ಎಸ್.ಎಸ್.ಎಲ್.ಸಿ ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ಹಾಗೂ ಸಾಮೂಹಿಕ ನಕಲು ತಡೆಯಲು ಬಿಇಓ ಅದೇಶ

0
300

ಸಂಡೂರು:ಮಾ:26: ತಾಲೂಕಿನ ಎಲ್ಲಾ 8 ಪರೀಕ್ಷೆ ಕೇಂದ್ರಗಳಲ್ಲಿ 3942 ವಿಧ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಸೂಕ್ತ ಮೂಲಭೂತ ಸೌಕರ್ಯಗಳೊಂದಿಗೆ ಯಾವುದೇ ರೀತಿಯ ಪರೀಕ್ಷಾ ಅಕ್ರಮ ಹಾಗೂ ಸಾಮೂಹಿಕ ನಕಲಿಗೆ ಅವಕಾಶ ನೀಡದಂತೆ ವಿದ್ಯಾರ್ಥಿಗಳ ಮನೋಸ್ಥೈರ್ಯದಿಂದ ಪರೀಕ್ಷೆಯನ್ನು ಉತ್ತಮವಾಗಿ ಬರೆಯುವಂತೆ ಎಲ್ಲಾ ಕೇಂದ್ರಗಳ ಮುಖ್ಯ ಅಧೀಕ್ಷಕರು ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಡೂರು ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಐ.ಅರ್.ಆದೇಶಿಸಿದ್ದಾರೆ

ಮಾನ್ಯ ಜಿಲ್ಲಾಧಿಕಾರಿಗಳು ದಿ.22.03.2022 ರಂದು ನಡೆಸಿದ ಸಭೆಯಲ್ಲಿ ಜಿಲ್ಲಾಧ್ಯಂತ ಎಸ್.ಎಸ್.ಎಲ್.ಸಿ ಪರೀಕ್ಷಾ ನಡೆಯುವ ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ಮತ್ತು ಸಾಮೂಹಿಕ ನಕಲು ಮಾಡಿಸಿವ ಕೇಂದ್ರಗಳ ಮೇಲೆ ಸಂಬಂಧಪಟ್ಟ ಅಧಿಕಾರಿಗಳು ನಿಗಾವಹಿಸಿ ಸೂಕ್ತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕೆಂದು ಅದೇಶಿಸಿದ್ದು,

ಅದರಂತೆ. ಸಂಡೂರು ತಾಲೂಕಿನ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನರಹಿತ ಪ್ರೌಡಾ ಶಾಲಾ ಮುಖ್ಯ ಗುರುಗಳು ಹಾಗೂ ಸಹ ಶಿಕ್ಷಕರು ಪರೀಕ್ಷೆಗೆ ನೋಂದಾಯಿಸಿದ ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದು, ಯಾವುದೇ ಪರೀಕ್ಷೆ ಕೇಂದ್ರಗಳಲ್ಲಿ ಯಾವುದೇ ರೀತಿಯ ಅಕ್ರಮಗಳು ಜರುಗಿದರೆ ಮುಖ್ಯ ಅಧೀಕ್ಷಕರನ್ನೇ ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಹಾಗೂ

ಈ ಬಾರಿ ಗುಣಮಟ್ಟದ ಫಲಿತಾಂಶ ಬರಬೇಕೆಂದು ಅಗತ್ಯವಾದ ಕಠಿಣ ಕ್ರಮಗಳನ್ನು ಕೈಗೊಂಡಿದ್ದೇವೆ, ಮಾನ್ಯ ಶಾಸಕರಾದ ಈ ತುಕಾರಾಂ ರವರು ಪ್ರತಿನಿತ್ಯ ಪರೀಕ್ಷೆ ಬರೆಯುವ ಪ್ರತಿಯೊಬ್ಬ ವಿದ್ಯಾರ್ಥಿಗಳಿಗೆ ಅರ್ಧ ಲೀಟರ್ ನೀರಿನ ಬಾಟಲ್ ಮತ್ತು 1 ಬಿಸ್ಕೆಟ್ ಪ್ಯಾಕ್ ವ್ಯವಸ್ಥೆಯನ್ನು ಮಾಡಿದ್ದು, ಜೊತೆಗೆ ಸ್ಕೌಟ್ಸ್ ಅಂಡ್ ಗೈಡ್ಸ್ ಸಂಡೂರು ಇವರಿಂದ 4500 ಮಾಸ್ಕ್ ಗಳನ್ನು ನೀಡಿದ್ದಾರೆ ಎಂದು ತಿಳಿಸಿದರು

ಪರೀಕ್ಷಾ ಕೇಂದ್ರಗಳಿಗೆ ಸೂಚನೆ:

01.ಮೂಲಭೂತ ಸೌಕರ್ಯಗಳನ್ನು ಒದಗಿಸುವುದು

02.ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಎಸ್.ಓ.ಪಿ ಯನ್ನು ಕಡ್ಡಾಯವಾಗಿ

03.ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಆಸನದ ವ್ಯವಸ್ಥೆಯನ್ನು ಮಾಡುವುದು

04.ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸ್ಕೌಟ್ ಮತ್ತು ಗೈಡ್ಸ್ ಶಿಕ್ಷಕರು ಹಾಗೂ ದೈಹಿಕ ಶಿಕ್ಷಕರ ಮೂಲಕ ವಿದ್ಯಾರ್ಥಿಗಳ ಎಸ್.ಓ.ಪಿ ಯನ್ನು ಪಾಲಿಸುವಂತೆ ಕ್ರಮ ಕೈಗೊಳ್ಳುವುದು.

05.ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ಇಲಾಖೆಯ ಸಹಾಯಕರ ಮೂಲಕ ಮಕ್ಕಳ ದೈಹಿಕ ಉಷ್ಣತೆ ಪರೀಕ್ಷೆ ಮಾಡಲು ಕ್ರಮ ಕೈಗೊಳ್ಳುವುದು

06.ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಲು ಸೂಕ್ತ ಕ್ರಮ ಕೈಗೊಳ್ಳುವುದು

07.ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಪ್ರತಿ ಪರೀಕ್ಷೆಯ ಪ್ರಾರಂಭದ ಮುನ್ನ ಮತ್ತು ಮುಗಿದ ನಂತರ ಸಾನಿಟೈಸರ್ ಮಾಡಿಸಲು ಕ್ರಮ ಕೈಗೊಳ್ಳುವುದು.

08.ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಪೋಲಿಸ್ ಭದ್ರತೆಯನ್ನು ಒದಗಿಸಲು ಸೂಕ್ತ ಕ್ರಮ ಕೈಗೊಳ್ಳುವುದು

09.ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಅಧಿಕೃತ ಸಿಬ್ಬಂದಿಯನ್ನು ಹೊರತು ಪಡಿಸಿ ಯಾವುದೇ ಬಾಹ್ಯ ವ್ಯಕ್ತಿ/ಶಿಕ್ಷಕರು ಪರೀಕ್ಷಾ ಕೇಂದ್ರವನ್ನು ಪ್ರವೇಶಿಸದಂತೆ ನಿರ್ಬಂಧಿಸಲು ಸೂಕ್ತ ಕ್ರಮ ಕೈಗೊಳ್ಳುವುದು

10.ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ದೃಡೀಕರಿಸಿ ನೇಮಿಸಿದ ಸಿಬ್ಬಂದಿಯನ್ನೇ ಕೊಠಡಿ ಮೇಲ್ವಿಚಾರಕರನ್ನಾಗಿ ನಿಯೋಜಿಸಲು ಸೂಕ್ತ ಕ್ರಮ ಕೈಗೊಳ್ಳುವುದು

11.ಮಾನ್ಯ ನಿರ್ದೇಶಕರು ಕ.ಪ್ರೌ.ಶಿ.ಪ. ಮಂಡಳಿ ಬೆಂಗಳೂರು ಇವರ ಪತ್ರ ಸಂಖ್ಯೆ: ಸಿ1/ಎಸ್.ಎಸ್.ಎಲ್.ಸಿ/ಪ.ಸು/2022/124/2021-22 ದಿನಾಂಕ:02-03-2022 ಪಾಲಿಸಲು ಸೂಕ್ತ ಕ್ರಮ ಕೈಗೊಳ್ಳುವುದು

12.ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಪ್ರತೀ ದಿನದ ಪರೀಕ್ಷಾ ಸಮಯದ ಸಿ.ಸಿ.ಟಿವಿ ಪೂಟೇಜ್ ನ್ನು ಸಂಗ್ರಹಿಸಿ ನೀಡಲು ಸೂಕ್ತ ಕ್ರಮ ಕೈಗೊಳ್ಳುವುದು.
ಎಂದು ಸಂಡೂರು ತಾಲೂಕಿನ ಎಲ್ಲಾ 8 ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರಿಗೆ ಅದೇಸಿದ್ದಾರೆ.

LEAVE A REPLY

Please enter your comment!
Please enter your name here