ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಸಭೆಯ ಪ್ರಗತಿ ಪರಿಶೀಲನಾ ಸಭೆ,
ಪ್ರತಿ ಗ್ರಾಪಂಗಳಲ್ಲಿ ತಂಬಾಕು ನಿಯಂತ್ರಣ ಸಮಿತಿ ರಚಿಸಿ: ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ

0
82

ಬಳ್ಳಾರಿ,ಮಾ.23 : ಜಿಲ್ಲೆಯಲ್ಲಿರುವ 30 ಆಸನಗಳ ಮೇಲ್ಪಟ್ಟ ಬಾರ್ ಮತ್ತು ರೆಸ್ಟೋರೆಂಟ್‍ಗಳಲ್ಲಿ ಕೋಟ್ಪಾ ಕಾಯ್ದೆಯ ಅನುಸಾರ ನಾಮಫಲಕ ಅಳವಡಿಸುವುದರ ಜೊತೆಗೆ ಧೂಮಪಾನ ಪ್ರದೇಶಗಳನ್ನು ಸ್ಥಾಪಿಸಬೇಕು;ಈ ಕುರಿತು ಕಟ್ಟುನಿಟ್ಟಿನ ಸೂಚನೆ ನೀಡಿ ಎಂದು ಅಬಕಾರಿ ಇಲಾಖೆಯ ಉಪ ಆಯುಕ್ತರಿಗೆ ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ವಿಡಿಯೋ ಕಾನ್ಪರೆನ್ಸ್ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬಾರ್ ಮತ್ತು ರೆಸ್ಟೋರೆಂಟ್‍ಗಳಲ್ಲಿ ಕೋಟ್ಪಾ ಕಾಯ್ದೆಯ ಅನುಸಾರ ಕಟ್ಟುನಿಟ್ಟಿನ ಸೂಚನೆ ನೀಡಿದಾಗಿಯೂ ನಿರ್ಲಕ್ಷ್ಯ ಮುಂದುವರಿಸಿದ್ದಲ್ಲಿ ಅವರ ಮೇಲೆ ನಿಯಮಾನುಸಾರ ಕ್ರಮಕೈಗೊಳ್ಳುವಂತೆ ಅವರು ಸೂಚನೆ ನೀಡಿದರು.
ಅಂಗಡಿ, ಹೋಟಲ್, ಬೇಕರಿ, ಲಾಡ್ಜ್, ಬಾರ್ ಮತ್ತು ರೆಸ್ಟೋರೆಂಟ್ ಹಾಗೂ ಇತರೇ ವಾಣಿಜ್ಯ ಮಳಿಗೆಗಳಲ್ಲಿ ಕಡ್ಡಾಯವಾಗಿ ಕೋಟ್ಪಾ ಕಾಯ್ದೆಗೆ ಸಂಬಂಧಿಸಿದ ಸೆಕ್ಷನ್-4 ಮತ್ತು ಸೆಕ್ಷನ್-6ಎ ನಾಮಫಲಕಗಳನ್ನು ಹಾಕಬೇಕು; ಈ ನಿಟ್ಟಿನಲ್ಲಿ ಸಂಬಂಧಿಸಿದ ಅಧಿಕಾರಿಗಳು ಕ್ರಮವಹಿಸಬೇಕು;ನಾಮಫಲಕ ಹಾಕದ ಅಂಗಡಿಗಳಿಗೆ ನೋಟಿಸ್ ಜಾರಿ ಮಾಡಿ ಎಂದು ಅವರು ಹೇಳಿದರು.
ಗ್ರಾಮಗಳಲ್ಲಿ ತಂಬಾಕು ನಿಯಂತ್ರಣ ಸಮಿತಿ ಸ್ಥಾಪಿಸಿ: ಜಿಲ್ಲೆಯಲ್ಲಿರುವ ಎಲ್ಲ ಗ್ರಾಪಂಗಳಲ್ಲಿ ಹಾಗೂ ಗ್ರಾಮಗಳಲ್ಲಿ ತಂಬಾಕು ನಿಯಂತ್ರಣ ಸಮಿತಿಗಳನ್ನು ರಚನೆ ಮಾಡಬೇಕು ಎಂದು ಜಿಪಂ ಅಧಿಕಾರಿಗಳಿಗೆ ಸೂಚನೆ ನೀಡಿದ ಅಪರ ಜಿಲ್ಲಾಧಿಕಾರಿ ಮಂಜುನಾಥ ಅವರು ಕೋಟ್ಪಾ-2003ರ ಸೆಕ್ಷನ್ 4,5,6ಎ ಮತ್ತು 7ರ ಅನುμÁ್ಠನಗೊಳಿಸಬೇಕು. ಐಇಸಿ ಚಟುವಟಿಕೆಗಳನ್ನ ಕೈಗೊಳ್ಳಬೇಕು ಹಾಗೂ ಕಾರ್ಯಾಚರಣೆ ನಡೆಸಿ ದಂಡ ಸಂಗ್ರಹಿಸುವಂತೆ ಅವರು ಸೂಚಿಸಿದರು.
ಕೋಟ್ಪಾ ಕಾಯ್ದೆ ಅನುμÁ್ಠನಕ್ಕೆ ಸಂಬಂಧಿಸಿದಂತೆ ನಡೆಸುವ ಕಾರ್ಯಾಚರಣೆಗಳಲ್ಲಿ ಸಮಿತಿ ಸದಸ್ಯರಾಗಿರುವ ವಿವಿಧ ಇಲಾಖೆಗಳ ಅಧಿಕಾರಿಗಳು ಸಹ ಪಾಲ್ಗೊಳ್ಳಬೇಕು ಎಂದು ಹೇಳಿದರು.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಅಡಿಯಲ್ಲಿ ಬರುವ 1276 ಶಾಲೆಗಳಲ್ಲಿ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಡಿಯಲ್ಲಿ ಬರುವ 72 ಕಾಲೇಜುಗಳಲ್ಲಿ ತಂಬಾಕು ಮುಕ್ತ ಘೋಷಣೆ ಮಾಡಿದ ಶಾಲಾ-ಕಾಲೇಜುಗಳ ಕುರಿತು ಚರ್ಚಿಸಿದ ಅವರು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.
ಕೋಟ್ಪಾ ಕಾಯ್ದೆಗೆ ಸಂಬಂಧಿಸಿದಂತೆ ವಿವಿಧ ವಿಷಯಗಳ ಕುರಿತು ಸಭೆಯಲ್ಲಿ ಸುಧೀರ್ಘವಾಗಿ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

LEAVE A REPLY

Please enter your comment!
Please enter your name here