ಬಳ್ಳಾರಿ,ಮಾ.24 : ಬಳ್ಳಾರಿ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ. ಮುಖ್ಯ ಪರೀಕ್ಷೆಗಳು ಮಾ.28ರಿಂದ ಏ.11ರವರೆಗೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200ಮೀಟರ್ ಆವರಣವನ್ನು ನಿಭರ್ಂಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾದಂಡಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿ ಪವನ್ಕುಮಾರ್ ಮಾಲಪಾಟಿ ಅವರು ಆದೇಶವನ್ನು ಹೊರಡಿಸಿದ್ದಾರೆ.
ಪರೀಕ್ಷಾ ಸಮಯದಲ್ಲಿ ಪರೀಕ್ಷಾ ಕೇಂದ್ರಗಳೆಂದು ನಿಗದಿಪಡಿಸಲ್ಪಟ್ಟ ಕಟ್ಟಡಗಳ ಸುತ್ತಲೂ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಹಾಗೂ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮತ್ತು ಸದರಿ ಪರೀಕ್ಷೆಯಲ್ಲಿ ನಡೆಯಬಹುದಾದ ಅವ್ಯವಹಾರಗಳನ್ನು ತಡೆಗಟ್ಟಲು ಪರೀಕ್ಷಾ ಕೇಂದ್ರಗಳ ಸುತ್ತಲೂ 200ಮೀ ಆವರಣವನ್ನು ನಿಭರ್ಂಧಿತ ಪ್ರದೇಶವೆಂದು ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಜೆರಾಕ್ಸ್ ಸೆಂಟರ್ ಮತ್ತು ಕಂಪ್ಯೂಟರ್/ಸೈಬರ್/ಸೆಂಟರ್ಗಳನ್ನು ಕಾರ್ಯನಿರ್ವಹಿಸದಂತೆ ಪ್ರತಿಬಂಧಿಸಲಾಗಿದೆ. ನಿರ್ಭಂದಿರ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಲಾಗಿದೆ. ಎಸ್.ಎಸ್.ಎಲ್.ಸಿ. ಪರೀಕ್ಷೆಯ ಮೇಲ್ವಿಚಾರಣೆ ಕಾರ್ಯ ನಿರ್ವಹಿಸುವ ಸಿಬ್ಬಂದಿಯವರೆಗೆ ಅನ್ವಯಿಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ.