ಬಳ್ಳಾರಿಯಲ್ಲಿ ರೆಡ್ ಕ್ರಾಸ್ ಸಂಸ್ಥೆಯಿಂದ ಪ್ರಥಮ ಚಿಕಿತ್ಸೆ ವಿಶೇಷ ಕಾರ್ಯಗಾರ,
ಗಾಯಾಳುವನ್ನು ಆಸ್ಪತ್ರೆಗೆ ಮುನ್ನ ಪ್ರಥಮ ಚಿಕಿತ್ಸೆ ನೀಡಿ-ಡಾ.ಸತ್ಯವತಿ

0
74

ಬಳ್ಳಾರಿ,ಮಾ.31: ಶಾಲೆಯಲ್ಲಿ ಮಕ್ಕಳು ಆಟ ಆಡುವಾಗ ಅವರಿಗೆ ದೈಹಿಕವಾಗಿ ಗಾಯ ಅಥವಾ ಹಾನಿಯಾದ ಪರಿಸ್ಥಿತಿಯಲ್ಲಿ ಶಿಕ್ಷಕರು ಮಕ್ಕಳನ್ನು ಆಸ್ಪತ್ರೆಗೆ ಸೇರಿಸುವ ಮುನ್ನ ಪ್ರಥಮ ಚಿಕಿತ್ಸೆ ನೀಡಬೇಕು ಎಂದು ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಸತ್ಯವತಿ ಅವರು ಹೇಳಿದರು.
ಜಿಲ್ಲಾ ಶಾಖೆ ರೆಡ್ ಕ್ರಾಸ್ ಸಂಸ್ಥೆ ವತಿಯಿಂದ ಬಸವರಾಜೇಶ್ವರಿ ಪಬ್ಲಿಕ್ ಶಾಲೆಯ ಸಭಾಂಗಣದಲ್ಲಿ ಶಿಕ್ಷಕರಿಗೆ ಮತ್ತು ಶಿಕ್ಷಣ ಇಲಾಖೆಯ ಸಿಬ್ಬಂದಿಗಳಿಗೆ ಹಮ್ಮಿಕೊಂಡಿದ್ದ ಒಂದು ದಿನದ ಪ್ರಥಮ ಚಿಕಿತ್ಸೆ ವಿಶೇಷ ಉಪನ್ಯಾಸ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಪ್ರಾಥಮಿಕವಾಗಿ ಮಾಡುವ ಪ್ರಥಮ ಚಿಕಿತ್ಸೆಯಿಂದ ಮಕ್ಕಳ ಮತ್ತು ಶಿಕ್ಷಕರ ಜೀವ ಅಪಾಯದಿಂದ ಉಳಿಸಬಹುದು ಎಂದು ಅವರು ಅಭಿಪ್ರಾಯ ಪಟ್ಟರು.
ಕಾರ್ಯಾಗಾರದಲ್ಲಿ ಜಿಲ್ಲೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಸಿದ್ದಲಿಂಗ ಮೂರ್ತಿ, ಜಿಲ್ಲಾ ಮಟ್ಟದ ದೈಹಿಕ ಶಿಕ್ಷಕರಾದ ರೆಹಮತುಲ್ಲ, ತಾಲೂಕು ಮಟ್ಟದ ದೈಹಿಕ ಶಿಕ್ಷಕರಾದ ಎರ್ರಿಸ್ವಾಮಿ, ವೀರನ ಗೌಡ, ರೆಡ್ ಕ್ರಾಸ್ ಸಂಸ್ಥೆಯ ಸದಸ್ಯರಾದ ಕೆ.ಮಹಾಂತೇಶ್ ಮತ್ತು ಸುಮಾರು 80 ಶಿಕ್ಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here