“ತಾಲೂಕು ಮಟ್ಟದ ಆರೋಗ್ಯ ಮೇಳ” ಕುರಿತು ಜಾಗೃತಿ ಕಾರ್ಯಕ್ರಮ,

0
646

ಸಂಡೂರು:13:ಏ:- ತಾಲೂಕಿನ ತೋರಣಗಲ್ಲು ರೈಲ್ವೆ ನಿಲ್ದಾಣದ ಅಂಕಲಮ್ಮ ದೇವಸ್ಥಾನದ ಏರಿಯಾದಲ್ಲಿ ಗುಂಪು ಸಭೆಗಳ ಮೂಲಕ ಆರೋಗ್ಯ ಕಾರ್ಯಕ್ರಮಗಳ ಮತ್ತು ಯೋಜನೆಗಳ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು, ಈ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ

ಕ್ಷೇತ್ರ ಅರೋಗ್ಯ ಶಿಕ್ಷಣಾಧಿಕಾರಿ ಶಿವಪ್ಪ, ಸರ್ಕಾರದ ಆದೇಶದಂತೆ ಏಪ್ರಿಲ್ 18 ರಿಂದ 22 ರ ವರೆಗೆ ಅರೋಗ್ಯ ಇಲಾಖೆಯ ರಾಷ್ಟ್ರೀಯ ಕಾರ್ಯಕ್ರಮಗಳು, ಮತ್ತು ಆಯುಷ್ಮಾನ್ ಭಾರತ್- ಆರೋಗ್ಯ ಕರ್ನಾಟಕ ಯೋಜನೆಯ ಸೌಲಭ್ಯಗಳು, ಕಾರ್ಡ್ ವಿತರಿಸುವುದು, ಇ- ಸಂಜೀವಿನಿ ಟೆಲಿ ಮೆಡಿಸಿನ್, ಜನೌಷಧಿ ಯೊಜನೆ, ಹಾಗೂ ಕುಟುಂಬ ಕಲ್ಯಾಣ ಸೇವೆಗಳು, ಸಾಂಕ್ರಾಮಿಕ ಮತ್ತು ಆಸಾಂಕ್ರಮಿಕ ರೋಗಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ ಮತ್ತು ಇದೇ ತಿಂಗಳ 19 ಮಂಗಳವಾರ ದಂದು ನಮ್ಮ ತಾಲೂಕಿನ ಸಂಡೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ನಡೆಯಲಿರುವ “ತಾಲೂಕು ಮಟ್ಟದ ಆರೋಗ್ಯ ಮೇಳ” ದಲ್ಲಿ ಉಚಿತ ಆರೋಗ್ಯ ತಪಾಸಣೆ ಮಾಡುವ ಮತ್ತು ಹೆಚ್ಚಿನ ಚಿಕಿತ್ಸೆಯ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಮೇಳದಲ್ಲಿ ವಿಶೇಷ ತಜ್ಞರು ಹಾಜರಿದ್ದು ಸುಮಾರು ಒಂದು ಸಾವಿರ ಜನರ ಅರೋಗ್ಯ ತಪಾಸಣೆ ನಡೆಸುವ ಗುರಿ ಹೊಂದಲಾಗಿದ್ದು, ಹಲವಾರು ದಿನಗಳಿಂದ ಅನಾರೋಗ್ಯದಿಂದ ಇರುವವರು ತಪಾಸಣೆಗೆ ಒಳಗಾಗುವಂತೆ ಜನರಿಗೆ ಮನವರಿಕೆ ಮಾಡಿಕೊಡಲಾಯಿತು, ಎಲ್ಲರೂ ಭಾಗವಹಿಸಿ ಯಶಸ್ವಿ ಗೊಳಿಸುವಂತೆ ಮನವಿ ಮಾಡಿದರು,

ಈ ಸಂದರ್ಭದಲ್ಲಿ ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಶಿವಪ್ಪ, ಆರೋಗ್ಯ ಸುರಕ್ಷಾಧಿಕಾರಿ ಭಾಗ್ಯಲಕ್ಷ್ಮಿ, ಸಮುದಾಯ ಕಾರ್ಯಕರ್ತೆ ಮೆಹಬೂಬಿ, ಆಶಾ ಹುಲಿಗೆಮ್ಮ, ರೇಖಾ, ವೆಂಕಟಲಕ್ಷ್ಮಿ, ವಿಜಯಶಾಂತಿ, ಆಶಾ, ಇತರರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here