ಶಿಕ್ಷಣದಷ್ಟೇ ಕಾನೂನು ಅರಿವು ಕೂಡ ಮುಖ್ಯ : ನ್ಯಾಯಾಧೀಶೆ ಪುಷ್ಪಲತಾ ಸಿ.ಎಂ

0
127

ಧಾರವಾಡ : ಏ.20: ಇಂದಿನ ದಿನಮಾನಗಳಲ್ಲಿ ಶಿಕ್ಷಣ ಪಡೆದಷ್ಟೇ ಕಾನೂನು ಅರಿವು ಹೊಂದುವುದು ಕೂಡ ಅಷ್ಟೇ ಅವಶ್ಯಕವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯಾದರ್ಶಿ ಪುಷ್ಪಲತಾ ಸಿ.ಎಂ ಹೇಳಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಯುಕ್ತಾಶ್ರಯದಲ್ಲಿಂದು (ಬುಧವಾರ) ಆರ್.ಎನ್. ಶೆಟ್ಟಿ ಕ್ರೀಡಾಂಗಣ ಆವರಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಪೆÇೀಕ್ಸೋ ಕಾಯ್ದೆ-2012, ಬಾಲ ನ್ಯಾಯ ಕಾಯ್ದೆ-2015 ಹಾಗೂ ಮಕ್ಕಳ ಶಿಕ್ಷಣದ ಹಕ್ಕು ಕಾಯ್ದೆ-2009 ರ ಕುರಿತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ಕಾನೂನು ಸಾಕ್ಷರತಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಹಿಂದಿನ ಕಾಲದ ಜನರಲ್ಲಿ ಶಿಕ್ಷಣದ ಮಟ್ಟ ಕಡಿಮೆ ಇದ್ದರೂ ಕೂಡಾ ಅನುಭವಜನ್ಯ ಜ್ಞಾನ ಹೆಚ್ಚಾಗಿತ್ತು. ಆಧುನಿಕತೆಯ ಈ ದಿನಗಳಲ್ಲಿ ಅತಿ ಬುದ್ಧಿವಂತೆಕೆಯು ಅಪಾಯಕಾರಿ ಎನ್ನುವ ಸನ್ನಿವೇಶ ನಿರ್ಮಿಸಿದೆ. ಕಾನೂನು ಪಾಲನೆ ನಿರ್ಲಕ್ಷಿಸಬಾರದು. ಇಂದಿನ ಮಕ್ಕಳು ಇಂದಿನ ಪ್ರಜೆಗಳು,ಸ್ವಸ್ಥ ಸಮಾಜಕ್ಕಾಗಿ ಎಲ್ಲರೂ ಕಾನೂನು ಅರಿವು ಹೊಂದಿರುವುದು ಅವಶ್ಯಕವಾಗಿದೆ ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್. ಎಸ್.ಕೆಳದಿಮಠ ಮಾತಾನಾಡಿ, ಪ್ರೌಢಶಾಲೆ ಹಂತದಿಂದಲೇ ವಿದ್ಯಾರ್ಥಿಗಳು ಕಾನೂನು ಅರಿವು ಹೊಂದುವುದು ಅವಶ್ಯಕವಾಗಿದೆ. ಇನ್ನೊಬ್ಬರು ಸಮಸ್ಯೆಯಲ್ಲಿ ಸಿಲುಕಿದಾಗ ಕಾನೂನು ನೆರವು ನೀಡಲು ಎಲ್ಲ ವಿದ್ಯಾರ್ಥಿಗಳು ಸಶಕ್ತರಾಗಿರಬೇಕು. ಕಾನೂನು ಅಡಿಯಲ್ಲಿ ಸ್ವಯಂರಕ್ಷಣೆ ಮಾಡಿಕೊಳ್ಳುವ ಕುರಿತು ವಿವಿಧ ಪುಸ್ತಕಗಳನ್ನು ಓದಿ ತಿಳಿದುಕೊಳ್ಳಬೇಕು. ಪಠ್ಯಶಿಕ್ಷಣದ ಜೊತೆಗೆ ಕಾನೂನು ಅರಿವು ನೆರವು ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಡಾ.ಕಮಲಾ ಬೈಲೂರ ಮಾತನಾಡಿ, ಬಾಲಕಿಯರಿಗೆ ಯಾರಾದರು ತೊಂದರೆ ಕೊಡುತ್ತಿದ್ದರೆ ಮಾನಹಾನಿ ಆಗುತ್ತದೆ ಎಂಬ ಆತಂಕದೊಂದಿಗೆ ಸುಮ್ಮನೆ ಕುಳಿತುಕೊಳ್ಳಬಾರದು. ಮಕ್ಕಳ ರಕ್ಷಣೆಗಾಗಿ ಕಾನೂನುಗಳು ಇವೆ,ಅವುಗಳ ರಕ್ಷಣೆ ಪಡೆಯಬೇಕು. ಸಾಮಾಜಿಕ ಜಾಲತಾಣಗಳನ್ನು ಅವಶ್ಯಕತೆಗೆ ಅನುಗುಣವಾಗಿ ಬಳಸಿಕೊಳ್ಳಬೇಕು. ಬಾಲ್ಯವಿವಾಹಗಳು ನಡೆಯದಂತೆ ಪ್ರತಿಯೊಬ್ಬರೂ ಎಚ್ಚರವಹಿಸಬೇಕು. 1098 ಉಚಿತ ಸಹಾಯವಾಣಿ ಮೂಲಕ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದರೆ,ಬಾಲ್ಯ ವಿವಾಹಗಳನ್ನು ತಡೆಗಟ್ಟಲು ಕ್ರಮವಹಿಸಲಾಗುವುದು ಎಂದರು.

ಸರಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯಾಯಿನಿ ಶ್ರೀದೇವಿ ಲದ್ದಿಮಠ ಅಧ್ಯಕ್ಷತೆ ವಹಿಸಿದ್ದರು. ಧಾರವಾಡ ಶಹರ ಕ್ಷೇತ್ರ ಶಿಕ್ಷಣಾಧಿಕಾರಿ ಗಿರೀಶ ಪದಕಿ ಸೇರಿದಂತೆ ಇತರರು ಇದ್ದರು. ನ್ಯಾಯವಾದಿ ನೂರಜಹಾನ್ ಎಮ್. ಕಿಲ್ಲೇದಾರ ಪೆÇೀಕ್ಸೋ ಆಕ್ಟ್-2012 ,ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮಕ್ಕಳ ರಕ್ಷಣಾಧಿಕಾರಿ ಅಶ್ವಿನಿ ಉಳ್ಳಿಗೇರಿ ಬಾಲ ನ್ಯಾಯ ಕಾಯ್ದೆ-2015 ಮತ್ತು ಮಕ್ಕಳ ಶಿಕ್ಷಣದ ಹಕ್ಕು ಕಾಯ್ದೆ-2009 ವಿಷಯಗಳ ಕುರಿತು ಉಪನ್ಯಾಸ ನೀಡಿದರು. ಪವಿತ್ರಾ ಹಾಗೂ ಸಂಗಡಿಗರು ಪ್ರಾರ್ಥನೆ ಗೀತೆ ಹಾಡಿದರು. ಶಿಕ್ಷಕ ಬಿ ಜಿ. ಬಸೆಟ್ಟಿ ನಿರೂಪಿಸಿದರು. ಶಿಕ್ಷಣ ಇಲಾಖೆ ಜಿಲ್ಲಾ ಸಮನ್ವಯಾಧಿಕಾರಿ ಎಸ್. ಎಮ್ ಹುಡೇದಮನಿ ವಂದಿಸಿದರು.

LEAVE A REPLY

Please enter your comment!
Please enter your name here