“ಮಹಾತ್ಮಗಾಂಧಿ ನರೇಗಾ ಕೂಲಿ ಏಪ್ರೀಲ್ 1 ರಿಂದ 309/- ರೂ. ಗೆ ಹೆಚ್ಚಳ
ಹಾಗೂ “ದುಡಿಯೋಣ ಬಾ” ಅಭಿಯಾನ, ಬೇಸಿಗೆಯಲ್ಲಿ ನಿರಂತರ ಕೆಲಸ”

0
59

ಬಳ್ಳಾರಿ,ಮಾ.31: ಮಹಾತ್ಮಗಾಂಧಿ ನರೇಗಾ ಯೋಜನೆಯಡಿ ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಪ್ರದೇಶದ ಜನರಿಗೆ ನಿರಂತರವಾಗಿ ಕೆಲಸ ಒದಗಿಸುವ ಉದ್ದೇಶದಿಂದ ಜೂನ್ ಅಂತ್ಯದವರೆಗೆ “ದುಡಿಯೋಣ ಬಾ ಅಭಿಯಾನ” ಹಮ್ಮಿಕೊಳ್ಳಲಾಗಿದೆ ಎಂದು ಜಿಪಂ ಸಿಇಒ ಲಿಂಗಮೂರ್ತಿ.ಜೆ ಅವರು ತಿಳಿಸಿದ್ದಾರೆ.
ನರೇಗಾ ಯೋಜನೆಯಡಿ ಒಳಗೊಳ್ಳದೆ ಇರುವ ಕುಟುಂಬಗಳನ್ನು ಸಮೀಕ್ಷೆ ಮಾಡಿ ಅರ್ಹರಿಗೆ ಉದ್ಯೋಗ ಚೀಟಿ ವಿತರಿಸುವುದು. ಸ್ವ-ಸಹಾಯ ಗುಂಪುಗಳ ಮಹಿಳೆಯರಲ್ಲಿ ಯೋಜನೆಯ ಕುರಿತು ಅರಿವು ಮೂಡಿಸಿ, ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮಾಡುವುದು. ಯೋಜನೆಯಿಂದ ಹೊರಗುಳಿದ ದುರ್ಬಲ ಕುಟುಂಬಗಳನ್ನು ಗುರುತಿಸಿ, ಯೋಜನೆಯ ಸೌಲಭ್ಯಗಳನ್ನು ದೊರಕಿಸಿ ಕೊಡುವುದು ಅಭಿಯಾನದ ಮುಖ್ಯ ಉದ್ದೇಶವಾಗಿದೆ.
ಬೇಸಿಗೆಯಲ್ಲಿ ಸತತ ಮೂರು ತಿಂಗಳು ಸಮಯದಲ್ಲಿ ಕೂಲಿ ಕೆಲಸ ನೀಡಲಾಗುವುದು. ಜನರು ವಲಸೆ ಹೋಗುವುದನ್ನು ತಡೆಗಟ್ಟಲು ಗ್ರಾಮದ ಬಡ ಕೂಲಿ ಕಾರ್ಮಿಕರು ನಮೂನೆ-6 ರಲ್ಲಿ ಅರ್ಜಿಯನ್ನು ಗ್ರಾಮ ಪಂಚಾಯತಿಗೆ ಸಲ್ಲಿಸಿ, ಕೂಲಿ ಕೆಲಸವನ್ನು ತಮ್ಮ ಗ್ರಾಮದಲ್ಲೇ ಪಡೆಯುವುದು. ಏಪ್ರೀಲ್ 1 ರಿಂದ ಕೂಲಿಯನ್ನು 289ರೂ. ಗಳಿಂದ 309ರೂ,ಗೆ ಹೆಚ್ಚಿಸಿ ಕೇಂದ್ರ ಸರ್ಕಾರ ಆದೇಶಿಸಿದೆ.
ವಿಕಲ ಚೇತನರು ಮತ್ತು ಹಿರಿಯ ನಾಗರೀಕರಿಗೆ ಕೆಲಸದಲ್ಲಿ ಶೇ.50%ರಷ್ಟು ವಿನಾಯತಿ ಇರುತ್ತದೆ. ನಮೂನೆ-1 ರಲ್ಲಿ 18 ವರ್ಷ ಮೇಲ್ಪಟ್ಟ ಕುಟುಂಬದ ಸದಸ್ಯರು ಅರ್ಜಿ ಸಲ್ಲಿಸುವುದು. ಅರ್ಜಿ ಜೊತೆಗೆ ಪಾಸ್ ಪೆÇೀಟ್ ಅಳತೆಯ ಪೆÇೀಟೋ, ಆಧಾರ್‍ಕಾರ್ಡ್, ರೇಷನ್ ಕಾರ್ಡ್, ಬ್ಯಾಂಕ್ ಖಾತೆ ಮಾಹಿತಿಯನ್ನು ಗ್ರಾ.ಪಂ ಗೆ ನೀಡಿ, ಉದ್ಯೋಗ ಚೀಟಿಯನ್ನು ಪಡೆದುಕೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here