ರೆಡ್‍ಕ್ರಾಸ್ ಕರ್ನಾಟಕ ಶಾಖೆಗೆ ಶತಮಾನೋತ್ಸವ ವಿಶೇಷ ಕಾರ್ಯಕ್ರಮ,
ಉತ್ತಮ ಸಮಾಜ ನಿರ್ಮಾಣದಲ್ಲಿ ಮಹಿಳೆಯ ಕೊಡುಗೆ ಅಪಾರ

0
112

ಬಳ್ಳಾರಿ,ಮಾ.18 : ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕರ್ನಾಟಕ ರಾಜ್ಯ ಶಾಖೆಯು ಶತಮಾನೋತ್ಸವ ಪೂರ್ಣಗೊಳಿಸಿದ ಸಂಭ್ರಮದಲ್ಲಿರುವ ಹಿನ್ನೆಲೆ ರೆಡ್‍ಕ್ರಾಸ್ ಸಂಸ್ಥೆಯ ಬಳ್ಳಾರಿ ಘಟಕ ಹಾಗೂ ಸಮಾಜಕಲ್ಯಾಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ನಗರದ ಕೋಟೆ ಪ್ರದೇಶದಲ್ಲಿರುವ ಮಹಿಳಾ ವಸತಿ ಗೃಹದಲ್ಲಿ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ರೆಡ್‍ಕ್ರಾಸ್ ಸಂಸ್ಥೆಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಸಹ ಅಧ್ಯಕ್ಷರಾದ ಸಾಧನಾ ಹಿರೇಮಠ ಅವರು ಮಾತನಾಡಿ, ಮಹಿಳೆಯರು ಅನೇಕ ಒತ್ತಡಗಳಲ್ಲಿ ಜೀವನ ಸಾಗಿಸುತ್ತಾ ಉತ್ತಮ ಸಮಾಜ ನಿರ್ಮಿಸುವಲ್ಲಿ ಶ್ರಮಿಸುತ್ತಿದ್ದಾರೆ ಎಂದರು.
ಮಹಿಳಾ ವಸತಿ ಗೃಹದಲ್ಲಿರುವ ಮಹಿಳೆಯರ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು ಎಂದು ತಿಳಿಸಿದ ಅವರು ಯಾವ ರೀತಿಯ ಆರೋಗ್ಯ ಕಾಪಾಡುವಿಕೆಗೆ ಒತ್ತು ನೀಡಬೇಕು ಎಂಬುದನ್ನು ಈ ಸಂದರ್ಭದಲ್ಲಿ ತಿಳಿಸಿಕೊಟ್ಟರು.
ರೆಡ್‍ಕ್ರಾಸ್ ಸಂಸ್ಥೆ ಉಪಸಭಾಪತಿ ಡಾ.ಎಸ್.ಜೆ.ವಿ.ಮಹಿಪಾಲ್ ಮಾತನಾಡಿದರು.
ಈ ಸಂದರ್ಭದಲ್ಲಿ ರೆಡ್‍ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಎಂ.ಎ.ಷಕೀಬ್, ರೆಡ್‍ಕ್ರಾಸ್ ಸಂಸ್ಥೆಯ ರಕ್ತದಾನ ಸಮಿತಿಯ ಸಹ ಅಧ್ಯಕ್ಷ ಬಿ.ದೇವಣ್ಣ ಸೇರಿದಂತೆ 100ಕ್ಕೂ ಹೆಚ್ಚು ಮಹಿಳಾ ವಿದ್ಯಾರ್ಥಿನಿಯರು ಇದ್ದರು.
ಇದೇ ಸಂದರ್ಭದಲ್ಲಿ ಮಹಿಳಾ ವಿಧ್ಯಾರ್ಥಿನಿಯರಿಗೆ ಉಚಿತವಾಗಿ ಹೈಜೀನ್ ಕಿಟ್‍ಗಳನ್ನು ವಿತರಿಸಲಾಯಿತು.

LEAVE A REPLY

Please enter your comment!
Please enter your name here