ಕೊಟ್ಟೂರಿನಲ್ಲಿ ಕುಡಿಯುವ ನೀರಿಗೆ ಪರದಾಟ ಪ.ಪಂ.ಗೆ ಹಿಡಿಶಾಪ..!! ಜನರ ಜೀವಜಲ ಪೂರೈಕೆಗೆ ಕ್ರಮ ಕೈಗೊಳ್ಳಿ

0
222

ವಿಜಯನಗರ/ಕೊಟ್ಟೂರು: ಜ್ಜೂನ್: 20:-ಪಟ್ಟಣದಲ್ಲಿ ಕುಡಿಯುವ ನೀರಿಗೆ ಸಾರ್ವಜನಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಪಕ್ಕದಲ್ಲೇ ತುಂಗಭದ್ರಾ ಜಲಾಶಯವಿದ್ದರೂ ಸಹ ಯಾವುದೇ ಪ್ರಯೋಜನಕ್ಕೆ ಬಾರದೇ ಇರುವುದು ಚಿಂತಾಜನಕವಾಗಿದೆ.

ಪಟ್ಟಣ ಪಂಚಾಯಿತಿಯಿಂದ ಸರಬರಾಜಾಗುವ ನೀರು ಹೆಚ್ಚು ಕಡಿಮೆ 8-10 ದಿನಕ್ಕೊಮ್ಮೆ ಪೂರೈಕೆ ಮಾಡುತ್ತಿರುವುದರಿಂದ ಪಟ್ಟಣದ ಜನತೆ ಕಂಗಾಲಾಗಿದ್ದಾರೆ. ಪಟ್ಟಣದ ಕೊಟ್ಟೂರೇಶ್ವರ ದೇವಸ್ಥಾನ, ಬನಶಂಕರಿ ದೇವಸ್ಥಾನ, ನೇಕಾರ ಕಾಲೋನಿ ಹಾಗೂ ಸರ್ಕಾರಿ ಆಸ್ಪತ್ರೆಯ ಹಿಂಭಾಗದ ಸಾರ್ವಜನಿಕರು ನೀರಿನ ಬಗ್ಗೆ ಸಂಪರ್ಕಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ ಬೇಸತ್ತು ಸ್ಥಳೀಯ ಪಟ್ಟಣ ಪಂಚಾಯಿತಿಗೆ ಸಾರ್ವಜನಿಕರು ಹಿಡಿಶಾಪ ಹಾಕುತ್ತಿದ್ದಾರೆ.

ಪಟ್ಟಣದಲ್ಲಿ ಖಾಸಗಿ ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, 20 ಲೀ. ಗೆ 10 ರೂ. ನಂತೆ ಸಾರ್ವಜನಿಕರಿಂದ ವಸೂಲಿ ಮಾಡುತ್ತಿದ್ದಾರೆ. ಈ ವರ್ಷ ಮಳೆಯು ಸಹ ಹೆಚ್ಚಾಗಿ ಆಗಿರುವುದರಿಂದ ನೀರನ್ನು ಸರಬರಾಜು ಮಾಡಲು ಮೀನಾಮೇಷ ಎಣಿಸುತ್ತಿರುವುದು ಏಕೆ ಎಂದು ತಿಳಿಯುತ್ತಿಲ್ಲ. ಇದರ ಬಗ್ಗೆ ಸ್ಥಳೀಯ ಆಡಳಿತವನ್ನು ಕ್ರಮ ಕೈಗೊಳ್ಳುವಂತೆ ವಿನಂತಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ನೀರು ಮನುಷ್ಯನ ಜೀವನಕ್ಕೆ ನೀರು ಜೀವಜಲವಾಗಿದ್ದು, ಅತ್ಯವಶ್ಯಕವಾಗಿ ಬೇಕಾಗಿರುವುದರಿಂದ ಕ್ಷೇತ್ರದ ಶಾಸಕರು ಇತ್ತ ಕಡೆ ಗಮನ ಹರಿಸಿ ಪಟ್ಟಣದ ಜನತೆಯ ಜೀವಜಲದ ಸಮಸ್ಯೆಯನ್ನು ಬಗೆಹರಿಸಲು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಪಟ್ಟಣದ ಜನತೆಗೆ ಕುಡಿಯುವ ನೀರಿನ ಸಮಸ್ಯೆಯನ್ನು ಕೂಡಲೇ ಅಲ್ಲಿರುವ ಅಧಿಕಾರಿಗಳಿಗೆ, ಸೂಚಿಸಿ ಬಗೆಹರಿಸಲಾಗುವುದು. ಶುದ್ಧ ನೀರಿನ ಘಟಕಗಳನ್ನು ಸರಿಪಡಿಸಲು ಗುತ್ತಿಗೆದಾರರಿಗೆ ತಿಳಿಸಿ ಅವುಗಳ ಸಮಸ್ಯೆ ಬಗೆಹರಿಯದಿದ್ದಲ್ಲಿ ಅವರುಗಳಿಗೆ ನೋಟೀಸ್ ನೀಡಿ ಸರಿಪಡಿಸಲು ಕ್ರಮ ಜರುಗಿಸಲಾಗುವುದು.
-ಅನಿರುದ್ಧ ಶ್ರವಣ್
ಜಿಲ್ಲಾಧಿಕಾರಿ,ವಿಜಯನಗರ

ಕೊಟ್ಟೂರಿನಲ್ಲಿ ನೀರಿನ ಸಮಸ್ಯೆ ಇರುವುದು ನಿಜ. ಇದರ ಬಗ್ಗೆ ಸ್ಥಳೀಯ ಆಡಳಿತಕ್ಕೆ ಮನವಿ ಮಾಡಿದರೂ ಸಹ ಯಾವುದೇ ಪ್ರಯೋಜನವಾಗಿಲ್ಲ. ಈ ಬಗ್ಗೆ ಪಟ್ಟಣ ಪಂಚಾಯಿತಿ ಕೂಡಲೇ ಜನರ ಜೀವಜಲ ಪೂರೈಕೆಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸುತ್ತೇನೆ.
-ಎಂ.ಶ್ರೀನಿವಾಸ್
ಕ.ರ.ವೇ.ಕೊಟ್ಟೂರು ತಾಲೂಕು ಅಧ್ಯಕ್ಷ

ವರದಿ: ಶಿವರಾಜ್ ಕನ್ನಡಿಗ

LEAVE A REPLY

Please enter your comment!
Please enter your name here