ಏ.21 ರಂದು ಧಾರವಾಡದಲ್ಲಿ ರಾಜ್ಯ ಸರಕಾರಿ ನೌಕರರ ದಿನಾಚರಣೆ
ಹಾಗೂ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ

0
129

ಧಾರವಾಡ: ಏ.18: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಘಟಕ ಧಾರವಾಡ ಇವರ ಸಹಯೋಗದಲ್ಲಿ ಏಪ್ರಿಲ್ 21 ರಂದು ಬೆಳಿಗ್ಗೆ 11 ಗಂಟೆಗೆ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಭಾ ಭವನದಲ್ಲಿ ಧಾರವಾಡ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಹಾಗೂ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘದ ಜಿಲ್ಲಾಧ್ಯಕ್ಷ ಎಸ್.ಎಫ್.ಸಿದ್ದನಗೌಡ್ರ ತಿಳಿಸಿದರು.

ಅವರು ಇಂದು ಬೆಳಿಗ್ಗೆ ಸರಕಾರಿ ನೌಕರ ಭವನದ ಸಭಾಂಗಣದಲ್ಲಿ ಆಯೋಜಿಸಿದ್ದ ಮಾಧ್ಯಮಗೋಷ್ಟಿ ಉದ್ದೇಶಿಸಿ ಮಾತನಾಡಿದರು.

ರಾಷ್ಟ್ರೀಯ ಮಟ್ಟದಲ್ಲಿ ನಾಗರಿಕ ಸೇವಾ ದಿನದ ಅಂಗವಾಗಿ ಕೇಂದ್ರ ಸರಕಾರ ಪ್ರತಿ ವರ್ಷ ನಾಗರಿಕ ಸೇವಾ ದಿನವನ್ನು ಆಚರಿಸುತ್ತದೆ.

ಅದರಂತೆ ರಾಜ್ಯದಲ್ಲಿಯೂ ರಾಜ್ಯ ಸರಕಾರದ ಸೇವೆ ಗುರುತಿಸಿ, ಪೆÇ್ರೀತ್ಸಾಹ ನೀಡಲು ರಾಜ್ಯ ಸರಕಾರಿ ನೌಕರ ದಿನವನ್ನು ರಾಜ್ಯ ಸರಕಾರದಿಂದ ಪ್ರತಿ ವರ್ಷ ಆಚರಿಸುವಂತೆ ಕ್ರಮ ಕೈಗೊಳ್ಳಲು ಸಂಘದ ರಾಜ್ಯಧ್ಯಕ್ಷ ಸಿ.ಎಸ್.ಷಡಕ್ಷರಿ ಅವರ ನೇತೃತ್ವದಲ್ಲಿ ಎಲ್ಲ ಜಿಲ್ಲಾಧ್ಯಕ್ಷರು, ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯರು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ, ಒತ್ತಾಯಿಸಲಾಗಿತ್ತು. ಅದರಂತೆ ರಾಜ್ಯ ಸರಕಾರವು ಪ್ರತಿ ವರ್ಷ ಏಪ್ರಿಲ್ 21 ರಂದು ರಾಜ್ಯ ಸರಕಾರಿ ನೌಕರ ದಿನವನ್ನು ಆಚರಿಸಲು ಅಂದಿನ ಮುಖ್ಯಮಂತ್ರಿ ಶ್ರೀ ಬಿ.ಎಸ್.ಯಡಿಯೂರಪ್ಪ ಅವರು ಜನವರಿ 18, 2021 ರಂದು ಆದೇಶ ಹೊರಡಿಸಿದ್ದರು. ಇಂದಿನ ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ಅವರು ಆದೇಶವನ್ನು ಕಾರ್ಯಗತಗೊಳಿಸಿದ್ದಾರೆ. ರಾಜ್ಯ ಸರಕಾರದಿಂದಲೆ ರಾಜ್ಯ ಸರಕಾರಿ ನೌಕರ ದಿನ ಆಚರಿಸುತ್ತಿರುವ ಈ ಕಾರ್ಯಕ್ರಮ ರಾಷ್ಟ್ರದಲ್ಲಿಯೆ ಪ್ರಥಮವಾಗಿದೆ ಎಂದು ಅವರು ಹೇಳಿದರು.

