ಕೋಟ್ಪಾ ಕಾಯ್ದೆ ಉಲ್ಲಂಘನೆ ವಿರುದ್ದ ದಾಳಿ

0
79

ಶಿವಮೊಗ್ಗ ಮೇ 09: ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಶಿವಮೊಗ್ಗ ನಗರದ ಜಯನಗರ ಪೊಲೀಸ್ ಸ್ಟೇಷನ್ ವ್ಯಾಪ್ತಿಯ ಲಕ್ಷ್ಮಿ ಗ್ಯಾಲಕ್ಸಿ ಸುತ್ತಲಿನ ಪ್ರದೇಶದಲ್ಲಿ ಮೇ 09 ರಂದು ಕೋಟ್ಪಾ(ಸಿಗರೇಟ್ ಮತ್ತು ಇತರೆ ತಂಬಾಕು ಉತ್ಪನ್ನಗಳ ಕಾಯ್ದೆ)ಕಾಯ್ದೆಯನ್ನು ಉಲ್ಲಂಘಿಸುವ ವ್ಯಕ್ತಿಗಳ ವಿರುದ್ದ ದಾಳಿ ಕೈಗೊಳ್ಳಲಾಯಿತು.

ಕಾಯ್ದೆಯಡಿ ಒಟ್ಟು 23 ಪ್ರಕರಣ ದಾಖಲಿಸಿ ರೂ. 4600/- ದಂಡ ಸಂಗ್ರಹಿಸಲಾಯಿತು. ದಾಳಿಯಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಚಂದ್ರಶೇಖರ್, ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಸಲಹೆಗಾರ ಹೇಮಂತರಾಜ್ ಅರಸ್, ಸಮಾಜ ಕಾರ್ಯಕರ್ತ ರವಿರಾಜ್, ಆರೋಗ್ಯ ಶಿಕ್ಷಣಾಧಿಕಾರಿ ಪ್ರತಿಮಾ, ಪಾಲಿಕೆ ಆರೋಗ್ಯ ನಿರೀಕ್ಷಕ ವಸಂತಕುಮಾರ್ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here