ಕರ್ನಾಟಕ ರಾಜ್ಯದಲ್ಲಿ ಬಿಜೆಪಿಯಿಂದ ದುರಾಡಳಿತ:ಪ್ರಕಾಶ್ ಖಂಡ್ರೆ

0
59

ಸಂಡೂರು:ಜೂನ್:29:-ರಾಜ್ಯದಲ್ಲಿ ಬಿಜೆಪಿಯಿಂದ ದುರಾಡಳಿತ ಹೆಚ್ಚಾಗಿದೆ, ಬಿಜೆಪಿ ಒಡೆದಾಳುವ ನೀತಿ ಅನುಸರಿಸಿದ್ರೆ ಕಾಂಗ್ರೇಸ್ ಒಂದುಗೂಡಿಸುವ ಕೆಲಸ ಮಾಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಪ್ರಕಾಶ್ ಖಂಡ್ರೆ ಹೇಳಿದರು.

ಸಂಡೂರಿನ ರೆಸಾರ್ಟ್ ನಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಅಖಂಡ ಬಳ್ಳಾರಿ ಜಿಲ್ಲಾ ನವಚಿಂತನ ಶಿಭಿರದಲ್ಲಿ ಬಾಗಿಯಾದ ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ರಾಜಸ್ಥಾನದ ಉದಯಪುರದಲ್ಲಿ ನಡೆದ ನವ ಸಂಕಲ್ಪ ಶಿಬಿರದಂತೆ ಜಿಲ್ಲಾ ಮಟ್ಟದಲ್ಲೂ ಕಾರ್ಯಕ್ರಮ ನಡೆಯುತ್ತಿದೆ.ಪಕ್ಷದ ಡಿಜಿಟಲ್ ಸದಸ್ಯತ್ವ ನಡೆದಿದೆ ಎಂದು ಅವರು ಹೇಳಿದರು

ದೇಶದಲ್ಲಿಯೇ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಒಂದು ಕೋಟಿ ಜನರು ಸದಸ್ಯತ್ವ ಪಡೆದಿದ್ದಾರೆ ಎಂದು ಹೇಳಿದ ಪ್ರಕಾಶ ಖಂಡ್ರೆ ಜಿಲ್ಲಾ ತಾಲ್ಲೂಕು ಬ್ಲಾಕ್ ಅಧ್ಯಕ್ಷರ ನೇಮಕ ಶೀಘ್ರದಲ್ಲೇ ನಡೆಯಲಿದೆ ಎಂದು ತಿಳಿಸಿದರು

ಬಿಜೆಪಿ ಸುಳ್ಳನ್ನೇ ಸತ್ಯವೆಂದು ನಂಬಿಸಿ ಯುವಕರಿಗೆ ದಾರಿ ತಪ್ಪಿಸುತ್ತಿದೆ, ದೇಶದಲ್ಲಿ ಸೈನಿಕರನ್ನ ಬಿಜೆಪಿ ಸರ್ಕಾರ ದುರ್ಭಲಗೊಳಿಸುತ್ತಿದೆ.ಕರ್ನಾಟಕ ರಾಜ್ಯದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದೆ. ಕಾಮಗಾರಿ, ನೇಮಕಾತಿಯಲ್ಲೂ ಭ್ರಷ್ಟಾಚಾರ ಇದೆ. ಸಚಿವರ ಮೇಲೆ ಗಂಭೀರ ಆರೋಪಗಳಿವೆ ಎಂದು ಅವರು ಹೇಳಿದರು.

ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯದ ಮೇಲೆ ನಿರಂತರ ಅನ್ಯಾಯ ಮಾಡುತ್ತಿದೆ, ಪಠ್ಯಪುಸ್ತಕ ಪರಿಷ್ಕರಣೆಯಲ್ಲಿ ಮಹಾ ಪುರುಷರಿಗೆ ಅನ್ಯಾಯ ಮಾಡುತ್ತಿದೆ ಎಂದು ಹೇಳಿದ ಪ್ರಕಾಶ್ ಖಂಡ್ರೆ, ಮಕ್ಕಳಲ್ಲಿ ಜಾತಿಯ ವಿಷ ಬೀಜ ಬಿತ್ತುವ ಕೆಲಸ ಬಿಜೆಪಿ ಮಾಡಿದೆ ಎಂದು ಹೇಳಿದರು.

ಕರ್ನಾಟಕ ಮಾದರಿಯಲ್ಲಿ ಮಹಾರಾಷ್ಟ್ರದ ಶಾಸಕರಿಗೆ 50 ಕೋಟಿ ನೀಡುತ್ತಿದೆ ಎಂದು ಆರೋಪಿಸಿದ ಪ್ರಕಾಶ್ ಖಂಡ್ರೆ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಸರ್ಕಾರವನ್ನು ಬೀಳಿಸುವ ಯತ್ನ ನಡೆಯುತ್ತಿದೆ, ರಾಜ್ಯದಲ್ಲಿ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತೇವೆ ಎಂದು ಹೇಳಿದರು.

-ವರದಿ:-ಕೆ.ಪಿ.ಕಾವ್ಯ

LEAVE A REPLY

Please enter your comment!
Please enter your name here