ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ಅವರಿಗೆ ಜಿಲ್ಲಾಡಳಿತದಿಂದ ಸ್ವಾಗತ

0
129

ಹೊಸಪೇಟೆ(ವಿಜಯನಗರ),ಏ.11: ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್‍ಚಂದ್ ಗೆಹ್ಲೋಟ್ ಅವರು ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಆಗಮಿಸುತ್ತಿರುವ ಹಿನ್ನೆಲೆ ವಿಜಯನಗರ ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಅವರು ವಿಜಯನಗರ ಗಡಿಭಾಗದಲ್ಲಿ ರಾಜ್ಯಪಾಲರನ್ನು ಸ್ವಾಗತಿಸಿದರು.
ಈ ಸಂದರ್ಭದಲ್ಲಿ ಎಸ್ಪಿ ಡಾ.ಅರುಣ ಎಸ್.ಕೆ ಮತ್ತಿತರರು ಇದ್ದರು. ರಾಜ್ಯಪಾಲರು ತುಂಗಾಭದ್ರಾ ಜಲಾಶಯ ವೀಕ್ಷಣೆ, ರಾಬರ್ಟ್ ಬ್ರೂಸ್‍ಫೂಟ್ ಮ್ಯೂಸಿಯಂಗೆ ಭೇಟಿ ಮತ್ತು ವೀಕ್ಷಣೆ, ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಘಟಿಕೋತ್ಸವ ಹಾಗೂ ಹಂಪಿಯ ಕನ್ನಡ ವಿಶ್ವವಿದ್ಯಾಲಯದ ನುಡಿಹಬ್ಬದಲ್ಲಿ ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here