ಜಿಲ್ಲಾ ರೇಬಿಸ್ ನಿಯಂತ್ರಣ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆ,
ರೇಬಿಸ್ ಕಾಯಿಲೆ ಹರಡದಂತೆ ಸಾಮೂಹಿಕ ಲಸಿಕಾ ಕಾರ್ಯಕ್ರಮಗಳು ಕೈಗೊಳ್ಳಿ:ಅಪರ ಜಿಲ್ಲಾಧಿಕಾರಿ ಮಂಜುನಾಥ

0
108

ಬಳ್ಳಾರಿ,ಮಾ.23 : ರೇಬಿಸ್ ಕಾಯಿಲೆ ಹರಡದಂತೆ ನಿಯಂತ್ರಿಸಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೂಡಲೇ ಕೈಗೊಳ್ಳುವಂತೆ ಸೂಚನೆ ನೀಡಿದ ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ಅವರು ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿರುವ ಮಹಾನಗರ ಪಾಲಿಕೆ, ಎಲ್ಲ ಗ್ರಾಪಂಗಳು, ನಗರ ಸ್ಥಳೀಯ ಸಂಸ್ಥೆಗಳು ತಮ್ಮ ವ್ಯಾಪ್ತಿಯಲ್ಲಿ ನಾಯಿಗಳಿಗೆ ಲಸಿಕೆ ನೀಡುವ ನಿಟ್ಟಿನಲ್ಲಿ ಸಾಮೂಹಿಕವಾಗಿ ಲಸಿಕಾ ಕಾರ್ಯಕ್ರಮಗಳು ತಕ್ಷಣ ಕೈಗೊಳ್ಳಬೇಕು ಎಂದು ಅವರು ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ಕೆಸ್ವಾನ್ ವಿಡಿಯೊ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಜಿಲ್ಲಾ ರೇಬಿಸ್ ನಿಯಂತ್ರಣ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿರುವ ಎಲ್ಲ ಆಸ್ಪತ್ರೆಗಳಲ್ಲಿ ನಾಯಿ ಕಡಿತದಿಂದ ಬಂದ ರೋಗಿಗಳಿಗೆ ಅಗತ್ಯ ಚಿಕಿತ್ಸೆ ನೀಡಲು ಎಲ್ಲ ರೀತಿಯ ಸಿದ್ದತೆಗಳು ಮಾಡಿಕೊಳ್ಳಬೇಕು ಮತ್ತು ಅಗತ್ಯ ಪ್ರಮಾಣದಷ್ಟು ಎಆರ್ವಿ ದಾಸ್ತಾನು ಮಾಡಿಕೊಳ್ಳಬೇಕು ಎಂದು ಅವರು ಹೇಳಿದರು.
ರೇಬಿಸ್ ಕಾಯಿಲೆ ಹರಡದಂತೆ ನಿಯಂತ್ರಿಸಲು, ಸಾಮೂಹಿಕ ಲಸಿಕೆ ಹಾಗೂ ಇದಕ್ಕೆ ಸಂಬಂಧಿಸಿದಂತೆ ಇನ್ನೀತರ ಮಾಹಿತಿಗಳ ಕುರಿತು ಹೆಚ್ಚಿನ ಪ್ರಮಾಣದಲ್ಲಿ ಪ್ರಚಾರ ಕಾರ್ಯ ಕೈಗೊಳ್ಳಿ ಮತ್ತು ಇದಕ್ಕೆ ಅಗತ್ಯ ಅನುದಾನ ಕಾಯ್ದಿರಿಸಿಕೊಳ್ಳಿ ಎಂದು ಅವರು ಅಧಿಕಾರಿಗಳಿಗೆ ಸೂಚಿಸಿದರು.
ರಾಷ್ಟ್ರೀಯ ರೇಬಿಸ್ ನಿಯಂತ್ರಣ ಕಾರ್ಯಕ್ರಮ ತಾಲೂಕುಮಟ್ಟದ ಸಮನ್ವಯ ಸಮಿತಿ ರಚಿಸಿ ಪ್ರತಿ ತ್ರೈಮಾಸಿಕ ಸಭೆ ನಡೆಸಲು ಅಪರ ಜಿಲ್ಲಾಧಿಕಾರಿ ಮಂಜುನಾಥ ಅವರು ಸೂಚನೆ ನೀಡಿದರು.
ವಿವಿಧ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಮೇಶ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ, ಜಿಪಂನ ಪ್ರಮೋದ, ತಾಲೂಕು ಆರೋಗ್ಯ ಅಧಿಕಾರಿ ಡಾ.ಮೋಹನಕುಮಾರಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ್ ದಾಸಪ್ಪನವರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

LEAVE A REPLY

Please enter your comment!
Please enter your name here