ಜವುಕು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಪರಿಸರ ದಿನಾಚರಣೆ

0
220

ಬಳ್ಳಾರಿ/ಕಂಪ್ಲಿ:ಜೂನ್:007:- ತಾಲೂಕಿನ ಜವುಕು ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರೌಢ ಶಾಲೆಯಲ್ಲಿ ಪರಿಸರ ದಿನಾಚರಣೆಯನ್ನು ಆಚರಿಸಿ ಶಾಲೆಯ ಮುಖ್ಯಗುರುಗಳಾದ ಶ್ರೀಮತಿ ನಿಲೋಫರ್ ಜಹಾನ್ ಬೇಗಂ ಅವರು ಮಾತನಾಡಿ ಜೂನ್‌ 5 ರಂದು ವಿಶ್ವಾದ್ಯಂತ ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ವಿಶ್ವ ಪರಿಸರ ದಿನವು ವಿಶ್ವಾದ್ಯಂತ ಪರಿಸರದ ಬಗ್ಗೆ ಜಾಗೃತಿ ಮತ್ತು ನಮ್ಮ ಪರಿಸರದ ರಕ್ಷಣೆಗೆ ಉತ್ತೇಜಿಸಲು ಈ ದಿನವನ್ನು ಆಚರಿಸಲಾಗುತ್ತದೆ. ಜೀವಿಗಳ ಪೋಷಣೆಯಲ್ಲಿ ಪರಿಸರ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಪರಿಸರದ ಸಮೃದ್ಧಿ ಆರೋಗ್ಯಕರ ಜೀವನ ಮತ್ತು ಭೂಮಿಯ ಮೇಲಿನ ಪ್ರತಿಯೊಂದು ಜೀವಿಯ ಜೀವನದ ಅಸ್ತಿತ್ವಕ್ಕೆ ಕಾರಣವಾಗಿದೆ.

ಮಾನವ ಸೇರಿದಂತೆ ಇತರೆ ಪ್ರಾಣಿ, ಪಕ್ಷಿಗಳು, ಸೇರಿದಂತೆ ಪ್ರತಿಯೊಂದು ಜೀವ ಸಂಕುಲ ಆಹಾರ, ಗಾಳಿ, ನೀರು ಇತರೆ ಅಗತ್ಯತೆಗಳಿಗಾಗಿ ಪರಿಸರವನ್ನ ಅವಲಂಭಿಸಿದೆ ಎಂದರೆ ತಪ್ಪಾಗಲಾರದು. ಇದರೆ ಇತ್ತಿಚಿನ ದಿನಗಳಲ್ಲಿ ಮಾನವನು ಆಧುನಿಕ ಬದುಕಿನ ಗೀಳಿಗೆ ಬಿದ್ದು ಪರಿಸರವನ್ನು ನಾಶ ಮಾಡುತ್ತಿದ್ದಾನೆ. ಈಗ ಮಾನವನ ಈ ದುರಾಸೆಯಿಂದ ಗಾಳಿ, ನೀರು, ಮಣ್ಣು ಮುಂತಾದ ಪರಿಸರದ ಪ್ರತಿಯೊಂದು ಅಂಶವೂ ಕಲುಷಿತಗೊಂಡಿದೆ. ಮನುಷ್ಯ ತನ್ನ ಅಭಿವೃದ್ಧಿಗಾಗಿ ತನಗೆ ಅರಿವಿಲ್ಲದಂತೆ ಪರಿಸರವನ್ನು ಹಾಳು ಮಾಡುತ್ತಿದ್ದಾನೆ.

ಹೀಗಾಗಿ ಪ್ರತಿಯೊಬ್ಬರಲ್ಲೂ ಪರಿಸರದ ಬಗ್ಗೆ ಕಾಳಜಿ ಮೂಡಿಸುವ ಸಲುವಾಗಿ ಪ್ರತಿವರ್ಷ ಜೂನ್‌ 5 ರಂದು ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಪ್ರತಿ ವರ್ಷ ಬೇರೆ ಬೇರೆ ಧ್ಯೇಯವಾಕ್ಯದೊಂದಿಗೆ ಪರಿಸರ ದಿನವನ್ನು ಆಚರಿಸಲಾಗುತ್ತದೆ. ಇದರ ಮುಖ್ಯ ಉದ್ದೇಶ ಪರಿಸರದ ಬಗ್ಗೆ ಪ್ರತಿ ಮನುಷ್ಯನಲ್ಲೂ ಜಾಗೃತಿ ಮೂಡಿಸುವುದು ಮತ್ತು ಪರಿಸರವನ್ನು ಹಾಳು ಮಾಡುವುದನ್ನ ತಡೆಯುವುದಾಗಿದೆ‌ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮುಖ್ಯ ಗುರುಗಳಾದ ಶ್ರೀಮತಿ ನಿಲೋಫರ್ ಜಹಾನ್ ಬೇಗಂ ,ಸಹ ಶಿಕ್ಷಕರಾದ ಹೊಸಕೋಟೆ ಚಂದ್ರ ಶೇಖರ್ ಹಾಗೂ ಅತಿಥಿ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು ..

LEAVE A REPLY

Please enter your comment!
Please enter your name here