ನೌಕರರು ಆರೋಗ್ಯದ ಕಡೆಗೆ ಹೆಚ್ಚಿನ ಗಮನ ನೀಡಿ:ಶಾಸಕ ಬಸನಗೌಡ ದದ್ದಲ್

0
83

ರಾಯಚೂರು ಏ.9 :- ಸದಾ ಒತ್ತಡದಲ್ಲಿಯೇ ಕಾರ್ಯ ನಿರ್ವಹಿಸುವ ಸರ್ಕಾರಿ ನೌಕರರು ಆರೋಗ್ಯದ ಕಡೆಗೆ ಹೆಚ್ಚಿನ ಗಮನ ನೀಡಬೇಕು. ಆರೋಗ್ಯಕರ ಜೀವನಕ್ಕೆ ಕ್ರೀಡೆ, ವ್ಯಾಯಾಮ ಅವಶ್ಯಕವಾಗಿದೆ. ಕ್ರೀಡೆಗಳಲ್ಲಿ ಭಾಗವಹಿಸಿ ಒತ್ತಡ ಕಡಿಮೆ ಮಾಡಿಕೊಳ್ಳಬೇಕು ಎಂದು ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರು ಹೇಳಿದರು.

ಅವರು ಏ.9ರ ಶನಿವಾರ ದಂದು ನಗರದ ಜಿಲ್ಲಾ ಪೋಲೀಸ್ ಮೈದಾನದಲ್ಲಿ ಎರಡು ದಿನಗಳ ಕಾಲ ಹಮ್ಮಿಕೊಳ್ಳಲಾಗಿದ್ದ ಸರಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ, ನೀಡಿ, ಮಾತನಾಡಿದರು.

ವರ್ಷದ 365 ದಿನವೂ ಸರ್ಕಾರಿ ನೌಕರರು ಕಚೇರಿ ಕೆಲಸಗಳಲ್ಲಿ ತೊಡಗಿರುತ್ತಾರೆ. ಆದ್ದರಿಂದ ಪ್ರತಿಯೊಬ್ಬ ನೌಕರನು ತನ್ನ ಆರೋಗ್ಯ ಕಾಪಾಡಿಕೊಳ್ಳಲು ಪ್ರತಿನಿತ್ಯ ವ್ಯಾಯಾಮ ಹಾಗೂ ಪ್ರಾಣಾಯಾಮದಂತಹ ಚಟುವಟಿಕೆಯಲ್ಲಿ ತೊಡಗಬೇಕೆಂದು ಸಲಹೆ ನೀಡಿದರು.

ಉತ್ಸಾಹದಿಂದ ಕೆಲಸಗಳನ್ನು ನಿರ್ವಹಿಸಲು ನೌಕರರಿಗೆ ವಿವಿಧ ರೀತಿಯ ಕ್ರೀಡಾಕೂಟದ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವು ಉಪಯೋಗವಾಗಿದ್ದು ಕಾರ್ಯಕ್ರಮವನ್ನು ಆಯೋಜಿಸಿರುವುದು ಇಲಾಖೆಗೆ ಮತ್ತು ನೌಕರರ ಸಂಘಕ್ಕೆ ಅಭಿನಂದನೆಗಳು ತಿಳಿಸಿದರು.

ದಿನಾಲೂ ಸರ್ಕಾರಿ ಸೇವೆಯಲ್ಲಿ ನಿರತರಾಗಿರುವದರಿಂದ ಅವರಿಗೆ ಮಾನಸಿಕ ಒತ್ತಡಗಳಿಂದ ಹೊರಬರಲು ಹಾಗುವುದಿಲ್ಲ ಹಾಗಾಗಿ ನೌಕರರ ಸಂಘದಿAದ ಕ್ರೀಡೆಗಳನ್ನು ಹೆಚ್ಚಿನ ಮಟ್ಟದಲ್ಲಿ ಆಯೋಜಿಸಬೇಕು ಅವರಿಗೆ ಮಾನಸಿಕವಾಗಿ ಆರೋಗ್ಯವಂತರನ್ನಾಗಿಸಲು ಕ್ರೀಡೆಗಳಿಂದ ಮಾತ್ರ ಸಾಧ್ಯ ಎಂದರು.

ಈ ವೇಳೆ ಕ್ರೀಡಾಪಟುಗಳಿಗೆ ಪ್ರತಿಜ್ಞಾ ವಿಧಿಯನ್ನು ಅಪರ ಜಿಲ್ಲಾಧಿಕಾರಿಗಳಾದ ಕೆ.ಆರ್.ದುರುಗೇಶ್ ಅವರು ಬೋಧಿಸಿದರು.

ಸಂರ್ಭದಲ್ಲಿ ನಗರಸಭೆಯ ನೂತನ ಅಧ್ಯಕ್ಷರಾದ ಲಲಿತಾ ಆಂಜನೇಯ್ಯ, ಯುವಜನ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಹನುಮಂತ, ಜಿಲ್ಲಾಧ್ಯಕ್ಷರಾದ ಭೀಮಣ್ಣ ನಾಯಕ್, ಪ್ರಧಾನ ಕಾರ್ಯದರ್ಶಿ ಮಹಾಂತೇಶ ಬಿರಾದಾರ ಹಾಗೂ ಸರ್ಕಾರಿ ನೌಕರರ ಸಂಘದ ವಿವಿಧ ಪದಾಧಿಕಾರಿಗಳಾದ ಚಂದ್ರಶೇಖರ ಹಿರೇಮಠ, ಅಯ್ಯನಗೌಡ,ಶ್ರೀಶೈಲಗೌಡ, ಹನುಮಂತರಾಯ, ಸಂತೋಷ್, ನಂದಿನಿ ಆನಂದ, ಮೋಹನ, ಶ್ರೀನಿವಾಸ್ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಇದ್ದರು

LEAVE A REPLY

Please enter your comment!
Please enter your name here