ಸಂಡೂರು: ಮೀನುಗಾರರ ಸಹಕಾರ ಸಂಘಗಳಿಂದ ಅರ್ಜಿ ಆಹ್ವಾನ

0
266

ಬಳ್ಳಾರಿ,ಮೇ.10: ಮೀನುಗಾರಿಕೆ ಇಲಾಖೆಯ ವತಿಯಿಂದ 2022-23ನೇ ಸಾಲಿನ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಮೀನುಗಾರಿಕೆ ಇಲಾಖಾ ಕೆರೆಗಳ ಮೀನು ಪಾಶುವಾರು ಹಕ್ಕನ್ನು 05 ವರ್ಷಗಳ ಕಾಲ ನೇರಗುತ್ತಿಗೆ ಮೂಲಕ ವಿಲೇವಾರಿ ಮಾಡಲು ಅರ್ಹ ಮೀನುಗಾರರ ಸಹಕಾರ ಸಂಘಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಡೂರು ಮೀನುಗಾರಿಕೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಸಕ್ತರು ಅರ್ಜಿಯನ್ನು ಮೇ 31ರೊಳಗಾಗಿ ಸಲ್ಲಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಮತ್ತು ನಮೂನೆಗಳಿಗಾಗಿ ಸಂಡೂರು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಬಂದು ಸಂಪರ್ಕಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here