ರಾಷ್ಟ್ರೀಯ ಪಂಚಾಯತ್ ರಾಜ್ಯ ದಿನಾಚರಣೆಯ ಅಂಗವಾಗಿ ವಿಶೇಷ
ಗ್ರಾಮ ಸಭೆ

0
109

ವಿಜಯನಗರ:24:ಏ:- ಕೂಡ್ಲಿಗಿ ತಾಲೂಕಿನ ಜುಮ್ಮೋಬನಹಳ್ಳಿ ಗ್ರಾಮ ಪಂಚಾಯಿತಿ ಹೊರವಲಯದ ಕೆರೆಯಲ್ಲಿ ಇಂದು ಭಾನುವಾರ ರಾಷ್ಟ್ರೀಯ ಪಂಚಾಯತ್ ರಾಜ್ಯ ದಿನಾಚರಣೆಯ ಅಂಗವಾಗಿ ವಿಶೇಷ ಗ್ರಾಮ ಸಭೆ ನಡೆಯಲಾಯಿತು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಮಹಾಂತೇಶ್ ಅಯ್ಯಾ ಮಾತನಾಡಿ ರೈತರು ಗುಳೆ ಹೋಗುವುದನ್ನು ತಪ್ಪಿಸಿ, ಸ್ಥಳೀಯವಾಗಿ ಉದ್ಯೋಗ ನೀಡುವಲ್ಲಿ ನರೇಗಾ ಯಶಸ್ವಿಯಾಗಿದ್ದು ಇದರ ಸದುಪಯೋಗ ಪಡೆದುಕೊಳ್ಳಬೇಕಿದೆ. ಬೆಸಿಗೆಯಾದ್ದರಿಂದ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಕೆಲಸದಲ್ಲಿ ತೊಡಗಿಕೊಳ್ಳಬೇಕು ಎಂದು ಕಾರ್ಮಿಕರಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಮಾಜಿ ತಾಲೂಕು ಪಂಚಾಯಿತಿ ಸದಸ್ಯರಾದ ಜಿ.ಓಬಣ್ಣ, ಕಾರ್ಮಿಕರನ್ನು ಉದ್ದೇಶಿಸಿ ಮಾತನಾಡಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಚನ್ನಬಸಮ್ಮ ಹಾಗೂ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಈ ಶರಣೆಶ್ ಮತ್ತು ಕಂಪ್ಯೂಟರ್ ಆಪರೇಟರ್ ಪ್ರದೀಪ್ ಕುಮಾರ್ ಹಾಗೂ ಕೆಪಿಸಿಸಿ ಅಸಂಘಟಿತ ಕಾರ್ಮಿಕರ ವಿಭಾಗದ ರಾಜ್ಯ ಸಂಚಾಲಕರಾದ ಸಿ.ಅರುಣ್ ಕುಮಾರ್ ಮತ್ತು ರವಿಕುಮಾರ್ ಪಾಪಣ್ಣ ಹಾಗೂ ಸುಮಾರು 750 ಜನ ಕಾರ್ಮಿಕರು ಹಾಗೂ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ:-ಮಂಜುನಾಥ್. ಹೆಚ್

LEAVE A REPLY

Please enter your comment!
Please enter your name here