ವಿವಿಧ ಸರಕಾರಿ ಇಲಾಖೆಗಳಲ್ಲಿ ಉತ್ತಮವಾಗಿ ಸೇವೆ ಸಲ್ಲಿಸಿದ ಅಧಿಕಾರಿ, ಸಿಬ್ಬಂದಿಗಳನ್ನು ಗುರುತಿಸಿ ಸತ್ಕರಿಸುವ ಮತ್ತು ಅವರನ್ನು ಪೆÇ್ರೀತ್ಸಾಹಿಸಲು ರಾಜ್ಯ ಸರಕಾರ ಮತ್ತು ಜಿಲ್ಲಾಡಳಿತದಿಂದ ನೀಡುವ ಪ್ರಸಕ್ತ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಇದೇ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಪ್ರದಾನ ಮಾಡಲಿದ್ದಾರೆ ಮತ್ತು ಇನ್ನು ಮುಂದೆ ಪ್ರತಿ ವರ್ಷ ಇದೇ ಕಾರ್ಯಕ್ರಮದಲ್ಲಿ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಜಿಲ್ಲಾಧ್ಯಕ್ಷ ಎಸ್.ಎಫ್.ಸಿದ್ದನಗೌಡ್ರ ತಿಳಿಸಿದರು.

ಸರಕಾರಿ ನೌಕರ, ನೌಕರ ಕುಟುಂಬ ಸದಸ್ಯರಿಗಾಗಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ:
ಏಪ್ರಿಲ್ 21ರಂದು ಬೆಳಿಗ್ಗೆ 8 ಗಂಟೆಗೆ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಭಾಭವನದಲ್ಲಿ ರಾಜ್ಯ ಸರಕಾರಿ ನೌಕರರ ದಿನಾಚರಣೆ ನಿಮಿತ್ಯ ಜಿಲ್ಲೆಯ ನೌಕರರು ಹಾಗೂ ಅವರ ಕುಟುಂಬದವರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ನೌಕರ ಸಂಘದ ಜಿಲ್ಲಾ ಘಟಕವು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಿದೆ.

ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ ಅವರು ಶಿಬಿರ ಉದ್ಘಾಟಿಸುವರು. ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಬಸನಗೌಡ ಕರಿಗೌಡರ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಶಿವಕುಮಾರ ಮಾನಕರ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಕರ್ನಾಟಕ ರಾಜ್ಯದ ಸರಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಸ್.ಎಫ್. ಸಿದ್ಧನಗೌಡರ ಅಧ್ಯಕ್ಷತೆ ವಹಿಸುವರು.

ಆರೋಗ್ಯ ಶಿಬಿರದಲ್ಲಿ ಮಧುಮೇಹ, ಇ.ಸಿ.ಜಿ, ಇಕೋ, ಹೃದಯ, ಕಣ್ಣು ಕಿವಿ, ಮೂಗು , ಗಂಟಲು,ಚರ್ಮ, ಸ್ತ್ರೀ ರೋಗ, ಮೂಳೆ, ಚಿಕ್ಕ ಮಕ್ಕಳ ಹಾಗೂ ಇತರೆ ರೋಗಗಳ ಬಗ್ಗೆ ತಜ್ಞ ವೈದ್ಯರಿಂದ ತಪಾಸಣೆ ಮಾಡಲಾಗುವುದು. ಆರೋಗ್ಯ ಸಲಹೆ, ಔಷಧಿ ವಿತರಣೆ ನಡೆಯಲಿದೆ.

ವೇದಿಕೆ ಹಾಗೂ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ:
ಏಪ್ರಿಲ್ 21 ರ ಬೆಳಿಗ್ಗೆ 11 ಗಂಟೆಗೆ ಕರ್ನಾಟಕ ಕುಲ ಪುರೋಹಿತ ಆಲೂರು ವೆಂಕಟರಾವ್ ಸಭಾಭವನದಲ್ಲಿ ರಾಜ್ಯ ಸರಕಾರಿ ನೌಕರ ದಿನಾಚರಣೆ ಮತ್ತು ಜಿಲ್ಲಾಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ. ಸಮಾರಂಭದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳು ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ ಜೋಶಿ, ಕರ್ನಾಟಕ ವಿಧಾನ ಪರಿಷತ್ತನ ಸಭಾಪತಿ ಬಸವರಾಜ ಹೊರಟ್ಟಿ ಗೌರವ ಉಪಸ್ಥಿತರಿರುವರು.

ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕ ಸಬಲೀಕರಣ ಸಚಿವ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಆಚಾರ ಹಾಲಪ್ಪ ಬಸಪ್ಪ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡುವರು.

