ಬಳ್ಳಾರಿಯಲ್ಲಿ(ಡಯಟ್) ವಾಣಿಜ್ಯ ಪರೀಕ್ಷೆಗಳು ಜು.18ರಿಂದ 30ರವರೆಗೆ: ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ. ನಿರ್ಬಂಧ ವಿಧಿಸಿ ಡಿಸಿ ಮಾಲಪಾಟಿ ಅದೇಶ

0
116

ಬಳ್ಳಾರಿ,ಜು.18: ಬಳ್ಳಾರಿ ಜಿಲ್ಲೆಯಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ (ಡಯಟ್) ವಾಣಿಜ್ಯ ಪರೀಕ್ಷೆಗಳು ಜು.18ರಿಂದ ಆರಂಭವಾಗಿದ್ದು,ಜು.30ರವರೆಗೆ ನಡೆಯಲಿವೆ. ಈ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣವನ್ನು ನಿಬರ್ಂಧಿತ ಪ್ರದೇಶ ಎಂದು ಘೋಷಿಸಿ ಜಿಲ್ಲಾದಂಡಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿ ಪವನ್‍ಕುಮಾರ್ ಮಾಲಪಾಟಿ ಅವರು ಆದೇಶವನ್ನು ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ವಾಣಿಜ್ಯ ಪರೀಕ್ಷೆಗಳು ಜು.18ರಿಂದ ಜು.30ರವರೆಗೆ ನಡೆಯಲಿದ್ದು, ಪರೀಕ್ಷಾ ಸಮಯದಲ್ಲಿ ಪರೀಕ್ಷಾ ಕೇಂದ್ರಗಳೆಂದು ನಿಗದಿಪಡಿಸಲ್ಪಟ್ಟ ಕಟ್ಟಡಗಳ ಸುತ್ತಲೂ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಹಾಗೂ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಮತ್ತು ಸದರಿ ಪರೀಕ್ಷೆಯಲ್ಲಿ ನಡೆಯಬಹುದಾದ ಅವ್ಯವಹಾರಗಳನ್ನು ತಡೆಗಟ್ಟಲು ಪರೀಕ್ಷಾ ಕೇಂದ್ರಗಳ ಸುತ್ತಲೂ 200ಮೀ ಆವರಣವನ್ನು ನಿಬರ್ಂಧಿತ ಪ್ರದೇಶವೆಂದು ಹಾಗೂ ಆಯಾ ಪರೀಕ್ಷಾ ಕೇಂದ್ರಗಳ ಸುತ್ತಮುತ್ತನಲ್ಲಿರುವ ಜೆರಾಕ್ಸ್ ಸೆಂಟರ್ ಮತ್ತು ಇಂಟರ್‍ನೆಟ್ ಸೆಂಟರ್‍ಗಳು ಬೆಳಗ್ಗೆ 09ರಿಂದ ಸಂಜೆ 05.30ರವರೆಗೆ ಕಾರ್ಯನಿರ್ವಹಿಸದಂತೆ ಪ್ರತಿಬಂಧಕ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ನಿಬರ್ಂಧಿತ ಪ್ರದೇಶದಲ್ಲಿ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಲಾಗಿದೆ ಹಾಗೂ ಪರೀಕ್ಷೆಗಳ ಮೇಲ್ವಿಚಾರಣೆ ಕಾರ್ಯ ನಿರ್ವಹಿಸುವ ಸಿಬ್ಬಂದಿಯವರೆಗೆ ಅನ್ವಯಿಸುವುದಿಲ್ಲ ಎಂದು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here