ಕೊಟ್ಟೂರು ಪೊಲೀಸ್ ಠಾಣೆ ಮಾದರಿಯಾಗಿ ಕಾರ್ಯನಿರ್ವಹಿಸಲಿ; ಸಚಿವೆ ಶಶಿಕಲಾ ಜೊಲ್ಲೆ

0
773

ಕೊಟ್ಟೂರು:ಜೂನ್:17:- ಸ್ವಾತಂತ್ರ್ಯ ಸಂಗ್ರಾಮದ ಕಾಲದಿಂದಲೂ ಕಾರ್ಯನಿರ್ವಹಿಸುತ್ತಿದ್ದ ಕೊಟ್ಟೂರು ಪೊಲೀಸ್ ಠಾಣೆ 75 ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಸಂದರ್ಭದಲ್ಲಿ ನೂತನ ಕಟ್ಟಡ ಭಾಗ್ಯ ಕಂಡಿರುವುದು ಸಮಯೋಚಿತವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಹಾಗೂ ಮುಜುರಾಯಿ ಇಲಾಖೆ ಸಚಿವರಾದ ಶಶಿಕಲಾ ಅಣ್ಣಾ ಸಾಹೇಬ್ ಜೊಲ್ಲೆ ಹೇಳಿದರು.

ಪಟ್ಟಣದ ಹರಪನಹಳ್ಳಿ ರಸ್ತೆಯಲ್ಲಿ ನಿರ್ಮಾಣವಾಗಿರುವ ಪೊಲೀಸ್ ಠಾಣೆ ಹಾಗೂ ಕೊಟ್ಟೂರು ವೃತ್ತ ಕಛೇರಿಯ ನೂತನ ಕಟ್ಟಡವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿ ಪಟ್ಟಣದ ಕೋಟೆ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪೊಲೀಸ್ ಠಾಣೆ ಶಿಥಿಲಗೊಂಡ ಕಾರಣ ಸಾರ್ವಜನಿಕರ ಹಾಗೂ ಸಂಘ ಸಂಸ್ಥೆಗಳ ಅನೇಕ ವರ್ಷಗಳ ಹೋರಾಟದ ಪ್ರತಿಫಲವಾಗಿ ಸುಸಜ್ಜಿತ ಕಟ್ಟಡ ಕಾಣುವಂತಾಯಿತು ಎಂದರು. ವಿಶಾಲವಾದ ಈ ಆವರಣದಲ್ಲಿ ಗಿಡ ಮರಗಳನ್ನು ಬೆಳೆಸಿ ಸುಂದರ ಪರಿಸರವನ್ನಾಗಿಸಿ ಜನಸ್ನೇಹಿ ಠಾಣೆಯಾಗಿ ಕಾರ್ಯನಿರ್ವಹಿಸುವಂತಾಗಲಿ ಎಂದು ಆಶಯ ವ್ಯಕ್ತಪಡಿಸಿದರು.

ಅಧ್ಯಕ್ಷತೆ ವಹಿಸಿದ್ದ ಹಗರಿಬೊಮ್ಮನಹಳ್ಳಿ ಕ್ಷೇತ್ರದ ಶಾಸಕ ಎಲ್.ಬಿ.ಪಿ.ಭೀಮನಾಯ್ಕ ಮಾತನಾಡಿ ನೂತನ ತಾಲ್ಲೂಕು ಕೇಂದ್ರಕ್ಕೆ ಅವಶ್ಯಕತೆ ಇರುವ ಕಛೇರಿಗಳನ್ನು ತೆರೆಯಲು ಜಿಲ್ಲಾ ಉಸ್ತುವಾರಿ ಸಚಿವರು ಮುಂದಾಗಬೇಕೆಂದರು.

ಸಂಸದ ವೈ.ದೇವೇಂದ್ರಪ್ಪ ಮಾತನಾಡಿ ಪ್ರಸಿದ್ಧ ಧಾರ್ಮಿಕ ಕೇಂದ್ರವಾಗಿರುವುದರಿಂದ ಮೂಲ ಸೌಕರ್ಯಗಳನ್ನು ಕಲ್ಪಿಸಲು ಮುಂದಾಗುವುದಾಗಿ ಭರವಸೆ ನೀಡಿದರು.

ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್ ಪಿ. ಮಾತನಾಡಿ ಮೂಲಸೌಕರ್ಯಗಳಿಗೆ ಖನಿಜ ನಿಧಿಯಿಂದ ಅನುದಾನ ನೀಡುವುದಾಗಿ ತಿಳಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್.ಕೆ.ಪ್ರಾಸ್ತಾವಿಕವಾಗಿ ಮಾತನಾಡಿದರು.

ಪಟ್ಟಣ ಪಂಚಾಯ್ತಿ ಅಧ್ಯಕ್ಷೆ ಭಾರತಿ ಸುಧಾಕರಗೌಡ ಪಾಟೀಲ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಕ ಅಧಿಕಾರಿ ಭೋಯಲ್ ಹರ್ಷಲ್ ನಾರಾಯಣ ರಾವ್ ,ಉಪವಿಭಾಗಾಧಿಕಾರಿ ಚಂದ್ರಶೇಖರಯ್ಯ, ತಹಶೀಲ್ದಾರ್ ಎಂ.ಕುಮಾರಸ್ವಾಮಿ, ಡಿ.ವೈ.ಎಸ್.ಪಿ. ಹರೀಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸಾಹಿತಿ ಕುಂ.ವೀರಭದ್ರಪ್ಪ, ಬಿಜೆಪಿ ಜಿಲ್ಲಾಘಟಕಾಧ್ಯಕ್ಷ ಪಿ.ಚನ್ನಬಸವನಗೌಡ, ಮುಖಂಡರಾದ ಎಂ.ಎಂ.ಜೆ. ಸ್ವರೂಪಾನಂದ, ಎಂ.ಎಂ.ಜೆ. ಹರ್ಷವರ್ಧನ್, ನಾಗರಕಟ್ಟೆ ರಾಜೇಂದ್ರಪ್ರಸಾದ್ ಮುಂತಾದವರು ಪಾಲ್ಗೊಂಡಿದ್ದರು.

ವರದಿ: ಶಿವರಾಜ್ ಕನ್ನಡಿಗ

LEAVE A REPLY

Please enter your comment!
Please enter your name here