ಜುಲೈ 15 ರಂದು ರಾಜ್ಯ ಮಟ್ಟದ ವಿಶ್ವಕರ್ಮ ಸಮಾವೇಶ: ವೀರಭದ್ರಪ್ಪ ಹಂಚಿನಾಳ

0
79

ವಿಶ್ವಕರ್ಮ ಸಮಾಜವನ್ನು ಪ.ಪಂಗಡಕ್ಕೆ ಸೇರ್ಪಡೆ ಮಾಡಬೇಕು,ವಿಶ್ವಕರ್ಮ ಅಭಿವೃದ್ಧಿ ನಿಗಮದ ಸಾಲ ಮನ್ನಾ ಮಾಡಬೇಕು ಹಾಗೂ ಇನ್ನಿತರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಜುಲೈ 15ರಂದು ವಿಶ್ವಕರ್ಮ ಸಮಾಜದ ಬೃಹತ್ ಸಮಾವೇಶ ನಡೆಯಲಿದೆ ಎಂದು ಸಿಂಧನೂರು ತಾಲೂಕಾದ್ಯಕ್ಷರಾದ ವೀರಭದ್ರಪ್ಪ ಹಂಚಿನಾಳ ತಿಳಿಸಿದರು.

ಕರ್ನಾಟಕದಾದ್ಯಂತ 45ಲಕ್ಷಕ್ಕಿಂತ ಹೆಚ್ಚು ಜನರಿರುವ ವಿಶ್ವಕರ್ಮ ಸಮಾಜ ಅತ್ಯಂತ ಹಿಂದುಳಿದ ಸಮಾಜ ಈ ಸಮಾಜಕ್ಕೆ ರಾಜ್ಯಮಟ್ಟದ ನಾಯಕರಾದ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ರಾಜ್ಯಾದ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಶ್ರೀ ಕೆ.ಪಿ.ನಂಜುಂಡಿ ಅವರು ಸುಮಾರು20 ವರ್ಷಗಳಿಂದ ಸತತವಾಗಿ ಹೋರಾಟಮಾಡಿ ವಿಶ್ವಕರ್ಮ ಸಮಾಜಕ್ಕೆ ಸರ್ಕಾರದ ವತಿಯಿಂದ ಆಚರಿಸಲು ವಿಶ್ವಕರ್ಮ ಜಯಂತಿ, ವಿಶ್ವಕರ್ಮ ಅಭಿವೃದ್ಧಿ ನಿಗಮ, ಜಕಣಾಚಾರಿ ಸಂಸ್ಕರಣೆ ದಿನಾಚರಣೆ ಈ ಮೂರು ಕೊಡುಗೆಗಳನ್ನು ನೀಡಿದ್ದಾರೆ.ಅವರು ವಿಶ್ವಕರ್ಮ ಸಮಾಜವನ್ನು ಪ.ಪಂಗಡಕ್ಕೆ ಸೇರಿಸಲು ಮತ್ತು ವಿಶ್ವಕರ್ಮ ಅಭಿವೃದ್ಧಿ ನಿಗಮದ ಸಾಲಮನ್ನಾ ಮಾಡುವಂತೆ,ಅಭಿವೃದ್ಧಿ ನಿಗಮಕ್ಕೆ ಹೆಚ್ಚಿನ ಅನುದಾನ ನೀಡಲು,ಬೇಲೂರಿನ ಚನ್ನಕೇಶವ ದೇವಾಲಯದಲ್ಲಿ ಜಕಣಾಚಾರಿ ಮೂರ್ತಿ ಪ್ರತಿಷ್ಠಾಪಿಸುವಂತೆ ಹಾಗೂ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಲು ಕೆ.ಪಿ.ನಂಜುಂಡಿ ವಿಶ್ವಕರ್ಮ ಅವರ ನೇತೃತ್ವದಲ್ಲಿ ಇದೇ ದಿನಾಂಕ 15ರಂದು ಬೆಂಗಳೂರಿನ ಅರಮನೆಯ ಮೈದಾನದಲ್ಲಿ ವಿಶ್ವಕರ್ಮ ಮುಖಂಡರ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ.ಬಿಜೆಪಿ ರಾಜ್ಯದ್ಯಕ್ಷರಾದ ನಳೀನಕುಮಾರ ಕಟೀಲ್ ಅವರು ಹಾಗೂ ವಿವಿಧ ರಾಜ್ಯಗಳ ವಿಶ್ವಕರ್ಮ ಮುಖಂಡರುಗಳು ಭಾಗವಹಿಸಲಿದ್ದಾರೆ.ಹಾಗೂ ರಾಜ್ಯದ ವಿವಿಧ ಜಿಲ್ಲೆಗಳಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ವಿಶ್ವಕರ್ಮ ಮುಖಂಡರುಗಳು ಭಾಗವಹಿಸಲಿದ್ದು,ಸಿಂಧನೂರು ತಾಲೂಕಿನಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಯಶಸ್ವಿಗೊಳಿಸಬೇಕು ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವರದಿ:ಅವಿನಾಶ್ ದೇಶಪಾಂಡೆ

LEAVE A REPLY

Please enter your comment!
Please enter your name here