ಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಹಾಗೂ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ ಜಾಗೃತಿ ಜಾಥಾ, ವ್ಯಸನಿಯು ಆರಂಭಿಕ ಹಂತದಲ್ಲಿಯೇ ಚಿಕಿತ್ಸೆ ಹೊಂದಬೇಕು: ಡಿಎಚ್‍ಒ ಡಾ.ಜನಾರ್ಧನ

0
40

ಬಳ್ಳಾರಿ,ಜು.01 : ವ್ಯಕ್ತಿಯು ಪದೇ ಪದೇ ಬರುವ ತೀವ್ರತರವಾದ ಸಂಕಷ್ಟಗಳಗೆ ಸಿಲುಕಿದಾಗ ಹಾಗೂ ಮಾನಸಿಕ ಒತ್ತಡ ಹೆಚ್ಚಾದಾಗ ತನ್ನಲ್ಲಿರುವ ದುಃಖವನ್ನು ಮರೆಯಲು ಹಾಗೂ ಮನೋರಂಜನೆಗಾಗಿ ಮಾದಕ ವಸ್ತುಗಳಿಗೆ ವ್ಯಸನಿಯಾಗುತ್ತಾನೆ. ಆದ್ದರಿಂದ ಪ್ರಾರಂಭದಲ್ಲಿಯೇ ಕುಟುಂಬ ಸದಸ್ಯರ ನೆರವಿನಿಂದ ಚಿಕಿತ್ಸೆ ಪಡೆದರೆ ಗುಣಮುಖರಾಗಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಹೆಚ್.ಎಲ್.ಜನಾರ್ಧನ್ ಅವರು ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ ಮತ್ತು ಮೈತ್ರಿ ಮದ್ಯ ವ್ಯಸನ ಮುಕ್ತಿ ಕೇಂದ್ರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಅಂತರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಹಾಗೂ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ ನಿಮಿತ್ತ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.
ಸಾಮಾನ್ಯವಾಗಿ ಮಾದಕ ವ್ಯಸನಿಗಳು ಚಿಕಿತ್ಸೆ ಪಡೆಯದಿದ್ದರೆ ಸುಧಾರಣೆ ಕಷ್ಟವಾಗಬಹುದು. ಮನೋ ವೈದ್ಯರ ಬಳಿ ತೋರಿಸಿಕೊಂಡು ಹಾಗೂ ಆಪ್ತ ಸಮಾಲೋಚನೆ ಪಡೆದರೆ ಬೇಗ ವ್ಯಸನದಿಂದÀ ಮುಕ್ತಿ ಹೊಂದಬಹುದು ಎಂದು ಹೇಳಿದರು.
ಈ ಚಿಕಿತ್ಸೆ ಪಡೆಯಲು ದೂರದ ಊರಿಗೆ ಹೋಗುವ ಅವಶ್ಯಕತೆ ಇಲ್ಲ ಈಗ ಪ್ರತಿ ಮಂಗಳವಾರ ಎಲ್ಲಾ ತಾಲೂಕಿನ ಆಸ್ಪತ್ರೆಯಲ್ಲಿ ಮನೋವೈದ್ಯರು ಮನೋರೋಗಿಗಳಿಗೆ ಹಾಗೂ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದು ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ.ವೀರೇಂದ್ರ ಕುಮಾರ್ ರವರು ಮಾತನಾಡಿ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗದಿಂದ ಮನೋಚೈತನ್ಯ ಕಾರ್ಯಕ್ರಮದಡಿಯಲ್ಲಿ ಪ್ರತಿ ಮಂಗಳವಾರ ಎಲ್ಲ ತಾಲೂಕು ಕೇಂದ್ರಗಳಲ್ಲಿ ಉಚಿತ ಆರೋಗ್ಯ ಶಿಬಿರÀ ತಪಾಸಣೆ ಏರ್ಪಡಿಸಿ ರೋಗಿಗಳಿಗೆ ಆತ್ಮ ಸ್ಥೈರ್ಯ ತುಂಬುವುದರ ಜೊತೆಗೆ ಚಿಕಿತ್ಸೆ ನೀಡಲಾಗುತ್ತದೆ ಹಾಗೂ 2021-22ನೇ ಸಾಲಿನಲ್ಲಿ 667 ಮಾದಕ ವ್ಯಸನಿಗಳು ಚಿಕಿತ್ಸೆ ಪಡೆದಿದ್ದಾರೆ ಎಂದು ಅವರು ತಿಳಿಸಿದರು.
ಜಾಥಾವು ಜಿಲ್ಲಾ ಆಸ್ಪತ್ರೆ ಆವರಣದಿಂದ ಆರಂಭವಾಗಿ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜಾಗೃತಿ ಮೂಡಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ.ಎನ್.ಬಸರಡ್ಡಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಪೂರ್ಣಿಮ.ಎಸ್ ಕಟ್ಟಿಮನಿ, ತಾಲೂಕು ಆರೋಗ್ಯ ಅಧಿಕಾರಿ ಡಾ.ಮೋಹನ್ ಕುಮಾರಿ, ಮೈತ್ರಿ ಸಂಸ್ಥೆಯ ಮುಖ್ಯಸ್ಥರಾದ ಡಾ.ಉದಯ ಕುಮಾರ್ ಪೆಥಾಲಜಿಸ್ಟ್, ಕುಮಾರ ಸ್ವಾಮಿ, ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿ ಈಶ್ವರ್ ದಾಸಪ್ಪನವರ್, ಜಿಲ್ಲಾ ಆಶಾ ಮೇಲ್ವಿಚಾರಕಿ ನೇತ್ರಾವತಿ, ತಾಲ್ಲೂಕು ಆರೋಗ್ಯ ಶಿಕ್ಷಣ ಅಧಿಕಾರಿಗಳಾದ ಶಾಂತಮ್ಮ ಹಾಗೂ ಶಾಂತಕುಮಾರ್.ಹೆಚ್, ಮಾನಪ್ಪ, ತಂಗಮ್ಮ , ಭೋಜರಾಜ್, ರಂಜಿತ.ಜಿ, ಅಬ್ದುಲ್ಲಾ.ಡಿ, ಸ್ವಾತಿ, ಕವಿತ, ಕುಮಾರ್ ಸ್ವಾಮಿ, ನಿರಂಜನ, ರಮೇಶ್ ಬಾಬು, ರಾಮಣ್ಣ ಸೇರಿದಂತೆ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ತರಬೇತಿ ಕೇಂದ್ರದ ಪ್ರಶಿಕ್ಷಣಾರ್ಥಿಗಳು, ಆಶಾ ಕಾರ್ಯೆಕರ್ತರು ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here