ಮಹಾಮಾನವತಾವಾದಿ ಶ್ರೀ ಬಸವೇಶ್ವರ ಜಯಂತ್ಯೋತ್ಸವ ಮೇ 03ರಂದು

0
66

ಬಳ್ಳಾರಿ,ಏ.30 : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕøತ ಇಲಾಖೆ ಸಂಯುಕ್ತಾಶ್ರಯದಲ್ಲಿ ಮಹಾಮಾನವತಾವಾದಿ ಶ್ರೀ ಬಸವೇಶ್ವರ ಜಯಂತ್ಯೋತ್ಸವ ಮೇ 03ರಂದು ಬೆಳಗ್ಗೆ 11ಕ್ಕೆ ಪಾರ್ವತಿ ನಗರದ ಬಸವ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷರಾದ ಪವನ್‍ಕುಮಾರ್ ಮಾಲಪಾಟಿ ಅವರು ತಿಳಿಸಿದ್ದಾರೆ.
ಸಾರಿಗೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಶ್ರೀರಾಮುಲು ಅವರು ಮಹಾಮಾನವತಾವಾದಿ ಶ್ರೀ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಹಾಗೂ ಮೆರವಣಿಗೆ ಚಾಲನೆ ನೀಡಿ ಉದ್ಘಾಟಣೆ ಮಾಡುವರು.
ಬಳ್ಳಾರಿ ನಗರ ಶಾಸಕರಾದ ಜಿ.ಸೋಮಶೇಖರ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ವೈ.ದೇವೇಂದ್ರಪ್ಪ, ಕರಡಿ ಗಂಗಣ್ಣ, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಈ.ತುಕಾರಾಂ, ಬಿ.ನಾಗೇಂದ್ರ ಮತ್ತು ಅಲ್ಲಂ ವೀರಭದ್ರಪ್ಪ, ಎಂ.ಎಸ್.ಸೋಮಲಿಂಗಪ್ಪ, ಜೆ.ಎನ್.ಗಣೇಶ್, ಡಾ.ಚಂದ್ರಶೇಖರ ಬಿ.ಪಾಟೀಲ್, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಹೆಚ್.ಹನುಮಂತಪ್ಪ, ಮಹಾನಗರ ಪಾಲಿಕೆಯ ಮಹಾಪೌರರಾದ ಎಂ.ರಾಜೇಶ್ವರಿ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪಿ.ಪಾಲಣ್ಣ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ.
ಹೂವಿನಹಡಗಲಿಯ ಎಸ್.ಆರ್.ಎಂ.ಪಿ.ಪಿ.ಜಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಉಪನ್ಯಾಸಕರಾದ ಡಾ.ಗಾದೆಪ್ಪ ಅವರು ಮಹಾಮಾನವತಾವಾದಿ ಶ್ರೀ ಬಸವೇಶ್ವರ ಜಯಂತ್ಯೋತ್ಸವ ಕುರಿತು ವಿಶೇಷ ಉಪನ್ಯಾಸ ನೀಡುವರು.
ಮೇ 03ರಂದು ಸಂಜೆ 4.30ಕ್ಕೆ ಮೆರವಣಿಗೆಯು ಮುನಿಸಿಪಲ್ ಹೈಸ್ಕೂಲ್ ಮೈದಾನದಿಂದ ಗಡಿಗಿ ಚೆನ್ನಪ್ಪ ವೃತ್ತದ ಮೂಲಕ ಬೆಂಗಳೂರು ರಸ್ತೆಯ ಹಳೇ ಬ್ರೂಸ್‍ಪೇಟೆ ಪೊಲೀಸ್ ಠಾಣೆಯಿಂದ ತೇರುಬೀದಿಯ ಮೂಲಕ ಹೆಚ್.ಆರ್.ಗವಿಯಪ್ಪ ವೃತ್ತದವರೆಗೆ ತಲುಪಲಿದೆ.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ಹಾಗೂ ಸಮುದಾಯದ ಭಾಂದವರು ಉಪಸ್ಥಿತರಿರಲಿದ್ದಾರೆ.

LEAVE A REPLY

Please enter your comment!
Please enter your name here