ಪಳವಳ ಕಟ್ಟೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ : 8 ಮಂದಿ ಸ್ಥಳದಲ್ಲೇ ಮೃತ್ಯು : 25ಕ್ಕೂ ಹೆಚ್ಚು ಮಂದಿ ಗಾಯ..!!

0
57

ಪಾವಗಡ : ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆಯ ಬಳಿ ಖಾಸಗಿ ಬಸ್ಸೊಂದು ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿ ಅದರಲ್ಲಿ 8 ಮಂದಿ ಸ್ಥಳದಲ್ಲೇ ಮೃತಪಟ್ಟು 25ಕ್ಕೂ ಹೆಚ್ಚು ಮಂದಿ ಗಂಭೀರ ಗಾಯಗೊಂಡ ಘಟನೆ ಇಂದು ನಡೆದಿದೆ.

ಈ ಭೀಕರ ರಸ್ತೆ ಅಪಘಾತದಲ್ಲಿ ಎಂಟು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ ‌. ಬಸ್‌ನಲ್ಲಿದ್ದ 25ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯವಾಗಿದೆ ಎಂದು ಎನ್ನಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಬಸ್ ಉರುಳಿ ಬಿದ್ದಿದೆ ಎಂದು ಮಾಹಿತಿ ತಿಳಿಯಲಾಗಿದೆ.

ಪರಿಹಾರದ ಕುರಿತು ಸಾರಿಗೆ ಇಲಾಖೆಯ ಸಚಿವ ಬಿ.ಶ್ರೀರಾಮುಲು ಘೋಷಣೆ ಮಾಡಿದ್ದು, ದುರಂತದಲ್ಲಿ ಸಾವನ್ನಪ್ಪಿರುವ ಪ್ರಯಾಣಿಕರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ನೀಡುವುದು.ಇನ್ನು ಗಾಯಾಳುಗಳಿಗೆ ತಲಾ 50 ಸಾವಿರ ಪರಿಹಾರ ಘೋಷಣೆ ಮಾಡಿದೆ. ಇನ್ನು ಮೃತರ ಕುಟುಂಬಕ್ಕೆ ವೈಯಕ್ತಿಕವಾಗಿ ರಾಮುಲು 1ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿಕಟ್ಟೆ ಬಳಿ ಇಂದು ಬೆಳಗ್ಗೆ ಖಾಸಗಿ ಬಸ್ ಪಲ್ಟಿಯಾಗಿ 8 ಜನರು ಮೃತಪಟ್ಟಿದ್ದು, ಇವರಲ್ಲಿ ನಾಲ್ವರು ವಿದ್ಯಾರ್ಥಿಗಳು ಸೇರಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

ಪಳವಳ್ಳಿ ಕಟ್ಟೆ ಬಳಿ ತಿರುವಿನಲ್ಲಿ ಎಸ್ ವಿ ಟಿ ಟ್ರಾವಲ್ ಗೆ ಸೇರಿದ ಖಾಸಗಿ ಬಸ್ ಪಲ್ಟಿಯಾಗಿ ನಾಲ್ವರು ವಿದ್ಯಾರ್ಥಿಗಳು ಸೇರಿದಂತೆ 8 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 25 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗೊಂಡಿದ್ದಾರೆ. ಮೃತ ವಿದ್ಯಾರ್ಥಿಗಳನ್ನು ವೈ.ಎ.ಹೊಸಕೋಟೆ ಮೂಲದ ಕಲ್ಯಾಣ್ (18), ಅಮೂಲ್ಯ (17), ಅಜಿತ್ (21) ಹಾಗೂ ಶಾ.ನವಾಜ್ (19) ಎಂದು ಗುರುತಿಸಲಾಗಿದೆ. ಮೃತ ವಿದ್ಯಾರ್ಥಿಗಳು ಪಾವಗಡ ಜೂನಿಯರ್ ಕಾಲೇಜು ವಿದ್ಯಾರ್ಥಿಗಳಾಗಿದ್ದಾರೆ…

ಪಾವಗಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಪ್ರಕರಣ ದಾಖಲಾಗಿದೆ. ಪೊಲೀಸರು ಘಟನೆ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.

ಅಪಘಾತದಲ್ಲಿ ಮೃತಪಟ್ಟವರ ವಿವರಗಳು ತಿಳಿದು ಬರಬೇಕಿದೆ.ಗಂಭೀರ ಗಾಯಗೊಂಡವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ.

-ನಂದೀಶ್ ನಾಯಕ

LEAVE A REPLY

Please enter your comment!
Please enter your name here