ್ಯ,
ಆತ್ಕೂರು ಗ್ರಾಮ ಪಂಚಾಯತಿಯ ಡಿ.ರಾಂಪೂರು ಗ್ರಾಮದ ಅಂಗನವಾಡಿ ಕೇಂದ್ರ ಸಂಖ್ಯೆ-3ಕ್ಕೆ ಸಾಮಾನ್ಯ,
ಮಮದಾಪೂರು ಗ್ರಾಮ ಪಂಚಾಯತಿಯ ಆಶಾಪೂರು ಗ್ರಾಮದ ಅಂಗನವಾಡಿ ಕೇಂದ್ರ ಸಂಖ್ಯೆ-01ಕ್ಕೆ ಸಾಮಾನ್ಯ, ಮಮದಾಪೂರು ಗ್ರಾಮ ಪಂಚಾಯತಿಯ ಆಶಾಪೂರು ಗ್ರಾಮದ ಅಂಗನವಾಡಿ ಕೇಂದ್ರ ಸಂಖ್ಯೆ-02ಕ್ಕೆ ಎಸ್.ಸಿ, ರಾಯಚೂರಿನ ವಾರ್ಡ ನಂ:02ರ ಜನತಾ ಕಾಲೋನಿಯ ಅಂಗನವಾಡಿ ಕೇಂದ್ರ ಸಂಖ್ಯೆ-01ಕ್ಕೆ ಸಾಮಾನ್ಯ, ವಾರ್ಡ ನಂ:35ರ ರಾಂಪೂರು ಅಂಗನವಾಡಿ ಕೇಂದ್ರ ಸಂಖ್ಯೆ-7ಕ್ಕೆ ಎಸ್.ಸಿ, ವಾರ್ಡ ನಂ:18ರ ಖಾದರಗುಂಡಾ ಅಂಗನವಾಡಿ ಕೇಂದ್ರ ಸಂಖ್ಯೆ-02ಕ್ಕೆ ಸಾಮಾನ್ಯ, ಆತ್ಕೂರು ಗ್ರಾಮದ ಅಂಗನವಾಡಿ ಕೇಂದ್ರ ಸಂಖ್ಯೆ-1ಕ್ಕೆ ಎಸ್.ಸಿ, ವಾರ್ಡ ನಂ:10ರ ಬೇರೂನ್ ಖಿಲ್ಲಾ ಅಂಗನವಾಡಿ ಕೇಂದ್ರ ಸಂಖ್ಯೆ-04ಕ್ಕೆ ಸಾಮಾನ್ಯ ವರ್ಗದವರಿಗೆ ಮೀಸಲಾತಿ ನಿಗಧಿ ಮಾಡಲಾಗಿದ್ದು, ಅರ್ಹ ಅಭ್ಯರ್ಥಿಗಳು ಎಪ್ರೀಲ್ 16ರೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ರಾಯಚೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here