ಮಾ.23 ರಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ 6ನೇ ಘಟಿಕೋತ್ಸವ

0
89

ಕಲಬುರಗಿ.ಮಾ.21:ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ 6ನೇ ಘಟಿಕೋತ್ಸವವನ್ನು ಇದೇ ಮಾಚ್ 23ರಂದು ಬೆಳಿಗ್ಗೆ 9 ಗಂಟೆಗೆ ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪೆÇ್ರ. ಬಟ್ಟು ಸತ್ಯನಾರಾಯಣ ಅವರು ತಿಳಿಸಿದರು.

ಸೋಮವಾರದಂದು ಕಡಗಂಚಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಅತಿಥಿ ಗೃಹ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 6ನೇ ಘಟಿಕೋತ್ಸವದಲ್ಲಿ 2020 ಮತ್ತು 2021ರಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ವಿವಿಧ ವಿಷಯಗಳ ಮೇಲೆ ಪದವಿಗಳನ್ನು ನೀಡಲಾಗುತ್ತಿದೆ ಎಂದರು.

ಒಟ್ಟು 1415 ವಿದ್ಯಾರ್ಥಿಗಳು 6ನೇ ಘಟಿಕೋತ್ಸವದಲ್ಲಿ ಪದವಿ ಸ್ವೀಕರಿಸಲು ಅರ್ಹರಾಗಿದ್ದು, ಪಿಎಚ್‍ಡಿ ಪದವಿ-37, ಎಂ.ಫಿಲ್ ಪದವಿ-2 ಪದವಿಗಳನ್ನು ನೀಡಲಾಗುವುದು. ಇದರ ಜೊತೆಗೆ ಪೆÇ್ರ. ಎ.ಎಂ.ಪಠಾಣ್ 2020ನೇ ವರ್ಷದ ಚಿನ್ನದ ಪದಕವು ಸೌರವ್ ಸೋಲಂಕಿ (ಎಂ.ಟೆಕ್- ಕಂಪ್ಯೂಟರ್ ಸೈನ್ಸ್ ಮತ್ತು ಟೆಕ್ನಾಲಜಿ) ಇವರಿಗೆ ಲಭಿಸಿದೆ. 2021ನೇ ವರ್ಷದ ಚಿನ್ನದ ಪದಕವು ಭಾರ್ಗವ್ ಸಾಯಿ ಬರಾಲಾ (ಎಂ.ಟೆಕ್- ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ) ಅವರಿಗೆ ನೀಡಲಾಗುವುದು ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಇದೇ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಕುಲ ಸಚಿವ ಪ್ರೊ. ಬಸವರಾಜ ಪಿ. ಡೋಣೂರ ಮಾತನಾಡಿ, ಒಟ್ಟು 69 ವಿದ್ಯಾರ್ಥಿಗಳು 71 ಚಿನ್ನದ ಪದಕಗಳನ್ನು ವಿವಿಧ ವಿಷಯಗಳಲ್ಲಿ ಪಡೆಯಲಿದ್ದಾರೆ. ವಿಶ್ವವಿದ್ಯಾಲಯವು ಸಂಶೋಧನೆ ಮತ್ತು ವಿವಿಧ ವಿಭಾಗಗಳಿಗೆ ಗುಣಮಟ್ಟ ಶಿಕ್ಷಣಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಲಿದೆ ಮತ್ತು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಕೌಶಲ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಎಲ್ಲಾ ವಿಭಾಗಗಳಲ್ಲಿ ಅಭಿವೃದ್ಧಿ ಮಾಡಲಾಗುತ್ತಿದೆ ಎಂದರು.

ಹೊಸ ಶಿಕ್ಷಣ ನೀತಿ ಅನುಷ್ಠಾನದಲ್ಲಿ ತೊಂದರೆಗಳನ್ನು ಹೇಗೆ ನಿವಾರಣೆ ಮಾಡಬಹುದು ಎಂಬುದರ ಬಗ್ಗೆ ಹೇಳಲಾಗುತ್ತಿದೆ. ಜೊತೆಗೆ ಈ ಭಾಗದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪರೀಕ್ಷೆ ಬರೆದು, ಪ್ರವೇಶಾತಿ ಪಡೆಯಬೇಕು. ಈ ನಿಟ್ಟಿನಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ವಿಶ್ವವಿದ್ಯಾಲಯದ ಪರೀಕ್ಷಾ ನಿಯಂತ್ರಣಾಧಿಕಾರಿ ಪ್ರೊ. ಬಸವರಾಜ್ ಆರ್. ಕೆರೂರು, ಸಾರ್ವಜನಿಕ ಸಂಪರ್ಕಾಧಿಕಾರಿ ದೀಪ್ತಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here