ವಿಶೇಷ ಅತಿಥಿಗಳಾಗಿ ಕೈಮಗ್ಗ ಮತ್ತು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಸಚಿವ ಶಂಕರ. ಬ ಪಾಟೀಲ ಮುನೇನಕೊಪ್ಪ ವಿಶೇಷ ಅತಿಥಿಗಳಾಗಿ ಭಾಗವಹಿಸುವರು. ಶಾಸಕ ಅರವಿಂದ ಚಂದ್ರಕಾಂತ ಬೆಲ್ಲದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ವಿಧಾನ ಸಭೆ ಶಾಸಕ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಿದ್ದು ಕೆ. ಸವದಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ವಿ.ಎಸ್.ಪಾಟೀಲ, ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಈರಣ್ಣ ಶಿ.ಜಡಿ, ಕರ್ನಾಟಕ ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ ರಫ್ತು ನಿಗಮದ ಅಧ್ಯಕ್ಷ ಸಿದ್ದನಗೌಡ ಈಶ್ವರಗೌಡ ಚಿಕ್ಕನಗೌಡ್ರು, ಕರ್ನಾಟಕ ರಾಜ್ಯ ರೇμÉ್ಮ ಮಾರಾಟ ಮಂಡಳಿಯ ಅಧ್ಯಕ್ಷೆ ಸವಿತಾ ವಿಶ್ವನಾಥ ಅಮರಶೆಟ್ಟಿ, ಕರ್ನಾಟಕ ರಾಜ್ಯ ಸಾಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎ. ಎಸ್. ಜಯರಾಮ, ವಿಧಾನ ಸಭೆ ಶಾಸಕರಾದ ಅಬ್ಬಯ್ಯ ಪ್ರಸಾದ, ಅಮೃತ ಅಯ್ಯಪ್ಪ ದೇಸಾಯಿ, ಸಿ.ಎಂ.ನಿಂಬಣ್ಣವರ, ಕುಸುಮಾವತಿ ಶಿವಳ್ಳಿ, ವಿಧಾನ ಪರಿಷತ್ ಸದಸ್ಯರಾದ ಎಸ್.ವಿ. ಸಂಕನೂರ, ಪ್ರದೀಪ ಶೆಟ್ಟರ, ಸಲೀಂ ಅಹ್ಮದ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗೇಶ ಪುಂಡಲೀಕಸಾ ಕಲಬುರ್ಗಿ ಅವರು ಭಾಗವಹಿಸುವರು.

ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಾದ ಡಾ.ಆರ್.ವಿಶಾಲ್, ಜಿಲ್ಲಾಧಿಕಾರಿ ನಿತೇಶ ಪಾಟೀಲ, ಮಹಾನಗರ ಪೆÇಲೀಸ್ ಆಯುಕ್ತ ಲಾಬೂರಾಮ,ಪೋಲಿಸ್ ವರಿಷ್ಠಾಧಿಕಾರಿ ಪಿ.ಕೃಷ್ಣಕಾಂತ, ಜಿಲ್ಲಾ ಪಂಚಾಯತ ಸಿಇಓ ಡಾ.ಸುರೇಶ ಇಟ್ನಾಳ, ಮಹಾನಗರ ಪಾಲಿಕೆ ಆಯುಕ್ತ ಡಾ.ಗೋಪಾಲಕೃಷ್ಣ ಬಿ, ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ, ಉಪವಿಭಾಗಾಧಿಕಾರಿ ಅಶೋಕ ತೇಲಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲೆಯ ಹಿರಿಯ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಎಸ್.ಎಫ್.ಸಿದ್ದನಗೌಡ್ರ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಘಟಕದ ಪ್ರಧಾನಕಾರ್ಯದರ್ಶಿ ಎಸ್.ಜಿ.ಸುಬ್ಬಾಪುರಮಠ, ಗೌರವಾಧ್ಯಕ್ಷ ಆರ್.ಬಿ.ಲಿಂಗದಾಳ, ರಾಜ್ಯ ಪರಿಷತ್ತ ಸದಸ್ಯ ದೇವಿದಾಸ ಶಾಂತಿಕರ, ಕೋಶಾಧ್ಯಕ್ಷ ರಾಜಶೇಖರ ಬಾಣದ, ನೌಕರಭವನದ ಕಾರ್ಯದರ್ಶಿ ಗಿರೀಶ ಚೌಡಕಿ ಸೇರಿದಂತೆ ಸಂಘದ ವಿವಿಧ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here