ಪ್ರತಿಯೊಬ್ಬರ ಆರೋಗ್ಯಕ್ಕೆ ಅಗತ್ಯ ಸೌಲಭ್ಯಗಳು ದೊರಕುವಂತೆ ನೋಡಿಕೊಳ್ಳಿ:ಜಿಪಂ ಸಿಇಒ ಜೆ.ಲಿಂಗಮೂರ್ತಿ

0
91

ಬಳ್ಳಾರಿ,ಏ.13 : ಜನರ ಆರೋಗ್ಯದ ಕಾಳಜಿಗೆ ಸಂಬಂಧಿಸಿದಂತೆ ಅಗತ್ಯ ಸೌಲಭ್ಯಗಳು ಈ ಆರೋಗ್ಯ ಮೇಳಗಳ ಮೂಲಕ ಜನರಿಗೆ ತಲುಪಿಸುವ ಕೆಲಸ ಮಾಡಬೇಕು ಎಂದು ಜಿಪಂ ಸಿಇಒ ಜೆ.ಲಿಂಗಮೂರ್ತಿ ಅವರು ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರದಂದು ನಡೆದ “ತಾಲೂಕು ಮಟ್ಟದ ಆರೋಗ್ಯ ಮೇಳ”ಗಳ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
75ನೇ ಅಜಾದಿ ಕಾ ಅಮೃತ ಮಹೋತ್ಸವ ನಿಮಿತ್ತ ಎಲ್ಲಾ ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ಆರೋಗ್ಯ ಮೇಳಕ್ಕೆ ಸಂಬಂಧಿಸಿದಂತೆ ಸಮಿತಿ ರಚಿಸಬೇಕು. ಅದಕ್ಕೆ ಬೇಕಾದ
ಎಲ್ಲಾ ಸಿದ್ಧತೆಗಳನ್ನು ಎರಡು ದಿನಗಳೊಳಗೆ ನಕಾಶೆಯನ್ನು ಮಾಡಿಕೊಳ್ಳಬೇಕು ಎಂದು ಹೇಳಿದರು.
ಎಲ್ಲಾ ಇಲಾಖೆಗಳಿಂದ ಸುತ್ತೋಲೆ ನೀಡುವುದರ ಮೂಲಕ ಪ್ರಚಾರ ಮಾಡಬೇಕು ಇದರಿಂದ ಸಾಮಾನ್ಯ ಜನರು ಆರೋಗ್ಯ ಮೇಳದಲ್ಲಿ ಹೆಚ್ಚು ಪಾಲ್ಗೊಳ್ಳಲು ಸಹಾಯವಾಗುತ್ತದೆ ಎಂದರು.
ಆರೋಗ್ಯ ಮೇಳದಲ್ಲಿ ಭಾಗವಹಿಸುವವರ ನೊಂದಣಿ, ಡಿಜಿಟಲ್ ಐಡಿ, ಸ್ಥಳದಲ್ಲಿಯೇ ಹೆಲ್ತ್ ಕಾರ್ಡ್ ವಿತರಣೆ, ಔಷಧಿ ವಿತರಣೆ ಹಾಗೂ ಇಂಟರ್‍ನೆಟ್ ಸೌಲಭ್ಯ ಸೇರಿದಂತೆ ಅಗತ್ಯ ಸೇವೆಗಳಿಗೆ ಸಂಬಂಧಿಸಿದಂತೆ ಕೌಂಟರ್‍ಗಳನ್ನು ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಹೆಚ್.ಎಲ್ ಜನಾರ್ಧನ ಅವರು ಮಾತನಾಡಿ ಈ ಆರೋಗ್ಯ ಮೇಳವು ಬಳ್ಳಾರಿ, ಕಂಪ್ಲಿ, ಸಂಡೂರು ತಾಲೂಕುಗಳಲ್ಲಿ ನಡೆಯಲಿದ್ದು, ಆರೋಗ್ಯ ಮೇಳಕ್ಕೆ ಸಂಬಂಧಿಸಿದಂತೆ ತಾಲೂಕು ಮತ್ತು ಜಿಲ್ಲಾ ಮಟ್ಟದ ಆರೋಗ್ಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ, ಅಗತ್ಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.
ಈ ಸಂದರ್ಭದಲ್ಲಿ ವಿಮ್ಸ್ ನಿರ್ದೇಶಕ ಡಾ.ಗಂಗಾಧರ ಗೌಡ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here